ಕೈಗಾರಿಕೆಗಳಿಗೆ ರು. 138 ಕೋಟಿ ವೆಚ್ಚದಲ್ಲಿ ನೀರು
ಕೋಲಾರ: ಜಿಲ್ಲೆಯ ಮಾಲೂರು, ನರಸಾಪುರ ಮತ್ತು ವೇಮಗಲ್ಕೈಗಾರಿಕಾ ಪ್ರದೇಶಕ್ಕೆ ನೀರಿನ ವ್ಯವಸ್ಥೆಗಾಗಿ 138 ಕೋಟಿ ರು.ಗಳ ಯೋಜನೆ ಸಿದ್ಧವಾಗಿದ್ದು ಇನ್ನು ಎರಡು ವರ್ಷಗಳಲ್ಲಿ ಕೈಗಾರಿಕೆಗಳಿಗೆ ನೀರು ಸರಬರಾಜು ಮಾಡುವುದಾಗಿ ಸಣ್ಣ ಕೈಗಾರಿಕೆಗಳ ಸಚಿವ ಪ್ರಕಾಶ್ ಹುಕ್ಕೇರಿ ತಿಳಿಸಿದರು.
ನಗರದ ಸರ್ಕಾರಿ ಬಾಲಕ-ಬಾಲಕಿಯರ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಎರಡು ದಿನಗಳ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸೇರಿದ ವರ್ತೂರ್ ಕೆರೆಯ ನೀರನ್ನು ಶುದ್ಧೀಕರಿಸಿ ಮಾಲೂರು, ನರಸಾಪುರ, ವೇಮಗಲ್ ಕೈಗಾರಿಕೆ ಪ್ರದೇಶಕ್ಕೆ ಹರಿಸಲು ಯೋಜನೆ ಸಿದ್ಧಪಡಿಸಲಾಗಿದೆ, ವರ್ತೂರ್ ಕೆರೆಯ ಮೂಲಕ ಹರಿಯುವ ನೀರಿನಲ್ಲಿ 7.7 ಎಂಜಿಪಿಡಿ ನೀರನ್ನು ಕೈಗಾರಿಕೆಗಳ ಅಭಿವೃದ್ಧಿಗೆ ವಿನಿಯೋಗ ಮಾಡಲಾಗುತ್ತದೆ ಎಂದರು.
ರಾಜ್ಯದಲ್ಲಿ ಕೈಗಾರಿಕೆಗಳ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರ 2014ರಲ್ಲಿ ಹೊಸ ಕೈಗಾರಿಕಾ ನೀತಿಯನ್ನು ಜಾರಿಗೆ ತರಲಿದೆ. ಈ ನೀತಿ 2014 ರಿಂದ 2019ರವರೆಗೆ ಅನ್ವಯಕ್ಕೆ ಬರಲಿದ್ದು, ಕೈಗಾರಿಕೋದ್ಯಮಿಗಳು ಸರ್ಕಾರದ ಆಶಯಗಳಿಗೆ ತಕ್ಕಂತೆ ಕೆಲಸ ನಿರ್ವಹಿಸಿದಲ್ಲಿ ಹೆಚ್ಚಿನ ಸಹಕಾರ ನೀಡುವುದಾಗಿ ಪ್ರಕಟಿಸಿದರು.
ಬೆಂಗಳೂರಿನ ದೇವನಹಳ್ಳಿ ಮತ್ತು ಕೋಲಾರದಲ್ಲಿ ಕೇಂದ್ರ ಸರ್ಕಾರದ ಸಣ್ಣ ಮತ್ತು ಅತೀ ಸಣ್ಣ ಕೈಗಾರಿಕೆಗಳ ಸಚಿವ ಕೆ.ಎಚ್. ಮುನಿಯಪ್ಪನವರು ಟೆಕ್ನಾಲಜಿ ಸೆಂಟರ್ ್ಟೂಲ್ ರೂಮ್ ಸ್ಥಾಪನೆಗೆ ಅವಕಾಶ ಕಲ್ಪಿಸಿದ್ದಾರೆ.
ಅದೇ ರೀತಿ ಬೆಳಗಾಂನಲ್ಲೂ ಟೆಕ್ನಾಲಜಿ ಸೆಂಟರ್ ಬೇಕೆಂದು ಕೋರಿದಾಗ ಸಚಿವ ಮುನಿಯಪ್ಪನವರು ಮಂಜೂರಾತಿ ನೀಡಿದ್ದಾರೆಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಗೋರಗಾಮ್ನಲ್ಲಿ 74 ಎಕರೆ ಪ್ರದೇಶದಲ್ಲಿ 20 ಕೋಟಿ ರು.ವೆಚ್ಚದಲ್ಲಿ ಜವಳಿ ಕ್ಷೇತ್ರ ಅಭಿವೃದ್ಧಿ ಪಡಿಸಲಾಗುವುದು, ನಮ್ಮ ಸರ್ಕಾರ ಕೈಗಾರಿಕೆಗಳ ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

