ಕೋಲಾರ

6 ಪ್ರಕರಣಗಳಲ್ಲಿ ಬೇಕಾಗಿದ್ದ ಮೂವರು ಕದೀಮರು ಪೊಲೀಸರ ವಶಕ್ಕೆ

Published On :

ಕೋಲಾರಛ ನಗರದ ಮಹಾಲಕ್ಷ್ಮೀ ಬಡಾವಣೆ, ಷಾಹಿನ್‌ಷಾ ನಗರ ಮತ್ತು ಸುಲ್ತಾನ್‌ನಿಪ್ಪಸಂದ್ರದಲ್ಲಿ ಕಳೆದ 3 ತಿಂಗಳಲ್ಲಿ ನಡೆದಿದ್ದ ಆರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮೂವರು ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಷಾಹಿನ್‌ಷಾ ನಗರದ ಅಕ್ಬರ್‌ಖಾನ್, ಶಬ್ಬೀರ್‌ಹುಸೇನ್ ಹಾಗೂ ಜಮೀರ್ ಎಂಬುವರಾಗಿದ್ದು ಇವರು ನೀಡಿದ ಸುಳಿವಿನ ಮೇರೆಗೆ 5.50 ಲಕ್ಷ ರು.ಬೆಲೆಯ ಚಿನ್ನಾಭರಣ ಹಾಗೂ 40 ಸಾವಿರ ರು.ಮೌಲ್ಯದ ಗೃಹೋಪಯೋಗಿ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಕಳ್ಳರು ನ.10ರಂದು ರಾತ್ರಿ ಅನುಮಾನಾಸ್ಪದವಾಗಿ ತಿರುಗುತ್ತಿದ್ದಾಗ ಗಸ್ತಿನಲ್ಲಿದ್ದ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದಾಗ ಪ್ರಕರಣಗಳು ಬೆಳಕಿಗೆ ಬಂದಿವೆ. ಆರೋಪಿ ಜಮೀರ್ ಎಂಬುವನೊಂದಿಗೆ ಸೇರಿಕೊಂಡು 6 ಕಡೆ ಕಳ್ಳತನ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ ಎಸ್ಪಿ ಡಾ.ರಾಮ್‌ನಿವಾಸ್ ಸಪಟ್, ಎಎಸ್ಪಿ ಐ.ಎಂ.ಜಮೀರ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಅಶೋಕ್‌ಕುಮಾರ್, ಸಿಪಿಐ ಶಿವಕುಮಾರ್, ಪಿಎಸ್‌ಐಗಳಾದ ಕೆ. ಚಂದ್ರಪ್ಪ, ಸುಧಾಕರರೆಡ್ಡಿ ಹಾಗೂ ಸಿಬ್ಬಂದಿಯನ್ನು ಒಳಗೊಂಡ ತನಿಖಾ ತಂಡವನ್ನು ಆರೋಪಿಗಳ ಬಂಧನಕ್ಕಾಗಿ ರಚಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.