ಕೋಲಾರ

ಜಿಲ್ಲೆಯಲ್ಲಿ ಸಹಕಾರ ಸಪ್ತಾಹ ಆಚರಣೆಗೆ ಸಜ್ಜು

Published On :

ಕ.ಪ್ರ.ವಾರ್ತೆ, ಕೋಲಾರ, ನ.12
ಅಖಿಲ ಭಾರತ 60 ನೇ ಸಹಕಾರ ಸಪ್ತಾಹವನ್ನು ಇದೇ ನ.14 ರಿಂದ 20 ರವರೆಗೆ ಕೋಲಾರ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಪಿ.ಎನ್. ಕೃಷ್ಣಾರೆಡ್ಡಿ ತಿಳಿಸಿದರು.
ನಗರದ ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಅವರು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ. ನ.14 ರಂದು ಸಹಕಾರಿ ಸಪ್ತಾಹಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಲಿದ್ದು ನ.18 ರಂದು ಕೋಲಾರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ನಡೆಯುವ ರಾಜ್ಯಮಟ್ಟದ ಕಾರ್ಯಕ್ರಮವನ್ನು ರಾಜ್ಯ ಸಹಕಾರ ಸಚಿವ ಮಹದೇವಪ್ರಸಾದ್ ಉದ್ಘಾಟಿಸಲಿದ್ದಾರೆ ಎಂದರು.  
ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಹಾಗೂ ಶಾಸಕ ಜಿ.ಟಿ. ದೇವೇಗೌಡ ಅಧ್ಯಕ್ಷತೆ ವಹಿಸಲಿದ್ದು, ವಿಶೇಷ ಆಹ್ವಾನಿತರಾಗಿ ಕೇಂದ್ರ ಸಚಿವರಾದ ವೀರಪ್ಪ ಮೊಯ್ಲಿ, ಕೆ.ಎಚ್. ಮುನಿಯಪ್ಪ, ಶಿವಶಂಕರರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಆಹಾರ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಜಿಲ್ಲೆಯ ಶಾಸಕರು, ಅಧಿಕಾರಿಗಳು ಹಾಜರಿರುವರು ಎಂದು ತಿಳಿಸಿದರು.
ಏಳು ದಿನಗಳ ಕಾಲ ಸಹಕಾರ ಕ್ಷೇತ್ರದಲ್ಲಿ ಆಗಿರುವ ಗುರಿ, ಸಾಧನೆ, ವೈಫಲ್ಯಗಳ ಕುರಿತು ಚಿಂತನ ಮಂಥನ, ಸಹಕಾರಿ ಸಂಸ್ಥೆಗಳ ನಷ್ಟದಿಂದ ಜಿಲ್ಲೆಯ ರೈತರಿಗೆ ಮತ್ತೆ ಸಾಲ ಸೌಲಭ್ಯ ಸಿಗಲು ಏನು ಮಾಡಬೇಕೆಂಬುದರ ಕುರಿತು ಸಮಗ್ರ ಚಿಂತನೆ ನಡೆಸಲಾಗುವುದು ಎಂದರು.
ಸಪ್ತಾಹದ ದಿನಗಳಲ್ಲಿ ಪ್ರತಿ ತಾಲೂಕಲ್ಲೂ ಒಂದೊಂದು ವಿಶೇಷ ಕಾರ್ಯಕ್ರಮ ನಡೆಯಲಿದೆ.
 ನ.20 ರಂದು ಕೋಲಾರದ ಕಾರ್ಯನಿರತ ಪತ್ರಕರ್ತರ ವಿವಿಧೋದ್ಧೇಶ ಸಹಕಾರ ಸಂಘದ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಯೂನಿಯನ್ ಉಪಾಧ್ಯಕ್ಷ ವೆಂಕಟರೆಡ್ಡಿ, ಯೂನಿಯನ್ ಮಾಜಿ ಅಧ್ಯಕ್ಷರೂ ಮತ್ತು ನಿರ್ದೇಶಕರಾದ ಬ್ಯಾಲಹಳ್ಳಿ ಗೋವಿಂದಗೌಡ, ಉರಿಗಿಲಿ ರುದ್ರಸ್ವಾಮಿ, ಉಗಣಿ ನಾರಾಯಣಗೌಡ, ನಿರ್ದೇಶಕರಾದ ಮುನಿನಾರಾಯಣಪ್ಪ, ಕೆ.ಆರ್. ಬೀರಪ್ಪ, ಅಲಂಗೂರು ಶಿವಣ್ಣ, ಹೊಳಲಿ ಪ್ರಕಾಶ್, ಕೆ.ವಿ. ದಯಾನಂದ್, ಎಸ್.ಎನ್. ಗೋವಿಂದಗೌಡ, ನಳಿನಿ, ಷೇಕ್ ಮಹಮದ್, ಕಾರ್ಯನಿರ್ವಾಹಕ ಅಧಿಕಾರಿ ಡಿ. ಮಹದೇವಯ್ಯ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.