ಇಂದು ಕಾನೂನು ಅರಿವು-ನೆರವು
ಕೋಲಾರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆಡಳಿತ, ಜಿಲ್ಲಾ ಕಾರ್ಮಿಕ ಇಲಾಖೆ, ವಕೀಲರ ಸಂಘ, ಜಾಗೃತಿ ಸೇವಾ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಬಗ್ಗೆ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ನ.22 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಅಲ್ ಅಮೀನ್ ವಿದ್ಯಾಸಂಸ್ಥೆಗಳ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಎಸ್. ರೇಣುಕಾಪ್ರಸಾದ್ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾಧಿಕಾರಿ ಹಾಗೂ ಬಾಲಕಾರ್ಮಿಕರ ನೇಮಕಾತಿ ನಿರ್ಮೂಲನಾ ಪ್ರಚಾರ ಸಂಘದ ಅಧ್ಯಕ್ಷರಾದ ಡಿ.ಕೆ. ರವಿ ಅಧ್ಯಕ್ಷತೆ ವಹಿಸುವರು. ಎಸ್ಪಿ ಡಾ. ರಾಮನಿವಾಸ್ ಸಫಟ್ ಛಾಯಾಚಿತ್ರಗಳ ಪ್ರದರ್ಶನ ಉದ್ಘಾಟಿಸಲಿದ್ದಾರೆ.
50 ಗೃಹರಕ್ಷಕರ ನಿಯೋಜನೆ
ಕೋಲಾರ: ಮಧ್ಯಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಬಂದೋಬಸ್ತ್ ಕರ್ತವ್ಯಕ್ಕೆ ಕರ್ನಾಟಕ ರಾಜ್ಯದಿಂದ 2 ಸಾವಿರ ಗೃಹರಕ್ಷಕರನ್ನು ಶಾಂತಿ ಸುವ್ಯವಸ್ಥೆ ಕಾಪಾಡಲು ನಿಯೋಜನೆ ಮಾಡಿದ್ದು ಈ ಪೈಕಿ ಕೋಲಾರ ಜಿಲ್ಲೆಯ 50 ಗೃಹರಕ್ಷಕರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಗೃಹ ರಕ್ಷಕದಳದ ಜಿಲ್ಲಾ ಕಮಾಂಡೆಂಟ್ ಮರಿಸ್ವಾಮಿ ತಿಳಿಸಿದ್ದಾರೆ.
ಟಿಕೆಟ್ ರಹಿತ ಪ್ರಯಾಣ; ದಂಡ
ಕೋಲಾರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೋಲಾರ ವಿಭಾಗದಲ್ಲಿ ಕಳೆದ ಅಕ್ಟೋಬರ್ನಲ್ಲಿ 4144.4 ಬಸ್ಸುಗಳನ್ನು ತಪಾಸಣೆ ಮಾಡಿ , 11077 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, 109030 ರು.ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಇಂದು ಆರೋಗ್ಯವಂತ ಮಕ್ಕಳ ಸ್ಪರ್ಧೆ
ಕೋಲಾರ: ನಗರದ ಡಾ.ಆಶಾಸ್ ಪಿಡಿಯಾಟ್ರಿಕ್ ಕೇರ್ ಚಿಲ್ಡ್ರನ್ ಹಾಸ್ಪಿಟಲ್, ಬ್ರಿಟಿಷ್ ಲೈಫ್ಲೈನ್ ಸೈನ್ಸ್, ಹಾಗೂ ಪಾರ್ವತಿ ಎಂಟರ್ಪ್ರೈಸಸ್ ಸಂಯುಕ್ತಾಶ್ರಯದಲ್ಲಿ ನ.22ರ ಶುಕ್ರವಾರ ಆರೋಗ್ಯವಂತ ಮಕ್ಕಳ ಸ್ಪರ್ಧೆಯನ್ನು 3 ತಿಂಗಳಿನಿಂದ 3 ವರ್ಷದವರೆಗಿನ ಮಕ್ಕಳಿಗಾಗಿ 3 ವಿಭಾಗಗಳಲ್ಲಿ ಹಮ್ಮಿಕೊಳ್ಳಲಾಗಿದೆ. ನಗರದ ಅಂತರಗಂಗೆ ರಸ್ತೆಯಲ್ಲಿರುವ ಡಾ.ಆಶಾಸ್ ಪಿಡಿಯಾಟ್ರಿಕ್ ಕೇರ್ ಚಿಲ್ಡ್ರನ್ ಹಾಸ್ಪಿಟಲ್ನಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ, ಮಧ್ಯಾಹ್ನ 2 ಗಂಟೆಗೆ ಬಹುಮಾನ ವಿತರಣೆ ನಡೆಯಲಿದೆ. ಡಾ. ಆಶಾ ಅಧ್ಯಕ್ಷತೆ ವಹಿಸಲಿದ್ದಾರೆ. ಬ್ರಿಟಿಷ್ ಬಯಾಲಿಜಿಕಲ್ಸ್ನ ಲೈಫ್ಸೆಸೈನ್ಸ್ ವಿಭಾಗದ ಮುಖ್ಯಸ್ಥೆ ಪ್ರಿಯಾಂಕಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆಂದು ಪಾರ್ವತಿ ಎಂಟರ್ಪ್ರೈಸಸ್ನ ಬಿ. ಸುರೇಶ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

