ಕೋಲಾರ

ಸಚಿನ್‌ಗೆ ಭಾರತ ರತ್ನ; ಸಂಭ್ರಮಾಚರಣೆ

Published On :

ಚಿಕ್ಕಬಳ್ಳಾಪುರ: ರಾಷ್ಟ್ರದ ಮಹೋನ್ನತ ಭಾರತ ರತ್ನ ಪ್ರಶಸ್ತಿಯನ್ನು ಕ್ರೀಡಾ ಕ್ಷೇತ್ರದಲ್ಲಿನ ಅಪ್ರತಿಮ ಸಾಧನೆಗಾಗಿ ಸಚಿನ್ ತೆಂಡೂಲ್ಕರ್ ಅವರಿಗೆ ನೀಡಿದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಕ್ರೀಡಾಪಟು ಮಂಚನಬಲೆ ಶ್ರೀನಿವಾಸ್ ನೇತೃತ್ವದಲ್ಲಿ ಕ್ರೀಡಾಪಟುಗಳು ನಗರದಲ್ಲಿ ಸಿಹಿ ಹಂಚಿ ಸಂಭ್ರಮಿಸಿದರು.
ನಗರದ ಪ್ರವಾಸಿ ಮಂದಿರದಿಂದ ಸಂಭ್ರಮದ ಮೆರವಣಿಗೆ ನಡೆಸಿದ ಕ್ರೀಡಾಪಟುಗಳು ಶಿಡ್ಲಘಟ್ಟ ವೃತ್ತದಲ್ಲಿ ಪಟಾಕಿ ಸಿಡಿಸಿ ಸಚಿನ್ ಅವರಿಗೆ ಜೈಕಾರ ಕೂಗಿ ಹರ್ಷ ವ್ಯಕ್ತಪಡಿಸಿದರು.
ದೇಶಕ್ಕೆ ಹಾಕಿಯಲ್ಲಿ 4 ಬಾರಿ ಒಲಂಪಿಕ್ಸ್‌ನಲ್ಲಿ ಚಿನ್ನದ ಪದಕ ತಂದುಕೊಟ್ಟ ತಂಡದ ನಾಯಕರಾಗಿದ್ದ ಹಾಕಿ ಮಾಂತ್ರಿಕ ಧ್ಯಾನ್‌ಚಂದ್‌ಗೆ ಭಾರತ ಸರ್ಕಾರ 20 ವರ್ಷಗಳ ಹಿಂದೆಯೇ ಭಾರತ ರತ್ನ ಪ್ರಶಸ್ತಿ ಕೊಡಬೇಕಿತ್ತು. ಆದರೂ ಇನ್ನೂ ಕೊಟ್ಟಿಲ್ಲ. ಅಲ್ಲದೇ ಇನ್ನೊಬ್ಬ ಕ್ರೀಡಾಪಟು ಮಿಲ್ಕಾಸಿಂಗ್ ಅವರಿಗೂ ಸಹ ಸಿಕ್ಕಿಲ್ಲ. ಮುಂದಿನ ದಿನಗಳಲ್ಲಾದರೂ ಭಾರತ ರತ್ನ ಪ್ರಶಸ್ತಿಯನ್ನು ಇವರಿಗೂ ನೀಡಬೇಕೆಂದು ಒತ್ತಾಯಿಸಿದರು.
ವಿಜಯೋತ್ಸವದಲ್ಲಿ ಕ್ರೀಡಾಪಟುಗಳಾದ ಮಂಚನಬಲೆ ಶ್ರೀನಿವಾಸ್, ಸಂತೋಷ್, ಮನೋಹರ್, ಮುಸ್ತಾಖ್, ಮಾರುತಿ, ಎಂ.ಸಿ. ನಾಗರಾಜು, ಉತ್ತಮ್, ಬುಜ್ಜಿ, ದಿವಾಕರ್, ಸುಹೇಲ್, ಯಕ್ತಾರೆಡ್ಡಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.