ಕೋಲಾರ

'ಕನಕದಾಸರ ತತ್ವ ಸಿದ್ಧಾಂತ ಪ್ರತಿಯೊಬ್ಬರೂ ಪಾಲಿಸಿ'

Published On :

ಕೆಜಿಎಫ್: ಕನಕದಾಸರ ತತ್ವ ಸಿದ್ಧಾಂತಗಳನ್ನು ದೇಶದ ಪ್ರತಿಯೊಬ್ಬರೂ ಪಾಲಿಸಬೇಕು. ಅದೇ ರೀತಿ ಇಂದಿನ ಶಾಲಾ ಮಕ್ಕಳು ಕನಕದಾಸರಂತರ ಮಹಾನ್ ಮೇದಾವಿಗಳ ಬಗ್ಗೆ ಹೆಚ್ಚು ತಿಳಿವಳಿಕೆಯನ್ನು ಪಡೆದುಕೊಳ್ಳುವತ್ತ ಹೆಚ್ಚು ಗಮನ ಹರಿಸಬೇಕು ಎಂದು ಮುಖ್ಯ ಶಿಕ್ಷಕಿ ಎಂ.ಕೆ. ಶಶೀಕಲಾ ಅವರು ಕೆಜಿಎಫ್ ಕ್ಷೇತ್ರದ ಕ್ಯಾಸಂಬಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಕನಕಜಯಂತಿ ಆಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದು.
ಅದೇ ರೀತಿ ಇತ್ತೀಚೆಗೆ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ವಿದ್ಯಾಭ್ಯಾಸವನ್ನು ನೀಡುವ ಮೂಲಕ ಗ್ರಾಮೂಣ ಭಾಗದ ಮಕ್ಕಳು ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಗಳಿಸುವ ಮೂಲಕ ಶಾಲೆಗೆ ಮತ್ತು ಶಿಕ್ಷಕರಿಗೆ ಕೀರ್ತಿ ತಂದುಕೊಡುವ ವಿದ್ಯಾರ್ಥಿಗಳ ಮುಂದಿನ ಉತ್ತಮ ಭವಿಷ್ಯಕ್ಕಾಗಿ ತಂದೆ ತಾಯಂದಿರು ಹೆಚ್ಚು ಆಸಕ್ತಿಯನ್ನು ತೋರಬೇಕು. ಅದೇ ರೀತಿ ಇಂತಹ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಎಲ್ಲಾ ರೀತಿಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಸರ್ಕಾರಗಳು ಮುಂದಾಗಬೇಕು ಎಂದು ತಿಳಿಸಿದರು. ಇದೇ ವೇಳೆ ನೂರಾರು ಬಡ ಶಾಲಾ ಮಕ್ಕಳಿಗೆ ಉಚಿತವಾಗಿ ಸಮವಸ್ತ್ರಗಳನ್ನು ವಿತರಿಸಿದರು.
ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ವೆಂಕಟರಾಮಪ್ಪ, ಎಸ್‌ಡಿಎಂಸಿ ಅಧ್ಯಕ್ಷ ಗೋಪಾಲಪ್ಪ, ಸೇರಿದಂತೆ ಶಾಲೆಯ ಇತರೆ ಶಿಕ್ಷಕರು, ಗ್ರಾಮದ ಮುಖಂಡರು ಪೋಷಕರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.