ಕೋಲಾರ

ಅರ್ಹ ಫಲಾನುಭವಿಗಳಿಗೇ ವಸತಿ ಕಲ್ಪಿಸಿ

Published On :

ಚಿಂತಾಮಣಿ: ಅರ್ಹ ಫಲಾನುಭವಿಗಳನ್ನು ಗುರುತಿಸಿ ವಸತಿ ಹೀನರಿಗೆ ವಸತಿ ಕಲ್ಪಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಸೂಚಿಸಿದರು.
ಅವರು ಪಟ್ಟಣದಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬಸವ ವಸತಿ ಯೋಜನೆಯಡಿಯಲ್ಲಿ ಅರ್ಹಫಲಾನುಭವಿಗಳನ್ನು ಗುರ್ತಿಸಿ ಆಯ್ಕೆ ಮಾಡಲು ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ  ಅಧಿಕಾರಿಗಳ ಜೊತೆ ಚರ್ಚಿಸಿ ಮಾತನಾಡಿದರು. ತಾಲೂಕಿನ ಹಲವಾರು ಹಳ್ಳಿಗಳಲ್ಲಿ ಇರುವ ಗುಡಿಸಲು ಮನೆಗಳನ್ನು ತೆರವುಗೊಳಿಸಿ, ಗುಡಿಸಲು ರಹಿತ ವಸತಿಗಳನ್ನು ನಿರ್ಮಿಸಲು ಹಾಗೂ ಅರ್ಹ ಬಡವರನ್ನು ಗುರುತಿಸಿ ಮನೆಗಳನ್ನು ವಿತರಿಸಲು ಸಭೆಯಲ್ಲಿ ಭಾಗವಹಿಸಿದ ಅಧಿಕಾರಿಗಳಿಗೆ ಅಧಿಕಾರಿಗಳ ಜೊತೆ ಚರ್ಚಿಸಿದರು.
ನಂತರ ಜಿ.ಪಂ. ಅಧ್ಯಕ್ಷ ಎಸ್.ಎನ್. ಚಿನ್ನಪ್ಪ ಮಾತನಾಡಿ ಅಧಿಕಾರಿಗಳು ಖುದ್ದು ಗ್ರಾಮಗಳಿಗೆ ಭೇಟಿ ನೀಡಿ ಅರ್ಹ ಬಡವರನ್ನು ಗುರ್ತಿಸಿ ಮನೆಗಳನ್ನು ನಿರ್ಮಿಸಿಕೊಳ್ಳಲು ಸಹಕಾರ ನೀಡಿದ್ದಲ್ಲಿ ಚಿಂತಾಮಣಿ ಕ್ಷೇತ್ರವು ಗುಡಿಸಲು ರಹಿತ ಕ್ಷೇತ್ರವನ್ನಾಗಿ ಮಾಡಲು ಸಾಧ್ಯವೆಂದು ಹೇಳಿದರು. ನಂತರ ತಾ.ಪಂ. ಅಧ್ಯಕ್ಷೆ ಗೌರಮ್ಮ ನಾಗೇಶ್ ಹಾಗೂ ಉಪಾಧ್ಯಕ್ಷ ನಾಗರಾಜು ಮಾತನಾಡಿ ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಹಳ್ಳಿ ಬಡಜನರ ಆಯ್ಕೆ ಫಲಾನುಭವಿಗಳ ಪಟ್ಟಿಯನ್ನು ಗುರುತಿಸಿ ವಿತರಿಸಬೇಕೆಂದು ಸೂಚಿಸಿದರು.
ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ವಸಂತ್‌ಕುಮಾರ್, ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿಯ ಪಿ.ಡಿ.ಒ ಅಧಿಕಾರಿಗಳ ಜೊತೆ ವಸತಿ ಫಲಾನುಭವಿಗಳ ಪಟ್ಟಿಯ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಜಿ.ಪಂ. ಸದಸ್ಯರಾದ ವೀಣಾ ಗಂಗುಲಪ್ಪ, ತಾಲೂಕು ಅಧ್ಯಕ್ಷರಾದ ಕೆ.ವಿ. ಮೀನಾ ಶ್ರೀರಾಮರೆಡ್ಡಿ, ಮಾಜಿ ಉಪಾಧ್ಯಕ್ಷರಾದ ಸುಲ್ತಾನ್ ಷರೀಫ್, ಸದಸ್ಯರಾದ ಸ್ಕೂಲ್ ಸುಬ್ಬಿರೆಡ್ಡಿ, ಕೃಷ್ಣಪ್ಪ, ರೆಡ್ಡೆಪ್ಪ, ಶೇಖರ್‌ಬಾಬು, ಆಂಜಮ್ಮ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.