ಮೋದಿ ರ್ಯಾಲಿಯ 5 ಸಾವಿರ ಟಿಕೆಟ್ಗಳ ಮಾರಾಟ
ಬಂಗಾರಪೇಟೆ: ಇದೇ ಭಾನುವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಭಾರತ ಗೆಲ್ಲಿಸಿ ಮೋದಿ ಸಮಾವೇಶಕ್ಕೆ ಕ್ಷೇತ್ರದಲ್ಲಿ 5ಸಾವಿರ ಟಿಕೆಟ್ಗಳು ಮಾರಾಟವಾಗಿದೆ ಎಂದು ಮಾಜಿ ಶಾಸಕ ಎಂ.ನಾರಾಯಣಸ್ವಾಮಿ ತಿಳಿಸಿದರು.
ಮೋದಿ ಸಮಾವೇಶಕ್ಕೆ ಇನ್ನು ಕೇವಲ ಎರಡು ದಿನಗಳು ಮಾತ್ರ ಬಾಕಿ ಇದ್ದರೂ ಈಗಲೂ ಟಿಕೆಟ್ ಮಾರಾಟವಾಗುತ್ತಲೆ ಇವೆ ಎಂದ ಅವರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೇವಲ 6 ತಿಂಗಳಲ್ಲೇ ಆ ಪಕ್ಷ ಜನರಿಂದ ಸ್ವಲ್ಪ ಸ್ವಲ್ಪವಾಗಿ ದೂರಸರಿಯುತ್ತಿದೆ ಹಾಗೂ ಬಿಜೆಪಿ ಅಲೆ ಪ್ರಾರಂಭವಾಗಿದೆ ಎಂಬುದಕ್ಕೆ ಮೋದಿ ಸಮಾವೇಶಕ್ಕೆ ಜನರಿಂದ ದೊರೆಯುತ್ತಿರುವ ಉತ್ತಮ ಪ್ರತಿಕ್ರಿಯೆ ಸಾಕ್ಷಿ ಅಂತೆಯೇ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 28 ಸ್ಥಾನಗಳ ಪೈಕಿ ಬಿಜೆಪಿ 20ರಲ್ಲಿ ಜಯಗಲಿಸಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಕೋಲಾರ ಲೋಕಸಭೆಯನ್ನು ಸತತವಾಗಿ 6 ಬಾರಿ ಪ್ರತಿನಿಧಿಸಿ ಎರಡು ಬಾರಿ ಕೇಂದ್ರ ಮಂತ್ರಿ ಸ್ಥಾನವನ್ನು ಅಲಂಕರಿಸಿರುವ ಕೆ.ಎಚ್. ಮುನಿಯಪ್ಪ ಜಿಲ್ಲೆಗೆ ನೀಡಿರುವ ಕೊಡುಗೆ ಏನು ಎಂಬುದು ಅವರಿಗೇ ಗೊತ್ತಿಲ್ಲ ಮಾತಿನಲ್ಲೇ ಕೆಜಿಎಫ್ ಚಿನ್ನದ ಗಣಿಯನ್ನು ಪ್ರಾರಂಬಿಸಿದ್ದಾರೆ ಹೊರತು ಈಗ ಯಾವ ಹಂತದಲ್ಲಿದೆ ಎಂಬುದು ಯಾರಿಗೂ ಗೊತ್ತಿಲ್ಲ. ಈ ಬಗ್ಗೆ ಮೊದಲು ಮುನಿಯಪ್ಪ ಬಹಿರಂಗಪಡಿಸಲಿ ಎಂದು ಹೇಳಿ ಗಣಿ ವಿಷಯವನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿರುವ ಸಚಿವ ಮುನಿಯಪ್ಪನವರಿಗೆ ಈ ಬಾರಿ ಮತದಾರರು ಮನೆಗೆ ಕಳುಹಿಸುವುದು ಖಚಿತ ಅಂತೆಯೇ ಪ್ರಥಮ ಬಾರಿ ಕೋಲಾರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಖಾತೆ ತೆರೆಯಲಿದೆ.ನಾನು ಸಹ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದು ಹೈಕಮಾಂಡ್ ನನಗೆ ಅವಕಾಶ ನೀಡಲಿದೆ ಎಂಬ ವಿಶ್ವಾಸವಿದೆ ಒಂದು ವೇಳೆ ಕೈತಪ್ಪಿದರೆ ಪಕ್ಷಕ್ಕಾಗಿ ಶ್ರಮಿಸುವೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

