ಖಾಸಗಿ ಕಾರ್ಖಾನೆ ಮೇಲೆ ಕಲ್ಲು ತೂರಾಟ; ಲಘು ಲಾಠಿ ಪ್ರಹಾರ
ಕೋಲಾರ: ತಾಲೂಕಿನ ನರಸಾಪುರದ ಬಡ್ವಾ ಎಂಬ ಖಾಸಗಿ ಕಾರ್ಖಾನೆಯಲ್ಲಿ ಕನ್ನಡಿಗರನ್ನು ಕೆಲಸದಿಂದ ತೆಗೆದು ಹೊರಗಿನವರನ್ನು ಕೆಲಸಕ್ಕೆ ಸೇರಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ಕಾರ್ಖಾನೆಯ ಮೇಲೆ ಕಲ್ಲು ತೂರಾಡಿ ಗಾಜುಗಳನ್ನು ಪುಡಿ ಪುಡಿ ಮಾಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಕಾರ್ಖಾನೆ ಮಾಲೀಕರು ಕನ್ನಡ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ. ಸ್ಥಳೀಯರಿಗೆ ಉದ್ಯೋಗ ನೀಡುತ್ತಿಲ್ಲವೆಂದು ಪ್ರತಿಭಟನಾಕಾರರು ದೂರಿದ್ದಾರೆ. ವಿಷಯ ತಿಳಿದ ವೇಮಗಲ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಗುಂಪು ಚದುರಿಸಲು ಲಘುಲಾಠಿ ಪ್ರಹಾರ ನಡೆಸಿದ್ದಾರೆ. ಇದಕ್ಕೆ ಜಗ್ಗದ ಗ್ರಾಮಸ್ಥರು, ಕೆಲಸದಿಂದ ತೆಗೆದು ಹಾಕಿರುವ ಕಾರ್ಮಿಕರನ್ನು ಕೂಡಲೇ ಸೇರಿಸಿಕೊಳ್ಳಬೇಕು. ಸರ್ಕಾರ ಕನ್ನಡ ವಿರೋಧಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನೆ ನಡೆಸಿದ್ದು ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ವೇಮಗಲ್ ಪಿಎಸ್ಐ ಯಶವಂತ್ ಪ್ರಯತ್ನ ಮುಂದುವರೆಸಿದ್ದಾರೆ.
ಮತ್ತೊಂದು ಪ್ರತಿಭಟನೆ: ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಹೊಸದಾಗಿ ಆರಂಭಗೊಂಡಿರುವ ಸ್ಕಾನಿಯಾ ಕಂಪನಿಯಲ್ಲೂ ಸ್ಥಳೀಯರಿಗೆ ಉದ್ಯೋಗ ನೀಡುತ್ತಿಲ್ಲವೆಂದು ಆರೋಪಿಸಿ ಗ್ರಾಮಸ್ಥರು ಗುರುವಾರ ಕಾರ್ಖಾನೆಯ ಮುಂದೆ ಪ್ರತಿಭಟನೆ ನಡೆಸಿದರು.
ಕಣ್ಣಿನ ಶಸ್ತ್ರ ಚಿಕಿತ್ಸಾ ಶಿಬಿರ
ಶಿರಾ: ಶಿರಾದ ಗ್ಲೋಬಲ್ ವೆಲ್ಫೇರ್ ಆರ್ಗನೈಜೇಷನ್ ಅವರು ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ನಗರದ ಅಲ್ ಅಮೀನ್ ಪಾಠಶಾಲೆ ಹತ್ತಿರ ಉಚಿತ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರವನ್ನು ಏರ್ಪಡಿಸಿದ್ದರು. ಎಸ್ಐ ಕೊಟ್ರೇಶ್ ಉದ್ಘಾಟಿಸಿದರು. ಅಮೀರ್ ಜಾನ್ ಮಾತನಾಡಿ, ನಮ್ಮ ಸಂಸ್ಥೆಯು ನಾಲ್ಕು ವರ್ಷದಲ್ಲಿ 12 ಶಿಬಿರಗಳನ್ನು ನಡೆಸಿದ್ದು ಈವರೆಗೆ 2997 ಜನರಿಗೆ ನೇತ್ರ ತಪಾಸಣೆ ನಡೆಸಿ 350 ಪುರುಷ, 450 ಮಹಿಳೆ, 35 ಮಕ್ಕಳು ಮರು ದೃಷ್ಟಿ ನೀಡಲಾಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

