'ಪಟ್ಟಣದವರೆಗೂ ರೈತ ಸಂಘದ ಬಲ'
ಚಿಂತಾಮಣಿ: ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಶಾಖೆಯನ್ನು ಹಳ್ಳಿಯಿಂದ ಪಟ್ಟಣ ಪ್ರದೇಶದವರೆಗೂ ಸಂಘಟನೆಯನ್ನು ಬಲಪಡಿಸುವುದಾಗಿ ನೂತನ ತಾಲೂಕು ಅಧ್ಯಕ್ಷ ತಿಮ್ಮರಾಯಪ್ಪ ಹೇಳಿದರು.
ಪಟ್ಟಣದಲ್ಲಿನ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಸಮಿತಿಯ ಸಭೆಯನ್ನು ರಾಜ್ಯ ಕಾರ್ಯದರ್ಶಿ ಅಬ್ಬನಿ ಶಿವಪ್ಪ ರವರ ಉಸ್ತುವಾರಿಯಲ್ಲಿ ಜಿಲ್ಲಾಧ್ಯಕ್ಷರಾದ ಜಿ. ಮಂಜುನಾಥ್ ಸಮಕ್ಷಮದಲ್ಲಿ ಸಭೆ ಸೇರಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ (ಕೋಡಿಹಳ್ಳಿ ಚಂದ್ರಶೇಖರ್) ಬಣ ಸಂಘಟನೆಯನ್ನು ಬಲಪಡಿಸಲು ಗುರುವಾರ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ತಾಲೂಕು ಅಧ್ಯಕ್ಷರಾಗಿ ಐಮರೆಡ್ಡಿಹಳ್ಳಿ ಗ್ರಾಮದ ತಿಮ್ಮರಾಯಪ್ಪ ಗೌರವಾಧ್ಯಕ್ಷರಾಗಿ ಎಂ.ಪಿ.ಬೈಯ್ಯಪ್ಪರೆಡ್ಡಿ, ಕಾರ್ಯಾಧ್ಯಕ್ಷ ಎಸ್. ವೆಂಕಟಸುಬ್ಬಾರೆಡ್ಡಿ, ಉಪಾಧ್ಯಕ್ಷರಾಗಿ ವೆಂಕಟರಮಣರೆಡ್ಡಿ, ವೆಂಕಟಶಿವಾರೆಡ್ಡಿ, ಪ್ರಧಾನ ಕಾರ್ಯದರ್ಶಿಯನ್ನಾಗಿ ಬಿ.ಎಂ. ಮುನಿವೆಂಕಟಪ್ಪ, ಪಿ.ಎಸ್. ಶಂಕರರೆಡ್ಡಿ, ಸಂಘಟನಾ ಕಾರ್ಯದರ್ಶಿಯನ್ನಾಗಿ ಸಿದ್ದೇಪಲ್ಲಿ ವೆಂಕಟರವಣಪ್ಪ ಮತ್ತು ಕೆ. ವೆಂಕಟರಾಮಯ್ಯ ಆಯ್ಕೆಯಾಗಿದ್ದಾರೆ. ಮಹಿಳಾ ಘಟಕದ ಸಂಚಾರಕರನ್ನಾಗಿ ಶಾಂತಮ್ಮ ಜಿಲ್ಲಾ ಘಟಕದ ಸದಸ್ಯರನ್ನಾಗಿ ಆಂಜನೇಯರೆಡ್ಡಿಯವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

