ಹಂಪಸಂದ್ರ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ
ಗುಡಿಬಂಡೆ: ತಾಲೂಕಿನ ಹಂಪಸಂದ್ರ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಶುಕ್ರವಾರ ನಡೆಯಿತು. ಈ ಕಾರ್ಯಕ್ರಮದಲ್ಲಿ ಹಂಪಸಂದ್ರ ಕ್ಲಸ್ಟರ್‌ನ ಎಲ್ಲಾ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ನಡೆದ ಶಾಲಾ ಹಂತದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಆಯ್ಕೆಯಾದ ಮಕ್ಕಳು ಭಾಗವಹಿಸಿದ್ದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಕೆ.ವಿ.ನಾರಾಯಣಸ್ವಾಮಿ ಮಕ್ಕಳಲ್ಲಿನ ಪ್ರತಿಭೆಯನ್ನು ಕಾರಂಜಿಯಂತೆ ಚಿಮ್ಮಬೇಕೆಂದು ಈ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪ್ರತಿಭಾ ಕಾರಂಜಿ ಎಂದು ಹೆಸರು ಇಡಲಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಮಕ್ಕಳೂ ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಗಳನ್ನು ಹೊರ ತರಲು ಪ್ರಯತ್ನಿಸಬೇಕೆಂದರು. ಈ ವೇಳೆ ಪುಟಾಣಿ ಮಕ್ಕಳು ವಿವಿಧ ವೇಷಭೂಷಣಗಳೊಂದಿಗೆ, ಹಲವಾರು ಗೀತಾ ಗಾಯನಗಳೊಂದಿಗೆ, ಜಾನಪದ ನೃತ್ಯ ರೂಪಕಗಳೊಂದಿಗೆ ಪುಟಾಣಿ ಮಕ್ಕಳು ಹಬ್ಬದ ವಾತವರಣವನ್ನು ಸ್ವಲ್ಪ ಸಮಯ ಸೃಷ್ಟಿಸಿದರು. ವಿ.ಸಿ. ನಾಗರಾಜ್ ನಿರೂಪಿಸಿ ಜಿ.ಎಸ್. ಸುರೇಶ್ ವಂದಿಸಿದರು. ಈ ವೇಳೆ ಕಡೇಹಳ್ಳಿ ಶಾಲೆಯ ಶಿಕ್ಷಕ ಉಮಾಶಂಕರ್, ಹಂಪಸಂದ್ರದ ಕ್ಲಸ್ಟರ್ ವ್ಯಾಪ್ತಿಯ ಸರ್ಕಾರಿ ಶಾಲೆಗಳ ಶಿಕ್ಷಕರಾದ ಪುಷ್ಪಲತಾ, ಎನ್. ಮಂಜುನಾಥ್, ವೆಂಕಟರೆಡ್ಡಿ, ರಾಜಶೇಖರರೆಡ್ಡಿ, ಸಿ.ವೈ. ನರಸಿಂಹಪ್ಪ, ಶಾಂತಮ್ಮ, ಅನಿತಮ್ಮ, ಎಸ್.ಎಂ. ವೆಂಕಟೇಶ್, ಗೋಪಾಲರೆಡ್ಡಿ, ಲಕ್ಷ್ಮೀನಾರಾಯಣ, ಹೆಚ್.ಎನ್. ನರಸಿಂಹರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

