ಕೋಲಾರ

ಸ್ಥಳೀಯರಿಗೆ ಉದ್ಯೋಗ ನೀಡಿ: ಪ್ರಕಾಶ್ ಹುಕ್ಕೇರಿ

Published On :

ಕೈಗಾರಿಕೋದ್ಯಮಿಗಳು ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ ನೀಡಬೇಕೆಂದು ಸೂಚಿಸಿದ ಸಚಿವ ಪ್ರಕಾಶ್ ಹುಕ್ಕೇರಿ, ರಾಜ್ಯದಲ್ಲಿ ಉದ್ಯಮ ಸ್ಥಾಪನೆಗೆ ಬಂಡವಾಳ ಹೂಡುವವರಿಗೆ ಎಲ್ಲಾ ರೀತಿಯ ಸಹಕಾರ ನೀಡಲು ಸರ್ಕಾರ ಸಿದ್ಧವಿದೆ. ಆದರೆ ಹೆಚ್ಚಿನ ಉದ್ಯೋಗ ಕರ್ನಾಟಕದವರಿಗೆ ಸಿಗಬೇಕೆಂದು ಅಪೇಕ್ಷಿಸಿದರು.
ಕೋಲಾರ ಜಿಲ್ಲೆಯ ನರಸಾಪುರದಲ್ಲಿ 686 ಎಕರೆ ಹಾಗೂ ವೇಮಗಲ್‌ನಲ್ಲಿ 666 ಎಕರೆ ಪ್ರದೇಶದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರ ಅನುಮತಿ ನೀಡಿದೆ.
 ಈಗಾಗಲೇ 18 ಕೈಗಾರಿಕೆಗಳು 724 ಎಕರೆ ಪ್ರದೇಶದಲ್ಲಿ ಪ್ರಾರಂಭಿಸಲಾಗಿದ್ದು ಅನೇಕರು ಬಂಡವಾಳ ಹೂಡಲು ಸರ್ಕಾರದಿಂದ ಅನುಮತಿ ಪಡೆದುಕೊಂಡಿದ್ದಾರೆಂದರು.
ಸಣ್ಣ ಕೈಗಾರಿಕೆಗಳ ಇಲಾಖೆಯ ಮೂಲಕ 100 ದಿನಗಳಲ್ಲಿ 100 ಕೋಟಿ ರು. ಸಾಧನೆ ಮಾಡಲಾಗಿದ್ದು ಇದರ ಬಗ್ಗೆ ಬೆಳಗಾವಿಯಲ್ಲಿ ಕಿರುಹೊತ್ತಿಗೆ ಬಿಡುಗಡೆ ಮಾಡುವುದಾಗಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.