ಹೊಸ ಜಾಹೀರಾತು ನೀತಿ ಖಂಡಿಸಿ ಪ್ರತಿಭಟನೆ
ಕ.ಪ್ರ.ವಾರ್ತೆ ಕೋಲಾರ ನ.22
ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಹೊಸ ಜಾಹೀರಾತು ನೀತಿಯನ್ನು ವಿರೋಧಿಸಿ ಜಿಲ್ಲೆಯ ವಿವಿಧ ಪತ್ರಿಕೆಗಳ ಸಂಪಾದಕರು ಶುಕ್ರವಾರ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪನವರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಉದ್ಯೋಗ ಮೇಳದ ಸಿದ್ಧತೆಗಳ ಪರಿಶೀಲನೆಗಾಗಿ ನಗರದ ಸರ್ಕಾರಿ ಕಿರಿಯ ಕಾಲೇಜಿನ ಮೈದಾನಕ್ಕೆ ಆಗಮಿಸಿದ್ದ ಸಚಿವರಿಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು ಹೊಸ ಜಾಹಿರಾತು ನೀತಿಯಿಂದ ಸಣ್ಣ ಪತ್ರಿಕೆಗಳ ಮೇಲೆ ದುಷ್ಪರಿಣಾಮ ಬೀರಲಿದೆ. ಸರ್ಕಾರ ಹೊಸ ನೀತಿ ಕೈಬಿಡದಿದ್ದರೆ ಸಣ್ಣ ಪತ್ರಿಕೆಗಳಿಗೆ ಉಳಿಗಾಲವಿಲ್ಲವೆಂದು ತಿಳಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ. ಗೋಪಿನಾಥ್ ಅವರು, ಮುಖ್ಯಮಂತ್ರಿಗಳ ಮೇಲೆ ಒತ್ತಡ ತಂದು ಕೂಡಲೇ ಹೊಸ ಜಾಹೀರಾತು ನೀತಿ ಅನುಷ್ಠಾನಕ್ಕೆ ಬರದಂತೆ ನೋಡಿಕೊಳ್ಳಬೇಕು ಹಾಗೂ ಪಿ.ರಾಮಯ್ಯ ವರದಿಯನ್ನು ಜಾರಿಗೆ ತರಲು ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಸಚಿವ ಕೆ.ಎಚ್. ಮುನಿಯಪ್ಪನವರನ್ನು ಆಗ್ರಹಿಸಿದರು.
ಮನವಿ ಸ್ವೀಕರಿಸಿದ ಸಚಿವ ಕೆ.ಎಚ್. ಮುನಿಯಪ್ಪ, ಮುಖ್ಯಮಂತ್ರಿಗಳ ಜೊತೆ ಈ ಸಂಬಂಧ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡುವೆ ಎಂದು ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಸ್. ಗಣೇಶ್, ಕಾರ್ಯದರ್ಶಿಗಳಾದ ಚಂದ್ರಶೇಖರ್, ಸುರೇಶ್ಕುಮಾರ್, ರಾಜ್ಯ ಸಮಿತಿಯ ಸದಸ್ಯ ಯೂನಸ್, ಸಣ್ಣ ಪತ್ರಿಕೆಗಳ ಸಂಪಾದಕರ ಸಂಘದ ಕಲಾವಿದ ವಿಷ್ಣು, ಹಿರಿಯ ಸಂಪಾದಕ ಕೆ. ಪ್ರಹ್ಲಾದರಾವ್ ಹಾಗೂ ಸಣ್ಣ ಪತ್ರಿಕೆಗಳ ಹಲವು ಸಂಪಾದಕರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

