ಕೋಲಾರ

ಕಾಲುಬಾಯಿ ಜ್ವರ; ದನಗಳ ಸಂತೆ ರದ್ದು

Published On :

ಚಿಂತಾಮಣಿ: ಜಾನುವಾರುಗಳಿಗೆ ಕಾಲುಬಾಯಿ ಜ್ವರ ಹರಡದಂತೆ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಭಾನುವಾರ ದನಗಳ ಸಂತೆ ಸೇರದಂತೆ ಪೊಲೀಸರು ಜನರನ್ನು ಹಿಂತಿರುಗಿ ಕಳುಹಿಸುವಲ್ಲಿ ಮುಂದಾದರು.
ತಾಲ್ಲೂಕಿನ ವ್ಯಾಪ್ತಿಯಲ್ಲಿ ಕಾಲುಬಾಯಿ ಜ್ವರದಿಂದ ಜಾನುವಾರುಗಳು ಮೃತ ಪಟ್ಟಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಭಾನುವಾರ ನಡೆಯುವ ದನಗಳ ಸಂತೆಯನ್ನು ನಡೆಯದಂತೆ ಸೂಚಿಸಿದರು. ರೈತರು ಮಾಹಿತಿ ಕೊರತೆಯಿಂದ ದನಕರುಗಳನ್ನು ಹೊಡೆದುಕೊಂಡು ಬಂದಿದ್ದು, ಪೊಲೀಸರು ತೆರವುಗೊಳಿಸಲು ಮುಂದಾದಾಗ ಹಲವು ರೈತರು ಹಾಗೂ ದಲ್ಲಾಳಿಗಳು ವಿರೋಧ ವ್ಯಕ್ತಪಡಿಸಿದರು.
ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತರಿಗೆ ಮಾಹಿತಿ ನೀಡದಿರುವುದರಿಂದ ಬಂದ ದಾರಿಗೆ ಸುಂಕವಿಲ್ಲದಂತೆ ಹಿಂತಿರುಗಿದರು.
ಬೀದಿ ನಾಯಿಗಳ ರೌದ್ರಾವತಾರ: ತಾಲೂಕಿನ ಚಿಲಕಲನೇರ್ಪು ಗ್ರಾಮದಲ್ಲಿ ಕಳೆದ ಎರಡು ಮೂರು ದಿನಗಳಿಂದ ಬೀದಿ ನಾಯಿಗಳ ಕ್ರೌರ್ಯಕ್ಕೆ 33 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ್ದು, ನಾಯಿಗಳ ಹಾವಳಿಗೆ ಕಡಿವಾಣ ಹಾಕಲು ಸ್ಥಳೀಯ ಗ್ರಾಪಂ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಗ್ರಾಮದ ಕಾಲೋನಿಯ ನರಸಿಂಹಪ್ಪಗೆ ಸೇರಿದ 9 ಕುರಿಗಳು, ಡಿಲ್ಲಿ ವೆಂಕಟರವಣಪ್ಪಗೆ ಸೇರಿದ 2, ಪಿಲ್ಲ ರಾಮನ್ನಗಾರಿ ಬೈಯನ್ನ ಎಂಬವರಿಗೆ ಸೇರಿದ 20, ಟಿಎಪಿಸಿಎಂಎಸ್ ಮಾರಾಟ ಗುಮಾಸ್ತನಿಗೆ ಸೇರಿದ 2 ಕುರಿಗಳು ಸಾವನ್ನಪ್ಪಿದ್ದರೂ ರೈತರಿಗೆ ಪರಿಹಾರ ಕಲ್ಪಿಸಿಕೊಡುವಲ್ಲಿ ಅಧಿಕಾರಿಗಳು ವಿಫಲಗೊಂಡಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ರಕ್ತದ ರುಚಿ ಕಂಡ ಬೀದಿ ನಾಯಿಗಳು ತಿರುಗಾಡುತ್ತಿರುವುದರಿಂದ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಇದರಿಂದ ಮಕ್ಕಳು, ವೃದ್ಧರು ಒಬ್ಬಂಟಿಯಾಗಿ ಓಡಾಡಲು ತೊಂದರೆಯಾಗಿದೆ. ಇನ್ನು ಮುಂದಾದರೂ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇತ್ತ ಗಮನ ಹರಿಸದೆ ಹೋದಲ್ಲಿ ಗ್ರಾಪಂಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದಾಗಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.