ಜಾನುವಾರು ಕಾಲುಬಾಯಿ ಜೊತೆ ಕುರಿಗಳಿಗೆ ನೀಲಿ ನಾಲಿಗೆ ರೋಗ...
ಚಿಕ್ಕಬಳ್ಳಾಪುರ: ಕಾಲುಬಾಯಿ ಎಲ್ಲೆಡೆ ಹರಡಿ ಜಾನುವಾರುಗಳನ್ನು ಬಲಿ ತೆಗೆದುಕೊಳ್ಳುತ್ತಿರುವುದರ ನಡುವೆ ಇದೀಗ ನೀಲಿ ನಾಲಿಗೆ ವೈರಾಣು ಕುರಿಗಳನ್ನು ಬಲಿ ತೆಗೆದುಕೊಳ್ಳುವ ಆತಂಕ ಮೂಡಿದೆ.
ಜಿಪಂ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾಹಿತಿ ನೀಡಿದ ಪಶುಸಂಗೋಪನಾ ಇಲಾಖೆ ಅಧಿಕಾರಿ, ಜಿಲ್ಲೆಯಲಿ ಒಟ್ಟು 4,325 ಜಾನುವಾರುಗಳಿಗೆ ಕಾಲು ಬಾಯಿ ರೋಗ ಕಾಣಿಸಿಕೊಂಡು ಇವುಗಳಲ್ಲಿ 592 ಜಾನುವಾರುಗಳು ಮೃತಪಟ್ಟಿವೆ. ಒಟ್ಟು 3,733 ಜಾನುವಾರುಗಳು ರೋಗದಿಂದ ಮುಕ್ತವಾಗಿದೆ ಎಂದರು.
ಜಿಪಂ ಅಧ್ಯಕ್ಷ ಚಿನ್ನಪ್ಪ ಮಾತನಾಡಿ, ಕಾಲುಬಾಯಿ ಲಸಿಕೆ ಹಾಕಿಸಿದ್ದರೂ ಜಾನುವಾರುಗಳು ಸಾವನ್ನಪ್ಪಿರುವ ದೂರುಗಳು ಕೇಳಿ ಬಂದಿದ್ದು ರಾಸುಗಳು ಸತ್ತಾಗ ಕೂಡಲೇ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿ ವರದಿ ಕೊಡಬೇಕು. ಅಲ್ಲದೇ ಸರ್ಕಾರದಿಂದ ಸೂಕ್ತ ಪರಿಹಾರ ಸಿಗುವಂತೆ ಮಾಡಬೇಕೆಂದು ಸೂಚಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಅಜಿತ್ ಪ್ರಸಾದ್ ಮಾತನಾಡಿ, ಜಿಲ್ಲೆಯಲ್ಲಿ ಶಾಲೆ ಬಿಟ್ಟ ಮಕ್ಕಳ ಸಮೀಕ್ಷೆ ನಡೆಯುತ್ತಿದ್ದು, ಇದರ ಫೈಲೆಟ್ ಅಧ್ಯಯನಕ್ಕೆ ದಿಬ್ಬೂರು ಹಾಗೂ ಬೆಂಗಳೂರಿನ ಚೆನ್ನಸಂದ್ರವನ್ನು ಆಯ್ಕೆ ಮಾಡಲಾಗಿದೆ. ಶೀಘ್ರವೇ ಎಲ್ಲಾ ಪ್ರದೇಶಗಳಲ್ಲೂ ಸಮೀಕ್ಷೆ ಕಾರ್ಯ ತ್ವರಿತವಾಗಿ ನಡೆಯಲಿದೆ ಎಂದು ತಿಳಿಸಿದರು. ಈ ಬಾರಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಮಾರ್ಚ್ 28 ರಿಂದ ಏಪ್ರಿಲ್ 8 ರ ವರೆಗೆ ನಡೆಯಲಿದ್ದು ಉತ್ತಮ ಫಲಿತಾಂಶ ಪಡೆಯಲು ಶ್ರಮಿಸಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಮತ್ತು ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ರಂಗಸ್ವಾಮಿ ಮಾತನಾಡಿ, ಆರೋಗ್ಯ ಇಲಾಖೆಯಿಂದ ಸಾಂಕ್ರಾಮಿಕ ರೋಗಗಳು ಹರಡದಿರಲು ಕ್ರಮ ಕೈಗೊಳ್ಳಲಾಗಿದೆ. ಈಗ ಡೆಂಘೀ ಹತೋಟಿಗೆ ತಂದಿದ್ದು, ವಾರದಲ್ಲಿ ಒಂದು ದಿನ ಎಲ್ಲಾ ತಾಲೂಕುಗಳಲ್ಲಿ ಒಣದಿನ ಆಚರಿಸಲಾಗುತ್ತಿದೆ ಎಂದರು. ಜಿಪಂ ಉಪಾಧ್ಯಕ್ಷ ರಾಘವೇಂದ್ರ ಹನುಮಾನ್, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನೀಲಾ ಮಂಜುನಾಥ್, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಶಾಸಕರಿಂದ ಗ್ರಾಮ ಸಂಪರ್ಕ ಸಭೆ
ಬಂಗಾರಪೇಟೆ: ಗ್ರಾಮೀಣ ಪ್ರದೇಶಗಳ ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಹೂತ್ತೂರು ಹೋಬಳಿಯಲ್ಲಿ ಕೈಗೊಂಡಿರುವ ಗ್ರಾಮ ಸಂಪರ್ಕ ಸಭೆಗಳಿಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಭೆಯಲ್ಲಿ ಆಶ್ರಯ ಮನೆಗಳು, ಕುಡಿಯುವ ನೀರು, ರಸ್ತೆಗಳು, ರೇಷನ್ ಕಾರ್ಡ್ ಸಮಸ್ಯೆ ಸೇರಿದಂತೆ ನೂರಾರು ಅರ್ಜಿಗಳು ಶಾಸಕರಿಗೆ ಸಲ್ಲಿಸಿದರು. ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಎಲ್ಲಾ ಇಲಾಖೆ ಅಧಿಕಾರಿಗಳನ್ನು ಕರೆತಂದು ನಿವಾರಿಸುವ ಸಲುವಾಗಿ ಪ್ರತಿಗ್ರಾಮಕ್ಕೂ ಹೋಗಿ ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಪಂದಿಸಿದರು. ನಂತರ ಮಾತನಾಡಿದ ಶಾಸಕ ನಾರಾಯಣಸ್ವಾಮಿ, ಮನೆಗಳಿಗಾಗಿ ನೇರಾಗಿ ನನ್ನ ಬಳಿ ಬಂದು ಕೇಳಿ, ಪಿಡಿಒಗಳು ಸಂಬಳಕ್ಕಾಗಿ ಕೆಲಸ ಮಾಡದೆ ಮಾನವೀಯತೆ ಗುಣಗಳನ್ನು ಮೈಗೂಡಿಸಿಕೊಂಡು ಜನರ ಸಮಸ್ಯೆಗಳನ್ನು ತ್ವರಿತವಾಗಿ ಪೂರೈಸಿ ಎಂದು ನೀತಿ ಪಾಠ ಭೋದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

