ಸಂಚಾರಿ ನಿಯಮ ಪಾಲಿಸಲು ಸೂಚನೆ
ಕೋಲಾರ; ನಗರದ ಸಂಚಾರಿ ವ್ಯವಸ್ಥೆ ಸುಗಮಗೊಳ್ಳಲು ಆಟೋ ಚಾಲಕರು ಸಹಕರಿಸಬೇಕು ಹಾಗೂ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಕೋಲಾರ ಡಿವೈಎಸ್ಪಿ ಅಶೋಕ್ ಕುಮಾರ್ ಸೂಚಿಸಿದರು. ನಗರದ ಡೂಂ ಲೈಟ್ ವೃತ್ತದಲ್ಲಿ ನೂತನವಾಗಿ ನಿರ್ಮಿಸಿರುವ ಜೈಕೋಲಾರಮ್ಮ ಆಟೋ ನಿಲ್ದಾಣವನ್ನು ಶನಿವಾರ ಉದ್ಘಾಟಿಸಿ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಆಟೋ ಪ್ರಯಾಣ ಸಾರ್ವಜನಿಕ ಸೇವೆಯಾಗಿದೆ, ಜನರೊಂದಿಗೆ ಸೌಜನ್ಯದಿಂದ ವರ್ತಿಸಿ, ಸಂಚಾರಿ ನಿಯಮ ಪಾಲಿಸಿ, ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸಿ, ವಿಮೆ ಮಾಡಿಸಿ ಹಾಗೂ ಸಮವಸ್ತ್ರ ಧರಿಸುವ ಮೂಲಕ ಶಿಸ್ತು ಕಾಯ್ದುಕೊಳ್ಳುವಂತೆ ಸಲಹೆ ನೀಡಿದರು. ನಗರದಲ್ಲಿ ಸಂಚಾರಿ ದಟ್ಟಣೆ ಹೆಚ್ಚಿರುವುದರಿಂದ ಸಮಸ್ಯೆ ಹೆಚ್ಚುತ್ತಿದೆ, ಇದರ ನಿರ್ವಹಣೆ ಸಂದರ್ಭದಲ್ಲಿ ಪೊಲೀಸರೊಂದಿಗೆ ಸಹಕರಿಸುವಂತೆ ನಗರಸಭೆ ಸದಸ್ಯ ಸುಕುಮಾರ್ ಆಟೋ ಚಾಲಕರಿಗೆ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ವೃತ್ತ ನಿರೀಕ್ಷಕ ಶಿವಕುಮಾರ್, ಪಿಎಸ್ಐ ಸುಧಾಕರ ರೆಡ್ಡಿಡಿ, ಸಂಚಾರಿ ಪಿಎಸ್ಐ ಜಗದೀಶ್, ಸಮಾಜ ಸೇವಕ ಶ್ರೀರಾಮ ಕಾಫಿ ವರ್ಕ್ನ ಶ್ರೀನಾಥ್, ಆಟೋ ಚಾಲಕರು, ಮಾಲೀಕರು ಭಾಗವಹಿಸಿದ್ದರು. ಸುಮಾರು 50ಕ್ಕೂ ಹೆಚ್ಚು ಆಟೋ ಚಾಲಕರು ನಗದರಲ್ಲಿ ಆಟೋಗಳ ಪ್ರದರ್ಶನ ನಡೆಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

