ಕೋಲಾರ

ವಿಪ್ರ ಸಮುದಾಯ ಭವನಕ್ಕೆ ರು. 5 ಲಕ್ಷ ಅನುದಾನ

Published On :

ಶಿಡ್ಲಘಟ್ಟ: ಸಮಾಜದಲ್ಲಿ ಗುರುಗಳ ಸ್ಥಾನದಲ್ಲಿರುವ ವಿಪ್ರ ಸಮಾಜದವರ ಸಮುದಾಯ ಭವನ ನಿರ್ಮಿಸಲು ಸಂಸದರ ಕ್ಷೇತ್ರಾಭಿವೃದ್ಧಿ ನಿಧಿಯಿಂದ 5 ಲಕ್ಷ ರು.ಗಳನ್ನು ನೀಡುವುದಾಗಿ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಭರವಸೆ ನೀಡಿದರು.
ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ವಿಪ್ರ ಪ್ರತಿಭಾ ಪುರಸ್ಕಾರ ಮತ್ತು ಸೇವಾ ಟ್ರಸ್ಟ್ ಆಶ್ರಯದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಜಾತಿ ಮತಭೇದವಿಲ್ಲದೇ ವಿದ್ಯೆಯನ್ನು ಧಾರೆ ಎರೆಯುತ್ತಿರುವ ಗುರುಗಳಾದ ಬ್ರಾಹ್ಮಣರ ಸಮಾಜದವರು ನಿವೇಶನವನ್ನು ಪುರಸಭೆಯಿಂದ ಮಂಜೂರು ಮಾಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಸನ್ಮಾನ ಸ್ವೀಕರಿಸಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ವಿಪ್ರ ಸಮಾಜದ ಸಮುದಾಯ ಭವನಕ್ಕಾಗಿ ನಿವೇಶನ ಮಂಜೂರು ಮಾಡಲು ಕಾನೂನು ಚೌಕಟ್ಟಿನಲ್ಲಿ ಸಹಾಯ ಮಾಡುವುದಾಗಿ ಭರವಸೆ ನೀಡಿ, ತಾಲೂಕಿನಲ್ಲಿ ಅಂತರ್ಜಲ ಮಟ್ಟ ಕುಸಿದು ಫ್ಲೋರೈಡ್ ಮಿಶ್ರಿತ ನೀರು ಜನರು ಸೇವಿಸುತ್ತಿರುವ ಹಿನ್ನೆಲೆಯಲ್ಲಿ 7 ನೀರು ಶುದ್ಧಿಕರಣ ಘಟಕಗಳನ್ನು ಮಂಜೂರು ಮಾಡಿಸಿರುವುದಾಗಿ ತಿಳಿಸಿದರು. ಶಾಸಕ ಎಂ. ರಾಜಣ್ಣ, ಮಾಜಿ ಸಚಿವ ವಿ. ಮುನಿಯಪ್ಪ ಮಾತನಾಡಿದರು.
ಯು.ಬಿ. ವೆಂಕಟೇಶ್, ಎಂ.ವಿ. ಜಯರಾಂ, ಡಾ. ಮೀಹನ್, ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ವಾಸುದೇವ್ ರಾವ್, ವಿಪ್ರ ಪ್ರತಿಭಾ ಪುರಸ್ಕಾರ ಮತ್ತು ಸೇವಾ ಟ್ರಸ್ಟ್ ಅಧ್ಯಕ್ಷ ಬಿ.ಆರ್. ಅನಂತಕೃಷ್ಣ, ಕಾರ್ಯದರ್ಶಿ ವಿ. ಕೃಷ್ಣ, ಖಜಾಂಚಿ ಎನ್. ಶ್ರೀಕಾಂತ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹನುಮಂತರಾವ್, ಎಸ್.ವಿ.ನಾಗರಾಜ್ ರಾವ್, ತಾಲೂಕು ವಿಪ್ರ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್, ದೇವನಹಳ್ಳಿ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ದೇ.ಸೂ. ನಾಗರಾಜ್, ಸಿ.ಪಿ.ಐ ಬಿ.ಎಲ್. ಶ್ರೀನಿವಾಸ್ ಮೂರ್ತಿ, ವಿಪ್ರ ಯುವ ವೇದಿಕೆಯ ಗೌರವಾಧ್ಯಕ್ಷ ಕೆ. ನಾಗಭೂಷಣ್ ರಾವ್, ವಿಪ್ರ ಯುವ ವೇದಿಕೆಯ ಅಧ್ಯಕ್ಷ ಜಯಸಿಂಹ, ತಾಲೂಕು ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಎ.ಎಸ್. ರವಿ,ಅಶ್ವತ್ಥನಾರಾಯಣ, ಎ.ಸಿ.ಎನ್. ಮೂರ್ತಿ ಇದ್ದರು.
ಪ್ರತಿಭಾ ಪುರಸ್ಕಾರ ಮತ್ತು ಸೇವಾ ಟ್ರಸ್ಟ್ ಗೌರವಾಧ್ಯಕ್ಷ ಡಾ. ಸತ್ಯನಾರಾಯಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಸ್.ಎಸ್.ಎಲ್.ಸಿ, ಪಿ.ಯು.ಸಿ ಹಾಗೂ ಪದವೀಧರ 25 ಮಂದಿ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರದ ಸೇವೆ ಸಲ್ಲಿಸಿರುವ ಸಮಾಜದ 30 ಮಂದಿ ಸಾಧಕರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಶ್ರೀ ಶಂಕರ ಮಠದಿಂದ ತಾಲೂಕು ಅರ್ಚಕರ ಆಗಮಿಕರು ಹಾಗೂ ಉಪಾಧಿವಂತರ ಒಕ್ಕೂಟದ ಪ್ರತಿನಿಧಿಗಳಿಂದ ಪೂರ್ಣಕುಂಭದಿಂದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಸ್ವಾಗತಿಸಿ ಮೆರವಣಿಗೆ ಮೂಲಕ ದಿ. ವೇದ ಬ್ರಹ್ಮ ಶ್ರೀ ಎಸ್. ಶಂಕರ್ ರಾಮಾ ಶಾಸ್ತ್ರೀಗಳ ಮಹಾದ್ವಾರಕ್ಕೆ ಕರೆತರಲಾಯಿತು. ಕೋ.ಲ.ನರಸಿಂಹಮೂರ್ತಿಗಳ ವೇದಿಕೆಯಲ್ಲಿ ಕಾರ್ಯಕ್ರಮವನ್ನು ಸಂಘಟಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.