ಕೋಲಾರ

'ಶೌಚಾಲಯ ಕಡ್ಡಾಯ ನಿರ್ಮಿಸಿಕೊಳ್ಳಿ'

Published On :

ಕ.ಪ್ರ.ವಾರ್ತೆ   ಚಿಕ್ಕಬಳ್ಳಾಪುರ   ನ. 10
ಬಯಲು ಶೌಚದಿಂದ ನೈರ್ಮಲ್ಯ ಹದಗೆಟ್ಟು ಸಾಂಕ್ರಾಮಿಕ ಕಾಯಿಲೆಗಳು ಅನಾರೋಗ್ಯಕರ ವಾತಾವರಣವನ್ನು ನಿರ್ಮಾಣ ಮಾಡುತ್ತಿದೆ. ಇದರಿಂದ ಶೌಚಾಲಯವನ್ನು ನಿರ್ಮಿಸಿಕೊಂಡು ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಬೇಕೆಂದು ಶಾಸಕ ಡಾ.ಕೆ. ಸುಧಾಕರ್ ತಿಳಿಸಿದರು.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಂಚೇನಹಳ್ಳಿಯ ಹೋಬಳಿಯ ಪುರ ಗ್ರಾಪಂ ವ್ಯಾಪ್ತಿಯಲ್ಲಿ ಅಹವಾಲು ಸ್ವೀಕಾರ ಸಭೆಗೆ ಚಾಲನೆ ನೀಡಿ ಅವರು ಮಾತನಾಡಿ, ಪ್ರತಿ ಮನೆಗೂ ಶೌಚಾಲಯ ಅತ್ಯಂತ ಪ್ರಮುಖ. ಮನೆಯ ಉಳಿದ ಸೌಲಭ್ಯದಷ್ಟೇ ಪ್ರಮುಖವಾಗಿ ಶೌಚಾಲಯ ಇರಬೇಕು. ಸಾಕಷ್ಟು ಜನ ಇದನ್ನು ನಿರ್ಲಕ್ಷಿಸುತ್ತಾರೆ. ಇದೇ ಕಾರಣಕ್ಕೆ ಜನ ಹೆಚ್ಚಿಗೆ ಅನೇಕ ರೋಗಗಳಿಗೆ ತುತ್ತಾಗುತ್ತಾರೆ.ಹೀಗೆ ಅನಾರೋಗ್ಯದಿಂದ ಆಸ್ಪತ್ರೆಗಳಿಗೆ ಹಣ ಸುರಿಯುವ ಬದಲು ಶೌಚಾಲಯ ನಿರ್ಮಿಸಿಕೊಳ್ಳಬೇಕು. ಮುಖ್ಯವಾಗಿ ಪುರ ಗ್ರಾಪಂ ವ್ಯಾಪ್ತಿಯಲ್ಲಿ ನ್ಯಾಯಬೆಲೆ ಅಂಗಡಿ ಒಂದೆ ಇದೆ. ಸಾವಿರಕ್ಕೂ ಹೆಚ್ಚು ಮಂದಿ ಪಡಿತರ ಚೀಟಿ ಹೊಂದಿದವರಿದ್ದಾರೆ. ಆದ್ದರಿಂದ ಮೂರ್ನಾಲ್ಕು ಕಿ.ಮೀ. ದೂರದಿಂದ ಗ್ರಾಮಸ್ಥರು ಪುರಕ್ಕೆ ಬಂದು ಪಡಿತರ ಕೊಂಡೊಯ್ಯಬೇಕು. ಹೀಗಾಗಿ ಗ್ರಾಪಂ ವ್ಯಾಪ್ತಿಗೆ ಇನ್ನೊಂದು ನ್ಯಾಯಬೆಲೆ ಅಂಗಡಿ ಕಲ್ಪಿಸುವಂತೆ ಜನ ಮನವಿ ಮಾಡಿದರು. ಅದಕ್ಕೆ ಸ್ಪಂದಿಸಿದ ಶಾಸಕರು ಸಂಬಂಧಿಸಿದವರಿಗೆ ಸಮಸ್ಯೆಯನ್ನು ಸರಿಪಡಿಸಲು ಸೂಚನೆ ನೀಡಿದರು.
ಗ್ರಾಪಂ ಸದಸ್ಯರಾದ ಮಧುಸೂಧನ ರೆಡ್ಡಿ, ವಿರೂಪಾಕ್ಷ ಗೌಡ, ಲಕ್ಷ್ಮಯ್ಯ, ರವೀಂದ್ರರೆಡ್ಡಿ, ಲಕ್ಷ್ಮೀಪತಿ, ಶಿವಾ, ಗಂಗರೆಡ್ಡಿ, ಪ್ರಕಾಶ್, ಕಾಂತಣ್ಣ, ಪಿಡಿಒ ನರಸಿಂಹಮೂರ್ತಿ, ಗ್ರಾಮ ಲೆಕ್ಕಾಧಿಕಾರಿ ರಂಗನಾಥ, ಲಕ್ಷ್ಮೀನಾರಾಯಣ, ಪಿ.ಎನ್. ಪ್ರಕಾಶ್, ಟಿಪಿಎಸ್ ನಾರಾಯಣಸ್ವಾಮಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.