ಕೃಷಿ ಉತ್ಪನ್ನ ಆಮದಿಗೆ ವಿರೋಧ
ಕೋಲಾರ: ಕೃಷಿ ಉತ್ಪನ್ನಗಳ ಆಮದು ನಿಲ್ಲಿಸಲು, ಬಯಲುಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿಗಾಗಿ ಹಾಗೂ ರೈತರು ಬೆಳೆಯುವ ಬೆಳೆಗಳಿಗೆ ನ್ಯಾಯವಾದ ಬೆಲೆ ನಿಗದಿ ಪಡಿಸಲು ಒತ್ತಾಯಿಸಿ ನ.25 ರಂದು ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವುದಾಗಿ ರೈತ ಸಂಘದ ಜಿಲ್ಲಾ ಸಂಚಾಲಕ ಕೆ. ಶ್ರೀನಿವಾಸಗೌಡ ತಿಳಿಸಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ರೈತರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ವಿಶ್ವ ವಾಣಿಜ್ಯ ಒಪ್ಪಂದಕ್ಕೆ ಭಾರತ ಸರ್ಕಾರ ಸಹಿ ಮಾಡಿದ ನಂತರ ಮುಕ್ತ ಮಾರುಕಟ್ಟೆಯ ನೀತಿ ಹೆಸರಿನಲ್ಲಿ ರೈತರು ಉತ್ಪಾದಿಸುವ ವಸ್ತುಗಳನ್ನೇ ಹೊರ ದೇಶಗಳಿಂದ ಆಮದು ಮಾಡಿಕೊಳ್ಳುತ್ತಾ ರೈತರನ್ನು ನಾಶ ಮಾಡಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು. ಜಿಲ್ಲೆಯಿಂದ 500 ಕ್ಕೂ ಹೆಚ್ಚು ರೈತರು ಸುವರ್ಣ ಸೌಧ ಮುತ್ತಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುವರೆಂದು ತಿಳಿಸಿದರು. ರೈತ ಸಂಘದ ಜಿಲ್ಲಾಧ್ಯಕ್ಷ ನಾರಾಯಣಗೌಡ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಹುಲ್ಕೂರು ಹರಿಕುಮಾರ್, ಹೂವಹಳ್ಳಿ ನಾಗರಾಜ್, ಮೂರಂಡಹಳಿ ಶಿವಾರೆಡ್ಡಿ, ನೀಲಟೂರು ರಮೇಶ್, ಮಾಸ್ತಿ ಬಾಬು, ತೆರ್ನಹಳ್ಳಿ ಆಂಜಿನಪ್ಪ, ವೆಂಕಿ, ಗಂಗಾಧರ್, ರಂಜಿತ್ ಕುಮಾರ್, ಸಾಗರ್, ಗೋಟುಕುಂಟೆ ವಿಶ್ವನಾಥ್, ಐತಂಹಳ್ಳಿ ಉದಯ್, ನೀಲಕಂಠಪುರ ಮುನೇಗೌಡ, ಈಕಂಬಳ್ಳಿ ಮಂಜುನಾಥ್, ಗಣೇಶ್, ಅಮರನಾರಾಯಣಸ್ವಾಮಿ, ಪುರುಷೋತ್ತಮ್, ಕೆಂಬೋಡಿ ಕೃಷ್ಣೇಗೌಡ, ಕ್ಯಾಸಂಬಳ್ಳಿ ಪ್ರತಾಪ್ ಇದ್ದರು.
ಯೋಜನೆ ಯಶಸ್ಸಿಗೆ ಸಹಕರಿಸಲು ಸೂಚನೆ
ಮುಳಬಾಗಲು: ರಾಜ್ಯದಲ್ಲಿ 15 ತಾಲೂಕುಗಳನ್ನು ಗುರ್ತಿಸಿ ಪೈಲಟ್ ಯೋಜನೆಗೆ ಭಾರತ ಅಭಿಯಾನದ ಮೂಲಕ ಕುಡಿಯುವ ನೀರು ಮತ್ತು ಸ್ವಚ್ಛತೆಗೆ ಸರ್ಕಾರ ಕೋಟ್ಯಂತರ ರು.ಗಳನ್ನು ವೆಚ್ಚ ಮಾಡುತ್ತಿದ್ದು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಯೋಜನೆ ಯಶಸ್ಸಿಗೆ ಸಹಕರಿಸಲು ಗ್ರಾಮೀಣಾಭಿವೃದ್ಧಿ ಪ್ರಧಾನ ಕಾರ್ಯದರ್ಶಿ ವಿಜಯಭಾಸ್ಕರ್ ಸೂಚಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ತಾಪಂ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು, ಗ್ರಾಪಂ ಪದಾಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಪ್ರತಿ ಮನೆಗೂ ಹತ್ತು ರು.ಗಳಂತೆ ತೆರಿಗೆ ವಿಧಿಸಿ ಕೊಳಾಯಿ ಮೂಲಕ ನೀರು ಪೊರೈಸಬೇಕು ಎಂದು ಸೂಚಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

