ವಿದ್ಯಾರ್ಥಿನಿ ಸಾವಿನ ಬಗ್ಗೆ ತನಿಖೆಗೆ ಆಗ್ರಹ
ಚಿಕ್ಕಬಳ್ಳಾಪುರ: ಕಳೆದ ಕೆಲ ದಿನಗಳ ಹಿಂದೆ ತಾಲೂಕಿನ ವೀರದಿಮ್ಮಮ್ಮನ ಕಣಿವೆಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾದ ನೇತ್ರಾ ಸಾವಿನ ಬಗ್ಗೆ ತನಿಖೆ ನಡೆಸಿ ನ್ಯಾಯ ದೊರಕಿಸಿಕೊಡಬೇಕೆಂದು ಒತ್ತಾಯಿಸಿ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ಪ್ರತಿಭಟನಾ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಮಿನಿ ವಿಧಾನಸೌಧಕ್ಕೆ ತೆರಳಿ ತಹಸೀಲ್ದಾರ್ ನಟೇಶ್ ಅವರಿಗೆ ಮನವಿ ಸಲ್ಲಿಸಿದರು.
ನಂತರ ಮಾತನಾಡಿದ ಎಸ್ಎಫ್ಐ ಜಿಲ್ಲಾ ಮುಖಂಡ ಕುಂದಲಗುರ್ಕಿ ಮುನೀಂದ್ರ, ಪ್ರಭಾವಿಗಳ ಒತ್ತಡಕ್ಕೆ ಮಣಿದು ಆತ್ಮಹತ್ಯೆ ಎಂದು ಬಿಂಬಿಸಲಾಗುತ್ತಿದೆ. ಇದರ ಬಗ್ಗೆ ತನಿಖೆ ನಡೆಸಿ ನೇತ್ರಳ ಸಾವಿನ ಹಿಂದೆ ಇರುವ ರಹಸ್ಯವನ್ನು ಬಯಲು ಮಾಡಿ ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯನ್ನು ನೀಡಬೇಕೆಂದು ಒತ್ತಾಯಿಸಿದರು.
ಪೊಲೀಸರು ಒತ್ತಡದಿಂದ ಆತ್ಮಹತ್ಯೆ ಪ್ರಕರಣ ಎಂದು ದಾಖಲಿಸಿಕೊಂಡಿದ್ದಾರೆ. ಮೃತಳ ಶವಪರೀಕ್ಷೆಯನ್ನೂ ನಡೆಸಿಲ್ಲ ಎಂದು ಆರೋಪಿಸಿದ ಅವರು, ನೇತ್ರಾಳ ಸಾವಿನ ಬಗ್ಗೆ ತನಿಖೆ ನಡೆಸಲು ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ತಿಳಿಸಿದರು.
ಮನವಿ ಸ್ವೀಕರಿಸಿದ ತಹಸೀಲ್ದಾರ್ ನಟೇಶ್, ಪ್ರಕರಣದ ತನಿಖೆ ನಡೆಸಿ ಸತ್ಯಾಂಶವನ್ನು ಹೊರಗೆಡಲಾಗುವುದು ಎಂದರು. ಪ್ರತಿಭಟನೆಯಲ್ಲಿ ಬಿ.ಎನ್. ಮುನಿಕೃಷ್ಣಪ್ಪ, ಮಧುಲತಾ, ಈಶ್ವರಪ್ಪ, ನಂದಿನಿ, ರಮೇಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

