ಶಿಕ್ಷಕರ ಕೊರತೆ: ಪ್ರತಿಭಟನೆ
ಶಿಡ್ಲಘಟ್ಟ: ತಾಲೂಕಿನ ಬಶೆಟ್ಟಹಳ್ಳಿ ಹೋಬಳಿಯ ಪಿಲ್ಲಗುಂಡ್ಲಹಳ್ಳಿ ಸರ್ಕಾರಿ ಕಿರಿಯ ಶಾಲೆಯಲ್ಲಿ ಶಿಕ್ಷಕರಿಲ್ಲ ಎಂದು ಆರೋಪಿಸಿ ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟಿಸಿದರು.
ಕಳೆದ ಹಿಂದಿನ ವರ್ಷ ಸಹ ಶಿಕ್ಷಕರಿಲ್ಲ ಎಂದು ಪ್ರತಿಭಟನೆ ನಡೆಸಿದಾಗ ತಾತ್ಕಾಲಿಕವಾಗಿ ಶಿಕ್ಷಕರನ್ನು ನೇಮಿಸಿದ್ದು, ಅವರು ಒಂದೆರಡು ತಿಂಗಳು ಮಾತ್ರ ಬಂದರು. ಅಲ್ಲದೇ ತಾತ್ಕಾಲಿಕ ಶಿಕ್ಷಕರು ಎರಡು ಕಡೆ ಕಾರ್ಯ ನಿರ್ವಹಿಸಬೇಕಾಗಿದ್ದರಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಿತ್ತು. ಈಗ ಆ ತಾತ್ಕಾಲಿಕ ಶಿಕ್ಷಕರೂ ಬರುತ್ತಿಲ್ಲ. ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡುತ್ತಿದ್ದರೂ, ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ದೂರಿದರು. ಪ್ರತಿಭಟನೆ ನಡೆಸಿದ ಗ್ರಾಮಸ್ಥರೊಂದಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ ಮಾತನಾಡಿ, ಹೆಚ್ಚುವರಿ ಶಿಕ್ಷಕರನ್ನು ನೇಮಿಸುತ್ತೇವೆ ಎಂದು ಹೇಳಿದಾಗ, ನಮಗೆ ಶಾಶ್ವತ ಪರಿಹಾರ ಬೇಕು. ಅಲ್ಲಿಯೇ ಕೆಲಸ ನಿರ್ವಹಿಸುವ ಶಿಕ್ಷಕರನ್ನು ನೇಮಿಸಿ, ಶಾಲೆ ಪ್ರಾರಂಭವಾಗಿ ಇಷ್ಟು ದಿನಗಳಾದರೂ ಇನ್ನೂ ಏಕೆ ಕ್ರಮ ಕೈಗೊಂಡಿಲ್ಲ, ನಾವಿಲ್ಲಿ ಬಂದು ಪ್ರತಿಭಟಿಸುವವರೆಗೂ ಕಾಯುತ್ತೀರಾ ಎಂದು ಗ್ರಾಮಸ್ಥರು ಪ್ರಶ್ನಿಸಿದರು.ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ನಡುವೆ ಮಾತಿನ ಚಕಮಕಿ ನಡೆಯಿತು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮುನಿಕೃಷ್ಣಪ್ಪ, ಮುರಳಿ, ಗಿರೀಶ್, ರಾಮಾಂಜಿನಪ್ಪ, ನರಸಿಂಹರೆಡ್ಡಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

