ಕೋಲಾರ

ಸರ್ಕಾರಿ ಸಂಸ್ಥೆಗಳಿಗೆ ನಿಷ್ಠರನ್ನು ನೇಮಿಸಿ

Published On :

ಕ.ಪ್ರ.ವಾರ್ತೆ ಕೋಲಾರ ನ.23
ರಾಜ್ಯ ಸರ್ಕಾರದ ವ್ಯಾಪ್ತಿಗೆ ಒಳಪಡುವ ನಿಗಮ-ಮಂಡಳಿಗಳಿಗೆ ನಿಷ್ಠಾವಂತ ಕಾರ್ಯಕರ್ತರನ್ನು ನಾಮಕರಣ ಮಾಡಬೇಕೆಂದು ಶನಿವಾರ ನಗರದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಅವರನ್ನು ಒತ್ತಾಯಿತು.
ಅನೇಕ ವರ್ಷಗಳ ನಂತರ ನಡೆದ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಣಿ ಸಭೆಯ ಅಧ್ಯಕ್ಷತೆಯನ್ನು ಡಿಸಿಸಿ ಅಧ್ಯಕ್ಷ ಅನಿಲ್‌ಕುಮಾರ್ ವಹಿಸಿದ್ದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಕೆ.ಹೆಚ್. ಮುನಿಯಪ್ಪ, ಕೆಪಿಸಿಸಿ ನಿರ್ದೇಶನದಂತೆ ಇನ್ನು ಮುಂದೆ ಕಾಲ ಕಾಲಕ್ಕೆ ಡಿಸಿಸಿ ಸಭೆಗಳನ್ನು ನಡೆಸುವ ಮೂಲಕ ಜಿಲ್ಲೆಯಲ್ಲಿ ಪಕ್ಷಕ್ಕೆ ಬಲ ತುಂಬಬೇಕೆಂದರು.
ಪಕ್ಷದ ನಿಷ್ಟಾವಂತ ಕಾರ್ಯಕರ್ತರಿಗೆ ಸರ್ಕಾರಿ ಸಂಸ್ಥೆಗಳಲ್ಲಿ ಅವಕಾಶ ಕಲ್ಪಿಸುವ ಸಂಬಂಧ ತಾವು ಸಹ ಪಕ್ಷದ ವರಿಷ್ಠರ ಜೊತೆ ಮಾತನಾಡುವೆ ಎಂದು ಭರವಸೆ ನೀಡಿದರು.
ಸಭೆಯಲ್ಲಿ ಶಾಶ್ವತ ನೀರಾವರಿಗಾಗಿ ನ.25 ರಿಂದ ಬೆಳಗಾವಿಯಲ್ಲಿ ನಡೆಯುವ ವಿಧಾನಮಂಡಲದ ಅಧಿವೇಶನದಲ್ಲಿ ಪಕ್ಷದ ಎಲ್ಲ ಶಾಸಕರು ಸದನದಲ್ಲಿ ಮಾತನಾಡಿ ಯೋಜನೆ ಅನುಷ್ಠಾನಕ್ಕೆ ಸರ್ಕಾರದ ಮೇಲೆ ಒತ್ತಡ ತರಬೇಕೆಂದು ನಿರ್ಣಯ ಕೈಗೊಳ್ಳಲಾಯಿತು.
ಪ್ರತಿ ತಿಂಗಳು ಡಿಸಿಸಿ ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಸಭೆಯನ್ನು ಕಡ್ಡಾಯವಾಗಿ ನಡೆಸಿ ಸಭೆಯಲ್ಲಿ ಕೈಗೊಳ್ಳುವ ತೀರ್ಮಾನಗಳನ್ನು ಕೆಪಿಸಿಸಿಗೆ ಕಳುಹಿಸಬೇಕು. ವಿಧಾನಸಭಾ ಕ್ಷೇತ್ರಗಳಲ್ಲಿ ಬೂತ್‌ವಾರು ಸಮಿತಿಗಳನ್ನು ರಚನೆ ಮಾಡಿ, ಸದಸ್ಯತ್ವ ನೋಂದಣಿ ಮಾಡಿಸಬೇಕು, ಪಕ್ಷದ ಸಂಘಟನೆಗೆ ಪ್ರತಿಯೊಬ್ಬರು ಶ್ರಮಿಸಬೇಕೆಂದು ಸೂಚಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಭವನದ ನೂತನ ಕಟ್ಟಡ ನಿರ್ಮಾಣಕ್ಕೆ ಕಾಂಗ್ರೆಸ್ ಶಾಸಕರು ದೇಣಿಗೆ ನೀಡಬೇಕೆಂದು ಡಿಸಿಸಿ ಅಧ್ಯಕ್ಷ ಅನಿಲ್‌ಕುಮಾರ್ ಮಾಡಿದ ಮನವಿಯನ್ನು ಸಭೆ ಅಂಗೀಕರಿಸಿತು. ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ವಿಧಾನ ಪರಿಷತ್ ಸದಸ್ಯ ನಜೀರ್ ಅಹಮ್ಮದ್, ಮುಳಬಾಗಲಿಗೆ ಶಾಸಕ ಕೊತ್ತೂರು ಮಂಜುನಾಥ್, ಬಂಗಾರಪೇಟೆಗೆ ಕೆ.ಎಂ.ನಾರಾಯಣಸ್ವಾಮಿ, ಶ್ರೀನಿವಾಸಪುರಕ್ಕೆ ರಮೇಶ್‌ಕುಮಾರ್, ಮಾಲೂರಿಗೆ ಚನ್ನಕೇಶವ ಹಾಗೂ ಕೆಜಿಎಫ್‌ಗೆ ರೂಪ ಶಶಿಕಲಾ ಅವರನ್ನು ಪಕ್ಷ ಸಂಘಟನೆಯ ಉಸ್ತುವಾರಿ ನೋಡಿಕೊಳ್ಳಲು ಸಚಿವ ಕೆ.ಹೆಚ್. ಮುನಿಯಪ್ಪ ಶಿಫಾರಸ್ಸು ಮಾಡಿದಾಗ ಸಭೆ ಒಮ್ಮತದಿಂದ ಅಂಗೀಕಾರ ನೀಡಿತು.
ಶಾಸಕ ಕೆ.ಎಂ. ನಾರಾಯಣಸ್ವಾಮಿ, ವಿಧಾನಪರಿಷತ್ ಮಾಜಿ ಸಭಾಪತಿ ವಿ.ಆರ್. ಸುದರ್ಶನ್, ಜಿ.ಪಂ ಮಾಜಿ ಅಧ್ಯಕ್ಷ ವೆಂಕಟಮುನಿಯಪ್ಪ, ಮಾಜಿ ಸಚಿವ ನಿಸಾರ್ ಅಹಮ್ಮದ್, ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷ ಬಿಸ್ಸೇಗೌಡ, ನಾಗರತ್ನಮ್ಮ ಕೆ.ಹೆಚ್. ಮುನಿಯಪ್ಪ, ಗುಡಿಯಪ್ಪ ಮತ್ತಿತರ ಪದಾಧಿಕಾರಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.