ಕ್ರಿಕೆಟ್ಗಷ್ಟೇ ಹೆಚ್ಚು ಪ್ರೋತ್ಸಾಹ ಸಲ್ಲ: ಮಂಜುನಾಥ್
ಕ.ಪ್ರ.ವಾರ್ತೆ ಕೋಲಾರ ನ.22
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರಿಕೆಟ್ಗೆ ಮಾತ್ರ ಹೆಚ್ಚಿನ ಪ್ರೋತ್ಸಾಹ ನೀಡುತ್ತಿರುವುದು ಸರಿಯಲ್ಲ, ಕ್ರಿಕೆಟ್ನಂತೆ ಇತರೆ ಕ್ರೀಡೆಗಳಿಗೂ ಉತ್ತೇಜನ ನೀಡಬೇಕೆಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್. ಮಂಜುನಾಥ್ ತಿಳಿಸಿದರು.
ನಗರದ ವಿಶ್ವೇಶ್ವೇರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ ಮತ್ತು ಸಾರ್ವಜನಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 2013-14ನೇ ಸಾಲಿನ ಬೆಂಗಳೂರು ವಿಭಾಗ ಮಟ್ಟದ 17 ವರ್ಷ ವಯೋವುತಿಯ ಪ್ರೌಢಶಾಲೆಗಳ ಬಾಲಕ, ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಎಲ್ಲಾ ಕಡೆ ಕ್ರಿಕೆಟ್ ಪ್ರಭಾವ ಹೆಚ್ಚಾಗಿ ದೇಶೀ ಕ್ರೀಡೆಗಳಾದ ಕಬ್ಬಡಿ, ಬ್ಯಾಡ್ಮಿಂಟನ್ ಸೇರಿದಂತೆ ಇತರೆ ಕ್ರೀಡೆಗಳು ಕ್ಷೀಣಿಸುತ್ತಿದೆ ಎಂದ ಅವರು, ಸರ್ಕಾರಗಳು ಈ ಬಗ್ಗೆ ಗಮನ ಹರಿಸಿ ಕ್ರಿಕೆಟಟ್ಗೆ ನೀಡಿದಷ್ಟು ಪ್ರೋತ್ಸಾಹವನ್ನು ಎಲ್ಲಾ ಕ್ರೀಡೆಗಳಿಗೆ ನೀಡಬೇಕು ಎಂದರು.
ಜಿ.ಪಂ. ಉಪಾಧ್ಯಕ್ಷೆ ಆಲವೇಲಮ್ಮ ಕ್ರೀಡಾಕೂಟ ಉದ್ಘಾಟಿಸಿದರು. ಜಿ.ಪಂ. ಉಪಕಾರ್ಯದರ್ಶಿ ಬದನೂರು ಮಾತನಾಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪದ್ಮನಾಭ್ ಅಧ್ಯಕ್ಷತೆ ವಹಿಸಿದ್ದರು.
ಕ್ರೀಡಾಕೂಟದಲ್ಲಿ ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ,ರಾಮನಗರ, ಬೆಂಗಳೂರು ಗ್ರಾಮಂತರ ಉತ್ತರ, ಬೆಂಗಳೂರು ಗ್ರಾಮಾಂತರ ದಕ್ಷಿಣ, ದಾವಣಗೆರೆ, ಚಿತ್ರದುರ್ಗ ಸೇರಿದಂತೆ 11 ಜಿಲ್ಲೆಗಳು ಭಾಗವಹಿಸಿದ್ದವು. ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಜಯರಾಮ ರೆಡ್ಡಿ, ಜಿಲ್ಲಾ ಅಥ್ಲೇಟಿಕ್ ಅಸೋಸಿಯೇಷನ್ ಅಧ್ಯಕ್ಷ ಜಯದೇವ್, ವೇವಗಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀರಾಮ್, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀನಿವಾಸಗೌಡ, ಕಾರ್ಯದರ್ಶಿ ಚೌಡಪ್ಪ, ಜಿಲ್ಲಾ ಸರಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಅಶೋಕ್, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಬಸವರಾಜ್ ಚಿಲಕಾಂತ್ ಮಠ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

