ಉದ್ದಿಮೆಯಿಂದ ಜೀವನ ಮಟ್ಟ ಸುಧಾರಣೆ
ಬಾಗೇಪಲ್ಲಿ: ಬರಪೀಡಿತ ಮತ್ತು ಹಿಂದುಳಿದ ತಾಲೂಕುಗಳಲ್ಲಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡುವುದರಿಂದ ಮಾತ್ರ ಜನರ ಆರ್ಥಿಕ ಜೀವನದ ಮಟ್ಟ ಸುಧಾರಣೆಯಾಗುವಂತೆ ಮಾಡಲು ಸಾಧ್ಯ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಿ.ಎಚ್. ಸಿದ್ದಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಮತ್ತು ಜಿಲ್ಲಾ ಕೈಗಾರಿಕಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ತಾಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಕೈಗಾರಿಕಾ ಪ್ರೇರಣಾ ಶಿಬಿರ ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದ ಹಾಗೂ ಬರಪೀಡಿತ ತಾಲೂಕುಗಳಲ್ಲಿ ಒಂದಾಗಿರುವ ಈ ತಾಲೂಕಿನ ಬಹುತೇಕ ಜನರು ಕೃಷಿಯನ್ನು ಅವಲಂಬಿಸಿದ್ದು ಮಳೆ ಬೆಳೆಯಿಲ್ಲದೇ ಜೀವನ ನಿರ್ವಹಣೆಗಾಗಿ ನಗರ ಪ್ರದೇಶಗಳಿಗೆ ಗುಳೇ ಹೋಗುವ ಸ್ಥಿತಿ ಇದೆ. ಇದಕ್ಕೆ ಮುಕ್ತಿ ಸಿಗಬೇಕಾದರೆ ಕೈಗಾರಿಗಳನ್ನು ಸ್ಥಾಪನೆ ಮಾಡಬೇಕಾಗಿದೆ ಎಂದರು.
ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿರುವುದರಿಂದ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಸಾಧ್ಯವಾಗುತ್ತಿಲ್ಲ, ಕಡಿಮೆ ನೀರಿನ ಬಳಕೆ ಆಗುವ ಕೈಗಾರಿಕೆಗಳನ್ನು ಇಲ್ಲಿ ಸ್ಥಾಪನೆ ಮಾಡಲು ಅವಕಾಶವಿದೆ. ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ಯಾವ ರೀತಿಯ ಕೈಗಾರಿಕೆಗಳನ್ನು ಸ್ಥಾಪಿಸಲು ಅವಕಾಶವಿದೆಯೋ ಅಂತಹ ಕೈಗಾರಿಕೆಗಳನ್ನು ಸ್ಥಾಪಿಸಲು ಇಲಾಖೆ ಪ್ರಯತ್ನಿಸುತ್ತದೆ ಎಂದರು. ತಾಲೂಕಿನ ಕೊಂಡರೆಡ್ಡಿಪಲ್ಲಿ ಗ್ರಾಮದ ಬಳಿ ಸುಮಾರು 192 ಎಕರೆ ಜಮೀನನ್ನು ಕೈಗಾರಿಕಾ ಪ್ರದೇಶಕ್ಕೆ ಈಗಾಗಲೇ ಮೀಸಲಿ ಡಲಾಗಿದೆ ಎಂದರು.
ಬರಪೀಡಿತ ಹಾಗೂ ಹಿಂದುಳಿದ ತಾಲೂಕುಗಳಲ್ಲಿ ಕೈಗಾರಿಕೆಗಳನ್ನು ತೆರೆದು ಸುಮಾರು 10 ಲಕ್ಷ ಜನರಿಗೆ ಉದ್ಯೋಗ ಕಲ್ಪಿಸುವ ಮೂಲಕ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಬೇಕಾಗಿದೆ. ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕೈಗಾರಿಕಾ ಪ್ರದೇಶಗಳ ಸ್ಥಾಪನೆ ಮಾಡಬೇಕು ಎಂದರು.
ತಾಪಂ ಅಧ್ಯಕ್ಷೆ ಮುನಿರತ್ನಮ್ಮ ಮಾತನಾಡಿ, ತಾಲೂಕಿನಲ್ಲಿ ಸತತವಾಗಿ ಹಲವು ವರ್ಷಗಳಿಂದ ಮಳೆಯಿಲ್ಲದೆ ಬರಗಾಲ ಉಂಟಾಗಿದೆ. ಈ ಭಾಗದಲ್ಲಿ ಯಾವುದೇ ಶಾಶ್ವತ ನೀರಾವರಿ ವ್ಯವಸ್ಥೆಯಿಲ್ಲ, ಕೈಗಾರಿಕೆಗಳೂ ಇಲ್ಲ. ಇದರಿಂದ ಸರ್ಕಾರ ಇತ್ತ ಗಮನಹರಿಸಿ ತಾಲೂಕಿನಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು. ತಾಪಂ ಕಾರ್ಯ ನಿರ್ವಹಣಾಧಿಕಾರಿ ಸಿ. ಶ್ರೀನಿವಾಸ್, ಸಿ.ಡಿ.ಪಿ.ಒ ಲಕ್ಷ್ಮೀದೇವಮ್ಮ ಮಾತನಾಡಿದರು.
ತಾಲೂಕು ಕೈಗಾರಿಕಾ ವಿಸ್ತರಣಾಧಿಕಾರಿ ಶಾಜಯ ಖಾನಂ, ಸಿಡಿಪಿಒ ಮೇಲ್ವಿಚಾರಕಿ ಗಂಗಮ್ಮ, ಕೆನರಾ ಬ್ಯಾಂಕ್ ಅಧಿಕಾರಿ ಚಂದ್ರಶೇಖರ್ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

