ಕೋಲಾರ

ಬೀಡಾಡಿ ದನಗಳ ಕಾಟ ತಪ್ಪಿಸಲು ಮನವಿ

Published On :

ಕೆಜಿಎಫ್: ಕ್ಷೇತ್ರದ ಸುತ್ತಮುತ್ತಲ ಗ್ರಾಮಗಳಲ್ಲಿ ರಾತ್ರಿ ವೇಳೆ 20ಕ್ಕೂ ಹೆಚ್ಚು ಬೀಡಾಡಿ ದನಗಳು ರೈತರು ಬೆಳೆದ ರಾಗಿ, ಬತ್ತ, ತೊಗರಿ, ಅವರೆ, ಜೋಳ ಮುಂತಾದ ಬೆಳೆಗಳನ್ನು ನಾಶಪಡಿಸಿದ್ದರಿಂದ ರೊಚ್ಚಿಗೆದ್ದ ಗೊಲ್ಲಹಳ್ಳಿ ಗ್ರಾಮಸ್ಥರು ಹಾಗೂ ಶ್ರೀ ಭುವನೇಶ್ವರಿ ಕನ್ನಡ ಯುವಕರ ಸಂಘದ ಕಾರ್ಯಕರ್ತರು ಮಧ್ಯರಾತ್ರಿ ಹರಸಾಹಸ ಮಾಡಿ 6 ಬೀಡಾಡಿ ದನಗಳನ್ನು ಹಿಡಿದು ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬೀಡಾಡಿ ದನಗಳ ಮಾಲೀಕರು ರೈತರು ಬೆಳೆದ ಬೆಳೆಗಳನ್ನು ಮೇಯಲು ಬಿಡುತ್ತಿರುವುದರಿಂದ ರೈತರಿಗೆ ನಷ್ಟವುಂಟಾಗುತ್ತಿದೆ. ಈ ಬಗ್ಗೆ ನಗರಸಭೆ ಪೌರಾಯುಕ್ತರಿಗೆ, ಪೊಲೀಸ್ ಇಲಾಖೆಗೆ ಮತ್ತು ತಹಸೀಲ್ದಾರ್‌ಗೆ ಹಲವಾರು ದೂರು ನೀಡಿ ಪ್ರತಿಭಟನೆಗಳನ್ನು ನಡೆಸಿದರೂ ಕ್ರಮಕ್ಕೆ ಅಧಿಕಾರಿಗಳು ಮುಂದಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು.
ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಬೀಡಾಡಿ ಧನಗಳ ಹಾವಳಿ ತಪ್ಪಿಸಲು ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಗ್ರಾಮಸ್ಥರಿಂದ ನಗರಸಬೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುತ್ತದೆ ಎಂದು ಎಚ್ಚರಿಸಿದರು.
ಬೆಳೆ ಕಳೆದುಕೊಂಡ ಅಪ್ಪಯ್ಯ, ನಾಗರಾಜ್, ಚಲಪತಿ, ರಾಜೇಂದ್ರ, ಶ್ರೀನಿವಾಸ್, ಸೇರಿದಂತೆ ಭುವನೇಶ್ವರಿ ಕನ್ನಡ ಯುವಕರ ಸಂಘದ ಕಾರ್ಯಕರ್ತರು ಇದ್ದರು.

'ಶಾದಿ ಭಾಗ್ಯ ಎಲ್ಲರಿಗೂ ವಿಸ್ತರಿಸಿ'
ಶಿಡ್ಲಘಟ್ಟ: ಕರ್ನಾಟಕ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ಶಾದಿ ಭಾಗ್ಯವನ್ನು ಎಲ್ಲಾ ವರ್ಗದ ಹೆಣ್ಣು ಮಕ್ಕಳಿಗೂ ವಿಸ್ತರಿಸಬೇಕೆಂದು ಒತ್ತಾಯಿಸಿ ಡಿ.ಆರ್. ಶಿವಕುಮಾರ್ ಗೌಡ ನೇತೃತ್ವದಲ್ಲಿ ತಾಲೂಕು ಕಚೇರಿ ಮುಂದೆ ದರಣಿ ನಡೆಸಲಾಯಿತು. ಯೋಜನೆಯನ್ನು ಮುಸ್ಲಿಂ ಸಮುದಾಯದವರಿಗೆ ಮಾತ್ರ ಮೀಸಲಿಟ್ಟಿದ್ದು, ಎಲ್ಲಾ ಸಮುದಾಯದಲ್ಲೂ ಬಡವರಿದ್ದು ಎಲ್ಲರಿಗೂ ಶಾದಿ ಭಾಗ್ಯ ಯೋಜನೆ ವಿಸ್ತರಿಸಬೇಕೆಂದು ಒತ್ತಾಯಿಸಿದರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಎ.ಪಿ.ಎಲ್ ಕಾರ್ಡ್‌ದಾರರಿಗೆ ನೀಡುತ್ತಿದ್ದ ಅಕ್ಕಿ, ಗೋದಿ, ಸಕ್ಕರೆ, ಮತ್ತು ಸೀಮೆ ಎಣ್ಣೆ ಮುಂತಾದ ಪದಾರ್ಥಗಳನ್ನು ನೀಡುತ್ತಿದ್ದು ಕಾಂಗ್ರೆಸ್ ಸರ್ಕಾರ ಬಂದ ಕೊಡಲೇ ಎಲ್ಲಾ ಸೌಲಭ್ಯಗಳನ್ನು ಕಡಿತಗೊಳಿಸಿ ಜನ ವಿರೋಧಿ ನೀತಿ ಪ್ರದರ್ಶಿಸಿದ್ದಾರೆ ಎಂದು ಆರೋಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.