ಕೌಟುಂಬಿಕ ಕಲಹ; ಒಂದೇ ಕುಟುಂಬದ ನಾಲ್ವರಿಂದ ಆತ್ಮಹತ್ಯೆ ಯತ್ನ
ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹದಿಂದ ಬೇಸತ್ತು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಇಸ್ಲಾಂಪುರದಲ್ಲಿ ಶನಿವಾರ ನಡೆದಿದೆ. ನಗರದ ಗಂಗನಮಿದ್ದೆ ರಸ್ತೆ ಸಮೀಪದ ಇಸ್ಲಾಂಪುರದ ನಿವಾಸಿಗಳಾದ ತಾಜುದ್ದೀನ್, ಶಹೀದಾ, ರೇಷ್ಮಾ, ಶಬನಾ ಆತ್ಮಹತ್ಯೆಗೆ ಯತ್ನಿಸಿದವರು. ಕಳೆದ ಕೆಲ ದಿನಗಳಿಂದಲೂ ಕಾಡುತ್ತಿದ್ದ ಕೌಟುಂಬಿಕದ ಕಲಹಕ್ಕೆ ಬೇಸತ್ತ ಇವರು ಶನಿವಾರ ತಮ್ಮ ಮನೆಯಲ್ಲಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ವಿಷ ಕುಡಿದು ಒದ್ದಾಡುತ್ತಿರುವುದನ್ನು ನೆರೆಹೊರೆ ಮನೆಯವರು ಕಂಡು ತಕ್ಷಣ ಸಮೀಪದ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ಅಸ್ವಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದ್ದು, ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮದುವೆ ಮಾಡಿಕೊಂಡು ಬೆಂಗಳೂರಿಗೆ ಹೋದ ತಮ್ಮ ತಂಗಿಯ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗಿ ಗಲಾಟೆಗಳು ನಡೆಯುತ್ತಿದ್ದು ಇಲ್ಲಿಗೆ ದೂರು ಕೇಳಿ ಬರುತ್ತಿತ್ತು. ಇದರಿಂದ ತಮ್ಮ ತಂಗಿಯ ಕುಟುಂಬ ಹಾಳಾಗುತ್ತದೆ ಎಂದು ಬೇಸರಗೊಂಡಿದ್ದೇ ಈ ನಾಲ್ವರು ಆತ್ಮಹತ್ಯೆಗೆ ಯತ್ನಿಸಲು ಕಾರಣ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಆದರೆ, ನಿಖರವಾದ ಕಾರಣ ಗೊತ್ತಾಗಿಲ್ಲ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

