ಹುದ್ದೆ ಎನ್ನುವುದು ಘನತೆ, ಗೌರವ ಅಲ್ಲ: ಸ್ವಾಮೀಜಿ
ಗೌರಿಬಿದನೂರು: ಯುವ ಪೀಳಿಗೆಯಿಂದ ದೇಶ ಮತ್ತು ಸಮುದಾಯಗಳ ಅಭಿವೃದ್ಧಿ ಸಾಧ್ಯ ಎಂದು ಬೆಂಗಳೂರಿನ ಸರ್ಪಭೂಷಣ ಮಠದ ಮಲ್ಲಿಕಾರ್ಜುನ ಸ್ವಾಮೀಜಿ ಅಭಿಪ್ರಾಯಪಟ್ಟರು. ಪಟ್ಟಣದ ಬಸವೇಶ್ವರ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಶ್ರೀ ಜಗಜ್ಯೋತಿ ಬಸವೇಶ್ವರ ಸಂಘದ ಉದ್ಘಾಟನೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತಿ ನೌಕರರ ಸನ್ಮಾನ ಸಮಾರಂಭ ಉದ್ಘಾಟನೆ ಸಮಾರಂಭವನ್ನು ಉದ್ದೇಶಿಸಿ ಮಾತನಾಡುತ್ತ ಜನಾಂಗದ ವಿದ್ಯಾರ್ಥಿಗಳು ಸಮುದಾಯದ ವಿದ್ಯಾರ್ಥಿ ನಿಲಯಗಳನ್ನು ಸದುಪಯೋಗಪಡಿಸಿಕೊಂಡು ಒಳ್ಳೆಯ ವಿದ್ಯಾರ್ಥಿಗಳಾಗಬೇಕು. ರಾಜ್ಯಾದಂತ ನಮ್ಮ ಸಮುದಾಯದ 22 ಮಠಗಳಲ್ಲಿ ಉಚಿತ ವಿದ್ಯಾಭ್ಯಾಸ ನೀಡುತ್ತಿದೆ ಎಂದರು. ಇತ್ತೀಚಿನ ದಿನಗಳಲ್ಲಿ ವಿದ್ಯೆ ಎನ್ನುವುದು ಹುದ್ದೆಗೆ ಮಾತ್ರ ಸೀಮಿತವಾಗಿದೆ. ಹುದ್ದೆ ಎನ್ನುವುದು ಕೇವಲ ಸೇವಾ ಮನೋಭಾವ ವರೆತು ಘನತೆ ಗೌರವ ಅಲ್ಲ, ವಿದ್ಯೆ ಕಲಿತು ಲೋಕಾರ್ಪಣೆ ಮಾಡಿದಾಗ ಇಂತಹ ಪ್ರತಿಭಾ ಪುರಸ್ಕಾರಗಳಿಗೆ ಮನ್ನಣೆ ಸಿಗುತ್ತದೆ. ಶ್ರದ್ಧೆಯಿಂದ ವಿದ್ಯೆ ಕಲಿತು ನಿಸ್ವಾರ್ಥದಿಂದ ಕೆಲಸ ಮಾಡಿದಾಗ ಈ ಸಮಾಜಕ್ಕೆ ನಿಜವಾದ ಕೊಡುಗೆ ನೀಡಿದಂತಾಗುತ್ತದೆ ಎಂದಿ ಸಲಹೆ ನೀಡಿದರು.
ಗೊಂದಲ ಬೇಡ: ವೀರಶೈವ ಮತ್ತು ಲಿಂಗಾಯಿತ ಇದು ಜನಾಂಗದಲ್ಲಿ ಗೊಂದಲ ಉಂಟಾಗಿದ್ದು ಇದು ರಾಜಕೀಯ ಪ್ರೇರಿತ ಹೇಳಿಕೆಯಾಗಿದ್ದು ಎರಡು ಸಮುದಾಯ ಒಂದೇ ಜನಾಂಗ ಆಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಜನಾಂಗದ ನಿವೃತ್ತಿ ನೌಕರರಿಗೆ ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ತರಗತಿಯಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ಸನ್ಮಾನ ಸಮಾರಂಭ ನಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

