ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ
ಚಿಕ್ಕಬಳ್ಳಾಪುರ: ಕೇಂದ್ರ ಯುಪಿಎ ಸರ್ಕಾರ 12-13ನೇ ಪಂಚವಾರ್ಷಿಕ ಯೋಜನೆಯಲ್ಲಿ 1 ಲಕ್ಷ ಕೋಟಿ ರು. ಅನುದಾನ ನೀಡಿದ್ದು, ಇದರಲ್ಲಿ ಉನ್ನತ ಶಿಕ್ಷಣ ಪ್ರಗತಿಗೆ 10 ಸಾವಿರ ಕೋಟಿ ರು. ಮೀಸಲಿರಿಸಲಾಗಿದೆ ಎಂದು ಶಾಸಕ ಡಾ. ಕೆ. ಸುಧಾಕರ್ ತಿಳಿಸಿದರು.
ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಿ ಶುಕ್ರವಾರ ಮಾತನಾಡಿದರು.
ಶೈಕ್ಷಣಿಕ ಪ್ರಗತಿಗೆ ಸಾಕಷ್ಟು ಅನುದಾನವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೀಡುತ್ತಿವೆ.ಅದನ್ನು ಸದುಪಯೋಗಪಡಿಸಿಕೊಳ್ಳುವ ಕಾರ್ಯವನ್ನು ಮಕ್ಕಳು ಮಾಡಬೇಕು. ಯೋಜನೆಯ ಲಾಭ ಪಡೆಯುವ ಮೂಲಕ ಪ್ರಗತಿ ಹೊಂದಬೇಕೆಂದು ವಿವರಿಸಿದರು.
ವಿಧಾನಪರಿಷತ್ ಸದಸ್ಯ ವೈ. ನಾರಾಯಣಸ್ವಾಮಿ, ತಾ.ಪಂ. ಅಧ್ಯಕ್ಷ ಕೃಷ್ಣಮೂರ್ತಿ, ಉಪಾಧ್ಯಕ್ಷೆ ಲಕ್ಷ್ಮಮ್ಮ ಆಂಜಿನಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಡಿಡಿಪಿಐ ಅಜಿತ್ ಪ್ರಸಾದ್, ಮಾಜಿ ಶಾಸಕ ಎಸ್.ಎಂ. ಮುನಿಯಪ್ಪ, ಮಹಿಳಾ ಕಾಂಗ್ರೆಸ್ ಮುಖಂಡರಾದ ದೇವಿಕುಮಾರಿ ಮುಂತಾದವರು ಉಪಸ್ಥಿತರಿದ್ದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

