ಬೀದರ್ ಜಿಲ್ಲಾಧಿಕಾರಿ ಜಾಫರ್ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ
ಚಿಕ್ಕಬಳ್ಳಾಪುರ: ಫೇಸ್ ಬುಕ್ ಖಾತೆಯಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ರಾಮ ಸೀತಾ ಮಾತೆಯನ್ನು ಅವಹೇಳನಕಾರಿಯಾಗಿ ಬಿಂಬಿಸಿರುವ ಬೀದರ್ ಜಿಲ್ಲಾಧಿಕಾರಿ ಪಿ.ಸಿ. ಜಾಫರ್ ಅವರನ್ನು ಕೂಡಲೇ ಅಮಾನತ್ ಮಾಡಬೇಕೆಂದು ಆಗ್ರಹಿಸಿ ಬಿಜೆಪಿ ನಗರ ಘಟಕ ಯುವಮೋರ್ಚಾ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಳಿಕ ಉಪವಿಭಾಗಾಧಿಕಾರಿ ಕಚೇರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ನಗರದ ಪ್ರವಾಸಿ ಮಂದಿರದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಮೋರ್ಚಾದ ಕಾರ್ಯಕರ್ತರು ಪ್ರಮುಖ ರಸ್ತೆಯಲ್ಲಿ ಸಂಚರಿಸಿ ಡಿಸಿ ಪಿ.ಸಿ. ಜಾಫರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಾರ್ವಜನಿಕ ಕ್ಷೇತ್ರದ ಸೇವೆಯಲ್ಲಿ ಉನ್ನತ ಸ್ಥಾನದಲ್ಲಿರುವ ಜಿಲ್ಲಾಧಿಕಾರಿ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಹಿಂದೂಗಳ ಆರಾಧ್ಯ ದೈವ ಶ್ರೀರಾಮ ಹಾಗೂ ಸೀತಾ ಮಾತೆ ಕಾಡಿಗೆ ವನವಾಸ ತೆರಳಿದ್ದು ಮೋಜಿಗಾಗಿ ಎಂದು ಹಾಗೂ ಡ್ಯೂಡ್ ಹಾಗೂ ಬೇಬ್ ಎಂದು ತನ್ನ ಫೇಸ್ ಬುಕ್ ಖಾತೆಯಲ್ಲಿ ಅವಹೇಳನಕಾರಿಯಾಗಿ ಬರೆದುಕೊಂಡಿರುವುದನ್ನು ಸರ್ಕಾರ ಲಘುವಾಗಿ ಪರಿಗಣಿಸಬಾರದು. ಸಾಮಾಜಿಕ ಜಾಲದ ಚಟುವಟಿಕೆಯನ್ನು ಉಪಯೋಗಿಸಿಕೊಂಡು ಸಮಾಜಕ್ಕೆ ಉತ್ತಮ ಸಂದೇಶವನ್ನು ತಲುಪಿಸಬೇಕಾದ ಬದಲು ದುರ್ವತನೆಯಿಂದ ಹಿಂದೂ ದೇವರ ಬಗ್ಗೆ ಅವಹೇಳನಕಾರಿ ನೀಡಿರುವ ಜಿಲ್ಲಾಧಿಕಾರಿ ಜಾಫರ್ ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಉಪವಿಭಾಗಾಧಿಕಾರಿ ಕಚೇರಿ ವ್ಯವಸ್ಥಾಪಕರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಮಿಟ್ಟಹಳ್ಳಿ ಮಂಜುನಾಥ್, ಕಾರ್ಯದರ್ಶಿಗಳಾದ ಕಿರಣ್ ಕುಮಾರ್, ನವೀನ್ ಕುಮಾರ್, ಪ್ರದೀಪ್, ನಾರಾಯಣಸ್ವಾಮಿ, ಮೋರ್ಚಾದ ತಾಲೂಕು ಅಧ್ಯಕ್ಷ ಶ್ರೀನಿವಾಸ್, ನಗರ ಅಧ್ಯಕ್ಷ ಭರತ್, ಕಾರ್ಯದರ್ಶಿ ಜಿ.ಕೆ. ಗಜೇಂದ್ರ, ಶಶಿಕಾಂತ್. ಶಿವಕುಮಾರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

