ಕುರಿ, ಕಂಬಳಿಯೊಂದಿಗೆ ಶಾಸಕರಿಗೆ ಸನ್ಮಾನ
ಕೋಲಾರ: ಕನಕ ಜಯಂತಿ ಪ್ರಯುಕ್ತ ನಗರದ ಟಿ. ಚನ್ನಯ್ಯ ರಂಗ ಮಂದಿರದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅಭಿಮಾನಿಗಳು ಶಾಸಕ ವರ್ತೂರ್ ಆರ್. ಪ್ರಕಾಶ್ ಅವರಿಗೆ ಕುರಿ ಮತ್ತು ಕಂಬಳಿಯೊಂದಿಗೆ ಸನ್ಮಾನಿಸಿದರು.
ಜಿಲ್ಲಾ ಆಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶಾಸಕರು ವಿದ್ವಾನ್ ಕೋಲಾರ ರಮೇಶರವರ ಜಯನಾಟ್ಯ ಕಲಾ ಆಕಾಡೆಮಿ ವತಿಯಿಂದ ಆಯೋಜಿಸಿದ್ದ ಕನಕ ದಾಸರ ಕೀರ್ತನೆಗಳಿಗೆ ನೃತ್ಯರೂಪಕ ವೀಕ್ಷಿಸಿ ಸಂತಸ ವ್ಯಕ್ತಪಡಿಸಿ, ಕನಕ ದಾಸರ ಕೀರ್ತಿನೆಗಳನ್ನು ಜಿಲ್ಲೆಯಾಧ್ಯಂತ ಪ್ರಸರಿಸಬೇಕೆಂದರು. ಮುಖ್ಯ ಅತಿಥಿಗಳಾಗಿ ಅರ್ಬನ್ ಬ್ಯಾಂಕ್ ಅಧ್ಯಕ್ಷ ರಾಜಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಎಸ್. ವೆಂಕಟಾಚಲಪತಿ, ಕಜೆ.ಜಿ. ನಾಗರಾಜ್, ತಂಬಿಹಳ್ಳಿ ಮುನಿಯಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

