ಕೋಲಾರ

ಜಾಗೃತಿ ಸಮಿತಿ ಸಭೆಯಲ್ಲಿ ಜನಪ್ರತಿನಿಧಿಗಳು-ಅಧಿಕಾರಿಗಳ ಜಟಾಪಟಿ

Published On :

ಕ.ಪ್ರ.ವಾರ್ತೆ   ಬಾಗೇಪಲ್ಲಿ   ನ. 26
ಪಟ್ಟಣದ ತಾಪಂ ಸಭಾಂಗಣದಲ್ಲಿ ಕೈಗೊಂಡಿದ್ದ ಬಾಗೇಪಲ್ಲಿ ಮತ್ತು ಗುಡಿಬಂಡೆ ತಾಲೂಕುಗಳ ಜಾಗೃತಿ ಸಮಿತಿ ಸಭೆಯಲ್ಲಿ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನಡುವೆ ಜಟಾಪಟಿ ನಡೆದು ಒಂದು ಹಂತದಲ್ಲಿ ಕೈ ಕೈ ಮಿಲಾಯಿಸುವ ಪ್ರಸಂಗ ನಡೆಯಿತು.
ಇಲ್ಲಿನ ತಾಪಂ ಸಭಾಂಗಣದಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗುಡಿಬಂಡೆ ತಾಲೂಕಿನ 7 ಗ್ರಾಪಂಗಳಲ್ಲಿ ಮನೆಗಳ ವಿತರಣೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ. ಇದಕ್ಕೆಲ್ಲ ಕಾರಣ ತಾಪ ಇಒ ಕಾರಣ. ಇಂತಹ ಥರ್ಡ್ ಕ್ಲಾಸ್ ಇಒ ಅವರನ್ನು ನಾವು ನೋಡಿಲ್ಲ ಎಂದು ಗುಡಿಬಂಡೆ ತಾಲೂಕಿನ ತಿರುಮಣಿ ಕ್ಷೇತ್ರದ ತಾಪಂ ಸದಸ್ಯ ಮುನಿರೆಡ್ಡಿ  ಆರೋಪಿಸಿದರು.
ಇದರಿಂದ ಕುಪಿತರಾದ ಇಒ ಆರ್.ಇಂದ್ರೇಶ್ ಮತ್ತು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳು ಕೋಪಗೊಂಡರು.  ಮುನಿರೆಡ್ಡಿ ಅವರನ್ನು ತರಾಟೆಗೆ ತೆಗೆದುಕೊಂಡು, ನಾವು ನಿಮ್ಮ ಮನೆ ಸೇವಕರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮಧ್ಯೆ ಪ್ರವೇಶಿಸಿ  ಸಮಾಧಾನಪಡಿಸಿದರು.
ನಂತರ ಮಾತನಾಡಿದ ಶಾಸಕರು, ಕಳೆದ ವರ್ಷ ಅಧಿಕಾರಿಗಳ ನಿರ್ಲಕ್ಷ್ಯದಿಂದ 2 ಸಾವಿರ ಮನೆಗಳು ರದ್ದಾಗಿವೆ ಎಂದು ಬೇಸರ ವ್ಯಕ್ತಪಡಿಸಿ, ಇನ್ನು ಮುಂದೆ ಯಾವುದೇ ಕಾರಣಕ್ಕೂ ಒಂದು ಮನೆ ರದ್ದಾದರೂ ಪಿಡಿಒ ಹಾಗೂ ಕಾರ್ಯದರ್ಶಿಗಳನ್ನು ಮನೆಗಳಿಗೆ ಕಳುಹಿಸಲಾಗುವುದು ಎಂದರು.
ಗ್ರಾಪಂ ಸಭೆಗಳಲ್ಲಿ ಅರ್ಹ ಫಲಾನುಭವಿಗಳನ್ನು ಕಡ್ಡಾಯವಾಗಿ  ಆಯ್ಕೆ ಮಾಡಬೇಕು. ಇದಕ್ಕೆ ಜನಪ್ರತಿನಿಧಿಗಳು ಸಹಕಾರ ನೀಡಬೇಕು ಜಿಪಂ ಸದಸ್ಯರಾದ ಅಮರಾವತಿ ಕೃಷ್ಣಪ್ಪ, ನಾರಾಯಣಮ್ಮ, ಅಶ್ವಥ್ಥಪ್ಪ, ತಾಪಂ ಸದಸ್ಯರಾದ ವೆಂಕಟರಾಮರೆಡ್ಡಿ, ಲಕ್ಷ್ಮೀನರಸಿಂಹಪ್ಪ, ನಾರಾಯಣಸ್ವಾಮಿ, ಆದಿನಾರಾಯಣರೆಡ್ಡಿ ಹಾಗೂ ಜಿಪಂ ಎಇಇ ಪಿ.ವಿ. ನಾಗಪ್ಪ, ಪಶುವೈದ್ಯ ಇಲಾಖೆ ಡಾ. ವೆಂಕಟೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಗಂಗಮ್ಮ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.