ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ
ಕೆಜಿಎಫ್: ಕರವೇ ತಾಲೂಕು ಅಧ್ಯಕ್ಷ ಎಸ್. ನಂಜುಂಡಪ್ಪ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಮೀಪದ ಪೆದ್ದಪಲ್ಲಿ ಗ್ರಾಮದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಿಸುವ ಕಾರ್ಯಕ್ರಮವನ್ನು ಕರವೇ ಜಿಲ್ಲಾಧ್ಯಕ್ಷ ಎಂ.ಕೆ. ರಾಘವೇಂದ್ರ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಡಾ. ಪರಮಶಿವಯ್ಯ ವರದಿ ಜಾರಿಗೊಳಿಸಬೇಕು ಮತ್ತು ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ತರಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಕರವೇ ವತಿಯಿಂದ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ನಿರಂತವಾಗಿ ಹೋರಾಟ ನಡೆಸುತ್ತಾ ಬಂದಿದ್ದು ಅದೇ ರೀತಿ ಮುಂದಿನ ತಿಂಗಳು 28 ರಂದು ಶಾಶ್ವತ ಕುಡಿಯುವ ನೀರಿಗಾಗಿ ಒತ್ತಾಯಿಸಿ ಕೋಲಾರ ಜಿಲ್ಲೆಯಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುವುದು, ರಾಜ್ಯ ಸರ್ಕಾರದ ಗಮನ ಸೆಳೆಯಲು ಸಾವಿರಾರು ಕಾರ್ಯಕರ್ತರನ್ನೊಳಗೊಂಡಂತೆ ಕೋಲಾರದಿಂದ ಬೆಂಗಳೂರು ವರೆಗೆ ಪಾದೆಯಾತ್ರೆ ನಡೆಸುವುದಾಗಿ ತಿಳಿಸಿದರು.
ಕೋಲಾರ ಜಿಲ್ಲೆಯ ಜನರಿಗೆ ಉದ್ಯೋಗವಕಾಶ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದ ನರಸಾಪುರ ಕೈಗಾರಿಕಾ ಸಂಸ್ಥೆಗಳು ರೈತರ ಭೂಮಿ ಕಬಳಿಸಿ ಸ್ಥಳಿಯರಿಗೆ ಉದ್ಯೋಗ ನೀಡದೆ ವಂಚಿಸುತ್ತಿವೆ. ಈ ಕುರಿತು ಧ್ವನಿ ಎತ್ತಿದ ಕರವೇ ಹಾಗೂ ಇತರೆ ಸಂಘ ಸಂಸ್ಥೆಗಳು ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಹಾಗೂ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ ವಿವಿಧ ರೀತಿಯ ಪ್ರತಿಭಟನೆ ನಡೆಸಿದ ಫಲವಾಗಿ ಇದೀಗ ಜಿಲ್ಲೆಯ ಜನತೆಗೆ ಮಾನ್ಯತೆ ಸಿಕ್ಕಂತಾಗಿದೆ ಎಂದರು.
ಈ ವೇಳೆ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಗಳನ್ನು ವಿತರಿಸಿ ಮಾತನಾಡಿದ ಕೋಲಾರ ಜಿಲ್ಲೆಯ ಗೌರವಾಧ್ಯಕ್ಷ ಎಸ್. ಮದಿರಪ್ಪ ಕರವೇ ನಗರ ಘಟಕದ ಮಹಿಳಾಧ್ಯಕ್ಷೆ ಪಲ್ಲವಿಕೃಷ್ಣಮೂರ್ತಿ ಅವರು ಪೆದ್ದಪಲ್ಲಿ ಮತ್ತು ಘಟ್ಟರಾಗಡಹಳ್ಳಿ ಗ್ರಾಮದ ಸುಮಾರು 120 ಸರ್ಕಾರಿ ಬಡ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ, ಪೆನ್ ಪೆನ್ಸಿಲ್ಗಳನ್ನು ವಿತರಿಸುತ್ತರುವುದು ಸಂತಸದ ಸಂಗತಿ ಎಂದು ತಿಳಿಸಿದರು. ಚಿತ್ರಾ ರಮೇಶ್, ಅನಂತಲಕ್ಷ್ಮೀ, ಪ್ರದೀಪ್ ಗೌಡ, ಎಸ್.ಎಂ. ರಾಜು. ಸುಕನ್ಯ, ಎಸ್. ನಂಜುಂಡಪ್ಪ, ಪಲ್ಲವಿಕೃಷ್ಣಮೂರ್ತಿ, ತಿಮ್ಮರಾಜು, ರಮೇಶ್, ಪ್ರಸನ್ನರಕುಮಾರ್, ಮುನಿಕೃಷ್ಣ, ನಾಗರಾಜ್, ಸೋಫಿಯಾ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

