ನಾಳೆ ಅಭಿವೃದ್ಧಿ ಕಾಮಗಾರಿಗೆ ಮೊಯ್ಲಿ ಚಾಲನೆ
ಚಿಕ್ಕಬಳ್ಳಾಪುರ: ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಎಂ. ವೀರಪ್ಪ ಮೊಯ್ಲಿ ನ.24 ರಂದು ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡುತ್ತಿದ್ದು ನ.24 ರಂದು ಬೆಳಗ್ಗೆ 9.30 ಕ್ಕೆ ಚಿಕ್ಕಬಳ್ಳಾಪುರದ ನಗರದ ಭುವನೇಶ್ವರಿ ವೃತ್ತದಲ್ಲಿ ಆಯೋಜಿಸಲಾಗಿರುವ ಚಿಕ್ಕಬಳ್ಳಾಪುರ ನಗರಸಭೆ ವ್ಯಾಪ್ತಿಯ ನಗರೋತ್ಥಾನದ ವಿವಿಧ ಕಾಮಗಾರಿಯ ಗುದ್ದಲಿ ಪೂಜಾ ಕಾರ್ಯಕ್ರಮ ಹಾಗೂ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು. ಬೆಳಗ್ಗೆ 11 ಗಂಟೆಗೆ ಹಳೇ ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಡೆಯುವ ಸಾಲಮೇಳ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಗ್ರಾಮೀಣ ಸಾಲ ಮಹೋತ್ಸವ
ಚಿಕ್ಕಬಳ್ಳಾಪುರ: ಕೆನರಾ ಬ್ಯಾಂಕ್ವ್ತಿಯಿಂದ ಶಿಕ್ಷಣ ಸಾಲ ಮತ್ತು ಗ್ರಾಮೀಣ ಸಾಲ ಮಹೋತ್ಸವವನ್ನು ನ.24 ರಂದು ಬೆಳಗ್ಗೆ 11 ಗಂಟೆಗೆ ನಗರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಲಾಗಿದೆ. ಮುಖ್ಯ ಅತಿಥಿಗಳಾಗಿ ಕೇಂದ್ರ ಇಂಧನ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಎಂ. ವೀರಪ್ಪ ಮೊಯ್ಲಿ ಭಾಗವಹಿಸಲಿದ್ದು ಅಧ್ಯಕ್ಷತೆಯನ್ನು ಶಾಸಕ ಡಾ.ಕೆ. ಸುಧಾಕರ್ ವಹಿಸುವರು. ಸಾರಿಗೆ ಖಾತೆ ಸಚಿವ ರಾಮಲಿಂಗಾರೆಡ್ಡಿ, ಆಹಾರ, ನಾಗರೀಕ ಸರಬರಾಜು ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕೆನರಾ ಬ್ಯಾಂಕ್ನ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕ ಆರ್.ಕೆ.ದುಬೇ, ಕಾರ್ಯ ನಿರ್ವಾಹಕ ನಿರ್ದೇಶಕ ಎ.ಕೆ.ಗುಪ್ತಾ, ವಿಧಾನಸಭಾ ಉಪಸಭಾಪತಿ ಎನ್.ಹೆಚ್. ಶಿವಶಂಕರರೆಡ್ಡಿ ಶಾಸಕರಾದ ಎಂ.ರಾಜಣ್ಣ, ಜೆ.ಕೆ. ಕೃಷ್ಣಾರೆಡ್ಡಿ, ಸುಬ್ಬಾರೆಡ್ಡಿ, ಪಿಳ್ಳಶಾಮಪ್ಪ, ವೆಂಕಟರಮಣಯ್ಯ, ಡಾ.ಕೆ. ಶ್ರೀನಿವಾಸಮೂರ್ತಿ, ಎಂ.ಪಿ.ಟಿ. ನಾಗರಾಜ್, ಜಿ.ಪಂ. ಅಧ್ಯಕ್ಷ ಚಿನ್ನಪ್ಪ, ಟಿ. ನಾರಾಯಣಸ್ವಾಮಿ, ಇಂದಿರಮ್ಮ ನಾಗರಾಜ್, ಜಿಲ್ಲಾಧಿಕಾರಿ ಡಾ.ಆರ್. ವಿಶಾಲ್, ವಿ. ಶಂಕರ್, ಡಾ.ಜಿ.ಸಿ.ಪ್ರಕಾಶ್, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಾಳದ ನೀಲಾ ಮಂಜುನಾಥ್, ಎನ್. ಕೃಷ್ಣಪ್ಪ, ಬೆಟ್ಟಸ್ವಾಮಿ ಮುಂತಾದವರು ಭಾಗವಹಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

