ಬೀದಿ ನಾಯಿಗಳ ಹಾವಳಿ ತಪ್ಪಿಸಿ'
-ಆರ್. ರಜನೀಕಾಂತ್
ಕೆಜಿಎಫ್: ನಗರದಾದ್ಯಂತ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿಯಿಂದ ಭೀತಿಗೊಂಡಿರುವ ನಾಗರಿಕರು ಬೀದಿ ನಾಯಿಗಳ ನಿಯಂತ್ರಣಕ್ಕೆ ಆಗ್ರಹಿಸಿ ನಗರಸಭೆ ಪೌರಾಯುಕ್ತರು ಮತ್ತು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಎಂ.ಜಿ. ಮಾರುಕಟ್ಟೆ, ಮಾಂಸದ ಅಂಗಡಿ ಮತ್ತಿತರೆ ಪ್ರಮುಖ ರಸ್ತೆಗಳಲ್ಲಿ ಗುಂಪಾಗಿ ತಿರುಗಾಡುತ್ತಿರುವ ಬೀದಿ ನಾಯಿಗಳ ಹಾವಳಿಯಿಂದ ಪ್ರತಿನಿತ್ಯ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಇತ್ತೀಚೆಗೆ ಕೋಲಾರದಲ್ಲಿ ಬೀದಿ ನಾಯಿಗಳ ಗುಂಪೊಂದು 7 ಮಂದಿ ಮಕ್ಕಳ ಮೇಲೆ ದಾಳಿ ನಡೆಸಿದ ಘಟನೆ ಹಿನ್ನಲೆಯಲ್ಲಿ ಕೆಜಿಎಫ್ ನಗರದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಲು ನಗರಸಭೆ ಅಧಿಕಾರಿಗಳು ಕೂಡಲೇ ಮುಂದಾಗಬೇಕಿದೆ. ಇಲ್ಲವಾದಲ್ಲಿ ಮುಂದೆ ಆಗಬಹುದಾದ ಅನಾಹುತಗಳಿಗೆ ಸಂಬಂದಪಟ್ಟ ಇಲಾಖೆ ಅಧಿಕಾರಿಗಳೇ ಕಾರಣರಾಗುವಲ್ಲಿ ಸಂದೇಹವಿಲ್ಲ ಎಂಬುದು ನಾಗರಿಕರ ಎಚ್ಚರಿಕೆ. ಸಾರ್ವಜನಿಕರು ಇಷ್ಟೆಲ್ಲಾ ಸಮಸ್ಯೆ ಅನುಭವಿಸುತ್ತಿದ್ದರೂ ಇಲ್ಲಿನ ನಗರಸಭೆ ಆಯುಕ್ತರು ಮತ್ತು ಕ್ಷೇತ್ರದ ಜನಪ್ರತಿನಿಧಿಗಳು ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಮುಂದಾಗಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

