ಜೆಎಂಎಫ್ಸಿ ವಸತಿ ಗೃಹ ಉದ್ಘಾಟನೆ
ಚಿಕ್ಕಬಳ್ಳಾಪುರ: ಚಿಂತಾಮಣಿಯ ನ್ಯಾಯಾಲಯದ ಆವರಣದಲ್ಲಿ ನ.24 ರ ಬೆಳಗ್ಗೆ 10 ಕ್ಕೆ ಚಿಂತಾಮಣಿ ನ್ಯಾಯಾಲಯ ಸಂಕೀರ್ಣದ ಮೊದಲನೇ ಮಹಡಿಯ ಹಾಗೂ ಅಡಿಷನಲ್ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ. ವಸತಿ ಗೃಹ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿದೆ. ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿ ವಿ. ಗೋಪಾಲಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದು ನ್ಯಾಯಮೂರ್ತಿ ಅರವಿಂದಕುಮಾರ್ ಅಧ್ಯಕ್ಷತೆ ವಹಿಸುವರು.ಮುಖ್ಯ ಅತಿಥಿಗಳಾಗಿ ನ್ಯಾಯಮೂರ್ತಿಗಳಾದ ಕೆ.ಎಲ್. ಮಂಜುನಾಥ್, ಎನ್.ಕೆ. ಪಾಟೀಲ್, ಹೆಚ್.ಎನ್.ನಾಗಮೋಹನ್ದಾಸ್, ಆನಂದಬೈರಾರೆಡ್ಡಿ, ಎ.ಎನ್. ವೇಣುಗೋಪಾಲಗೌಡ, ಕೇಂದ್ರ ಸಚಿವ ಕೆ.ಹೆಚ್. ಮುನಿಯಪ್ಪ, ಲೋಕೋಪಯೋಗಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಕಾನೂನು ಸಚಿವ ಟಿ.ಬಿ. ಜಯಚಂದ್ರ, ಆಹಾರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಶಾಸಕ ಎಂ. ಕೃಷ್ಣಾರೆಡ್ಡಿ ಭಾಗವಹಿಸಲಿದ್ದಾರೆ.
ಅರ್ಜಿ ಆಹ್ವಾನ
ಚಿಕ್ಕಬಳ್ಳಾಪುರ: 2013-14ನೇ ಸಾಲಿನ ವಿಶೇಷ ಘಟಕ ಯೋಜನೆ ಗಿರಿಜನ ಉಪ ಯೋಜನೆಗಳಡಿ 3
ತಿಂಗಳ ಅವಧಿಯ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದವರು ಮಾತ್ರ ಅರ್ಜಿಯನ್ನು ಸಲ್ಲಿಸಬೇಕಾಗಿದ್ದು ಪರಿಶಿಷ್ಟ ಜಾತಿಯವರಿಗೆ ಚಿಕ್ಕಬಳ್ಳಾಪುರದಲ್ಲಿ ಎಲೆಕ್ಟ್ರಿಕಲ್ ವೈರಿಂಗ್, ಚಿಂತಾಮಣಿಯಲ್ಲಿ ಡಿಟಿಪಿ ಹಾಗೂ ಪರಿಶಿಷ್ಟ ಪಗಂಡದವರಿಗೆ ಚಿಕ್ಕಬಳ್ಳಾಪುರದಲ್ಲಿ ಪ್ಲಂಬಿಂಗ್ ಅಂಡ್ ಸ್ಯಾನಿಟರಿ, ಬಾಗೇಪಲ್ಲಿಯಲ್ಲಿ ಎಲೆಕ್ಟ್ರಿಕಲ್ ವೈರಿಂಗ್ ತರಬೇತಿ ನೀಡಲಾಗುವುದು. ಅರ್ಜಿಯನ್ನು ತಾಲೂಕು ಕೈಗಾರಿಕಾ ವಿಸ್ತರಣಾಧಿಕಾರಿಗಳಿಂದ ಪಡೆದು ಭರ್ತಿ ಮಾಡಿ ನ.30 ರೊಳಗೆ ಸಲ್ಲಿಸಬೇಕು.ಹೆಚ್ಚಿನ ವಿವರಗಳಿಗಾಗಿ ತಾಲ್ಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಅಥವಾ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಬಿ.ಬಿ. ರಸ್ತೆ, ಚಿಕ್ಕಬಳ್ಳಾಪುರ ಕಚೇರಿಯನ್ನು ಸಂಪರ್ಕಿಸಬಹುದು.
ಇಂದು ಗಾಯನ ಕಾರ್ಯಕ್ರಮ
ಚಿಕ್ಕಬಳ್ಳಾಪುರ: ನಗರದ ಹೊರ ವಲಯದಲ್ಲಿರುವ ಸಿವಿವಿ ಕ್ಯಾಂಪಸ್ನ ಸರ್.ಎಂ. ವಿಶ್ವೇಶ್ವರಯ್ಯ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನ.23 ರಂದು ಮಧ್ಯಾಹ್ನ 1 ಕ್ಕೆ ಕನ್ನಡ ನಾಟಕ ಹಾಗೂ ರಂಗಗೀತೆಗಳ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಿವಿವಿ ಕ್ಯಾಂಪಸ್ನ ಆಶ್ರಯದಲ್ಲಿ ನಡೆಯಲಿರುವ ಸಮಾರಂಭದ ಅಧ್ಯಕ್ಷತೆಯನ್ನು ಕೆ.ವಿ. ಮತ್ತು ಪಂಚಗಿರಿ ವಿದ್ಯಾದತ್ತಿ ಅಧ್ಯಕ್ಷ ಕೆ.ವಿ. ನವೀನ್ ಕಿರಣ್ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಸರ್.ಎಂ. ವಿಶ್ವೇಶ್ವರಯ್ಯ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಂಶುಪಾಲ ಹನುಮಂತರೆಡ್ಡಿ, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕಿ ಡಾ.ಕೆ.ಎನ್. ಕವನ ಭಾಗವಹಿಸುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

