ಕೋಲಾರ

ಹಾಸ್ಟೆಲ್‌ಗಳಲ್ಲಿ ಅವ್ಯವಸ್ಥೆ ತಾಂಡವ

Published On :

ಬಂಗಾರಪೇಟೆ: ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಹಾಸ್ಟೆಲ್‌ಗಲ್ಲಿ ಮೂಲ ಸೌಲಭ್ಯಗಳಿಲ್ಲದೆ ವಿದ್ಯಾರ್ಥಿಗಳು ಪ್ರತಿದಿನ ಅವ್ಯವಸ್ಥೆಗಳಲ್ಲಿ ದಿನಗಳನ್ನು ನೂಕುತ್ತಿದ್ದು ಈ ಕೂಡಲೆ ಹಾಸ್ಟೆಲ್‌ಗಳಲ್ಲಿ ಸಕಲ ಅನುಕೂಲಗಳನ್ನು ಕಲ್ಪಿಸಬೇಕೆಂದು ಒತ್ತಾಯಿಸಿ ದಲಿತ ಮಹಾಸಭಾ ಕಾರ್ಯಕರ್ತರು ಸಮಾಜ ಕಲ್ಯಾಣ ಕಚೇರಿ ಮುಂದೆ ಪ್ರತಿಭಟನೆ ಮಾಡಿದರು.
ತಮ್ಮ ಮನೆಗಳಲ್ಲಿ ಅನುಕೂಲಗಳ ಕೊರತೆಯಿಂದಾಗಿ ಸರ್ಕಾರಿ ಹಾಸ್ಟೆಲ್‌ಗಳಲ್ಲಿ ದಾಖಲಾಗಿ ತಮ್ಮ ಭವಿಷ್ಯವನ್ನು ಉತ್ತಮಗೊಳಿಸಿಕೊಳ್ಳುವ ಆಸೆಯಿಂದ ದಲಿತ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗಿರುವ ಹಾಸ್ಟೆಲ್‌ಗಳಲ್ಲಿ ತಮ್ಮ ಮನೆಗಳಿಗಿಂತಲೂ ಹೀನಾಯವಾದ ವ್ಯವ್ಯಸ್ಥೆಗಳಿವೆ. ಇದನ್ನು ಸರಿಪಡಿಸುವಂತೆ ಹಲವು ಬಾರಿ ಹೋರಾಟ ಮಾಡಿದರೂ ಅಧಿಕಾರಿಗಳು ಜಗ್ಗಲಿಲ್ಲ, ಚುನಾಯಿತ ಪ್ರತಿನಿಧಿಗಳೂ ಮೌನಕ್ಕೆ ಶರಣಾಗಿದ್ದಾರೆಂದು ಕಿಡಿಕಾರಿದರು. ಕೂಡಲೆ ಎಲ್ಲಾ ಸೌಲಭ್ಯಗಳನ್ನು ಒದಗಿಸಬೇಕು, ಸರ್ಕಾರಿ ಆದೇಶವಿಲ್ಲದೆ ಕೆಲಸ ಮಾಡುತ್ತಿರುವ ಎಂಆರ್ ಇಗಳನ್ನು ಕೂಡಲೆ ತೆಗೆದು ಹಾಕಿ ಅವರ ಸ್ಥಾನಕ್ಕೆ ಬೇರೆಯವರನ್ನು ನೇಮಿಸಬೇಕು. ಕೋಲಾರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಗೆ ನಿಯೋಜನೆ ಮೇಲೆ ಹೋಗಿರುವ ನಾರಾಯಣಸ್ವಾಮಿರನ್ನು ಕಾಯಂ ಸ್ಥಳಕ್ಕೆ ವಾಪಸ್ ಕಳುಹಿಸಬೇಕು,ಎಸ್ಸಿಎಸ್ಟಿ ನಿರುದ್ಯೋಗಿ ಹೆಣ್ಣು ಮಕ್ಕಳಿಗೆ ಎಂಆರ್‌ಇಯಾಗಿ ಕೆಲಸ ಮಾಡಲು ಆದೇಶ ನೀಡಬೇಕು, ಹಾಸ್ಟೆಲ್‌ಗಳಿಗೆ ಖಾಸಗಿ ವ್ಯಕ್ತಿಗಳು ಸರಬರಾಜು ಮಾಡುತ್ತಿರುವ ಆಹಾರ ಪೂರೈಕೆಯನ್ನು ನಿಲ್ಲಿಸಿ ಸರ್ಕಾರದಿಂದಲೇ ಸರಬರಾಜು ಮಾಡಬೇಕು, ಎರಡು ತಿಂಗಳಿಗೊಮ್ಮೆ ಆಹಾರ ಪೂರೈಕೆ ಬದಲು ಪ್ರತಿ ತಿಂಗಳು ಸರಬರಾಜು ಮಾಡಬೇಕು ಮತ್ತಿತರೇ ಬೇಡಿಕೆಗಳ ಪೂರೈಕೆಗೆ ಆಗ್ರಹಿಸಿ ಪ್ರತಿಭಟನೆ ಮಾಡಿದರು.
ಸಂಘಟನೆಯ ಜಿಲ್ಲಾ ಕಾರ್ಯಾಧ್ಯಕ್ಷ ಎಸ್. ಅಯ್ಯಪ್ಪ, ಜಿಲ್ಲಾ ಉಪಾಧ್ಯಕ್ಷ ಅಲ್ತಾಫ್ ಅನ್ಸಾರಿ, ತಾಲೂಕು ಅಧ್ಯಕ್ಷ ಕೆ.ಮುನಿವೆಂಕಟಪ್ಪ,ನಗರ ಅಧ್ಯಕ್ಷ ಎಲ್.ಶ್ರೀನಿವಾಸ್, ಹುಣಸನಹಳ್ಳಿ ವೆಂಕಟೇಶ್, ಗಣೇಶ್, ಪವನ್‌ಕುಮಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.