ಕೋಲಾರ

ಗುಣಮಟ್ಟದ ಆಹಾರ ಪದಾರ್ಥ ವಿತರಣೆ

Published On :

ಮುಳಬಾಗಲು: ತಾಲೂಕಿನ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ 24 ಬಾಲಕ ಮತ್ತು ಬಾಲಕಿಯರ  ವಸತಿ ನಿಲಯಗಳಿಗೆ ಎನ್ಸಿಸಿಎಫ್ ಬೆಂಗಳೂರು ಶಾಖೆಯಿಂದ ಆಹಾರ ಧಾನ್ಯ ಸರಬರಾಜು ಮಾಡುವ ಕಾರ್ಯಕ್ರಮವನ್ನು  ಸೋಮವಾರ ಹಮ್ಮಿಕೊಳ್ಳಲಾಗಿತ್ತು. ಪಟ್ಟಣ ಸೇರಿದಂತೆ 24 ವಸತಿ ನಿಲಯಗಳಿಗೆ ಎರಡು ತಿಂಗಳಿಗೊಮ್ಮೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ಸದರಿ ಸಂಸ್ಥೆ ಸರಬರಾಜು ಮಾಡುವುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದರು. ಸಮಾಜ ಕಲ್ಯಾಣ ಅಧಿಕಾರಿ ಶಾಂತಮ್ಮ, ಬಿಸಿಎಂ ಅಧಿಕಾರಿ ಶ್ರೀನಿವಾಸ್, ಹಾರೋಹಳ್ಳಿ ನಾರಾಯಣಸ್ವಾಮಿ, ಗೊಲ್ಲಹಳ್ಳಿ ವೆಂಕಟೇಶ್ ಇದ್ದರು.

ಲೋಕ ಅದಾಲತ್ ಬಳಕೆ ಮಾಡಿಕೊಳ್ಳಿ: ನ್ಯಾ. ವಿಶಾಲಾಕ್ಷಿ
ಬಂಗಾರಪೇಟೆ:
ಸಣ್ಣಪುಟ್ಟ ವ್ಯಾಜ್ಯಗಳನ್ನು ವರ್ಷಾನುಗಟ್ಟಲೆ ಕೋರ್ಟ್‌ನಲ್ಲಿ ನಡೆಸಿ ಸಮಯ ಮತ್ತು ಹಣ ಪೋಲು ಮಾಡಿಕೊಳ್ಳದೆ ಪಟ್ಟಣದ ಜೆಎಂಎಪ್ಸಿ ನ್ಯಾಯಾಲಯದಲ್ಲಿ ಪ್ರತಿದಿನ ನಡೆಯುತ್ತಿರುವ ಲೋಕಅದಾಲತ್‌ನಲ್ಲಿ ರಾಜೀ ಸಂದಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವಂತೆ ನ್ಯಾಯಾಧೀಶೆ ವಿಶಾಲಕ್ಷಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲ ನ್ಯಾಯಾಲಯಗಳಲ್ಲಿ ಲೋಕ ಅದಾಲತ್ ನಡೆಯುತ್ತಿದ್ದು ಇದನ್ನು ಕಕ್ಷಿದಾರರು ಹಾಗೂ ಪ್ರತಿವಾದಿಗಳು ಬಳಸಿಕೊಳ್ಳುವಂತೆ ಮನವಿ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.