ಕೋಲಾರ

ಅತಿಥಿ ಉಪನ್ಯಾಸಕರ ಬಗ್ಗೆ ಸರ್ಕಾರ ನಿರ್ಲಕ್ಷ್ಯ

Published On :

ಚಿಕ್ಕಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ರಾಜ್ಯ ಅತಿಥಿ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷ ಬಿ. ರಾಜಶೇಖರಮೂರ್ತಿ ಆರೋಪಿಸಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಅತಿಥಿ ಉಪನ್ಯಾಸಕರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 10,562 ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಅತಿಥಿ ಉಪನ್ಯಾಸಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಕೆಲ ದಿನಗಳಿಂದಲೂ ವೇತನ ತಾರತಮ್ಯವನ್ನು ದೂರ ಮಾಡಿ ಸರಿಯಾದ ಸಮಯಕ್ಕೆ ಸಮರ್ಪಕವಾಗಿ ವೇತನವನ್ನು ನೀಡಬೇಕೆಂದು ಒತ್ತಾಯಿಸಿಕೊಂಡು ಬರುತ್ತ ಹೋರಾಟಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಅಲ್ಲದೇ ರಾಜ್ಯ ಸರ್ಕಾರಕ್ಕೆ ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಹಲವಾರು ಬಾರಿ ಮನವಿ ನೀಡಿ ಗಮನ ಸೆಳೆಯಲಾಗಿದೆ. ಆದರೂ ಸ್ಪಂದಿಸುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಶಿಕ್ಷಣ ತಜ್ಞ ಕೋಡಿರಂಗಪ್ಪ ಮಾತನಾಡಿ, ಸಾಮಾಜಿಕ ನ್ಯಾಯ ದೊರಯಬೇಕಾದರೆ ಸಂಘಟನೆ ಮುಖ್ಯ, ಸಂಘಟಿತರಾಗಿ ಸರ್ಕಾರದ ಗಮನ ಸೆಳೆದು ಬೇಡಿಕೆಗಳನ್ನು ಈಡೇರಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ರಾಜ್ಯದ ಸಂಘಟನಾ ಕಾರ್ಯದರ್ಶಿ ಫಯಾಜುಲ್ಲಾ, ಜಿಲ್ಲಾ ಸಂಚಾಲಕ ಶಿವಪ್ಪ ಇದ್ದರು.
ಪದಾಧಿಕಾರಿಗಳ ನೇಮಕ: ಸಮಾವೇಶದಲ್ಲಿ ಅತಿಥಿ ಉಪನ್ಯಾಕರ ನೂತನ ಕಾರ್ಯಕಾರಿ ಸಮಿತಿ ರಚನೆ ಮಾಡಲಾಯಿತು. ಜಿಲ್ಲಾಧ್ಯಕ್ಷರಾಗಿ ಹೇಮಲತಾ, ಉಪಾಧ್ಯಕ್ಷರಾಗಿ ಜಲಜ, ಕಾರ್ಯದರ್ಶಿಯಾಗಿ ರಮೇಶ್, ಸಹಕಾರ್ಯದರ್ಶಿ ಕಮಲಾಕ್ಷಿ, ಸಂಘಟನಾ ಕಾರ್ಯದರ್ಶಿ ಕಾಮಾಕ್ಷಿ, ಸಂಘಟನಾ ಸಂಚಾಲಕರಾಗಿ ಜಯಚಂದ್ರ, ಖಜಾಂಚಿ ಶ್ರೀನಿವಾಸ್, ಸಮಿತಿಯ ಸದಸ್ಯರಾಗಿ ಶ್ರೀನಿವಾಸಪ್ಪ , ಮುರಳಿಧರ್, ಶಿಲ್ಪ, ಹರೀಶ್ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ಸರ್ಕಾರದ ವೈಫಲ್ಯಗಳಿಂದ ಬೇಸತ್ತ ಜನ: ಎಂ. ನಾರಾಯಣಸ್ವಾಮಿ
ಬಂಗಾರಪೇಟೆ:
ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದ ಆರು ತಿಂಗಳಿಂದ ಜನಪರವಾದ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಬದಲು ವಿವಾದ ಸೃಷ್ಟಿಸುವಂಥ ಹೇಳಿಕೆಗಳನ್ನು ನೀಡುವ ಮೂಲಕ ಕಾಲಹರಣ ಮಾಡುತ್ತಿದೆ ಎಂದು ಮಾಜಿ ಶಾಸಕ ಹಾಗೂ ಲೋಕಸಭೆ ಚುನಾವಣೆ ಟಿಕೆಟ್ ಆಕಾಂಕ್ಷಿ ಎಂ. ನಾರಾಯಣಸ್ವಾಮಿ ಟೀಕಿಸಿದರು.
ಇದೇ ಭಾನುವಾರ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ಬೃಹತ್ ಸಮಾವೇಶಕ್ಕೆ ಪಟ್ಟಣದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಹಮ್ಮಿಕೊಂಡಿದ್ದ ಬೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡುತ್ತಾ, ಕೇಂದ್ರ ಸರ್ಕಾರದ ಹಗರಣ ಮತ್ತು ವೈಫಲ್ಯಗಳಿಂದ ದೇಶದ ಜನರು ಬೇಸತ್ತಿದ್ದು ಈಗ ಎಲ್ಲಾ ಕಡೆ ನರೇಂದ್ರ ಮೋದಿ ಹವಾ ಬೀಸುತ್ತಿದೆ. ಈ ಹವಾಗೆ ಕಾಂಗ್ರೆಸ್ ಮಾಯವಾಗಲಿದೆ ಎಂದು ಭವಿಷ್ಯ ನುಡಿದರು. ಮೋದಿ ಸಮಾವೇಶಕ್ಕೆ ಕ್ಷೇತ್ರದಿಂದ 5ಸಾವಿರ ಟಿಕೆಟ್‌ಗಳು ಮಾರಾಟವಾಗಿದ್ದು ಇಲ್ಲಿಂದ ಕಾರ್ಯಕರ್ತರನ್ನು ಸಮಾವೇಶಕ್ಕೆ ಕರೆದುಕೊಂಡು ಹೋಗಲು 10ರೈಲು ಬೋಗಿಗಳನ್ನು ಹಾಗೂ 50ಬಸ್‌ಗಳನ್ನು ಕಾಯ್ದಿರಿಸಲಾಗಿದೆ ಎಂದು ಹೇಳಿದರು. ಈ ವೇಳೆ ಪುರಸಭೆ ಸದಸ್ಯರಾದ ಬಿ.ಸಿ. ಶ್ರೀನಿವಾಸಮೂರ್ತಿ, ವೇದಾವತಿ ಪ್ರಭಾಕರ್, ಪಕ್ಷದ ತಾಲೂಕು ಅಧ್ಯಕ್ಷ ಮಾರ್ಕಂಡೇಗೌಡ, ರಮೇಶ್, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮಯ್ಯ, ಜುಂಜನಹಳ್ಳಿ ನಾರಾಯಣಸ್ವಾಮಿ, ಶಿವಕುಮಾರ್ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.