ಕೋಲಾರ

ಬಂಗಾರಪೇಟೆ ಎಟಿಎಂಗಳಿಗೆ ಭದ್ರತೆ ಕಲ್ಪಿಸಿ

Published On :

ಕ.ಪ್ರ.ವಾರ್ತೆ   ಬಂಗಾರಪೇಟೆ   ನ. 26
ಪಟ್ಟಣದಲ್ಲಿರುವ ಎಲ್ಲಾ ಎಟಿಎಂಗಳಿಗೆ ಸೂಕ್ತ ಭದ್ರತೆ ಕಲ್ಪಿಸಬೇಕೆಂದು ಆಗ್ರಹಿಸಿ ದಲಿತ ಸಿಂಹ ಸೇನೆ ಕಾರ್ಯಕರ್ತರು ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ಮಾಡಿ ದಂಡಾಧಿಕಾರಿಗಳಿಗೆ ಮನವಿ ಪತ್ರ ನೀಡಿದರು.
ಕಳೆದ ವಾರ ಬೆಂಗಳೂರಿನಲ್ಲಿ ಎಟಿಎಂನಲ್ಲಿ ಹಣ ಪಡೆಯಲು ಹೋಗಿದ್ದ ಮಹಿಳೆ ಮೇಲೆ ದುಷ್ಕರ್ಮಿಯೊಬ್ಬ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಬಳಿಕ ಗ್ರಾಹಕರು ಎಟಿಎಂಗಳಿಗೆ ಒಂಟಿಯಾಗಿ ಹೋಗಲು ಹೆದರುವಂತಾಗಿದೆ. ಘಟನೆ ನಂತರ ರಾಜ್ಯ ಸರ್ಕಾರ ಎಲ್ಲಾ ಬ್ಯಾಂಕಿನ ಎಟಿಎಂಗಳಿಗೆ ತಕ್ಷಣವೇ ಸೂಕ್ತ ರೀತಿಯಲ್ಲಿ ಭದ್ರತೆಗಳನ್ನು ಒದಗಿಸಬೇಕು. ಇಲ್ಲವಾದರೆ ಬ್ಯಾಂಕಿನವರೇ ಘಟನೆಗಳಿಗೆ ಹೊಣೆಗಾರರು ಎಂದು ಎಚ್ಚರಿಕೆ ನೀಡಿದ್ದರೂ ಸಹ ಪಟ್ಟಣದಲ್ಲಿರುವ 7ಎಟಿಎಂಗಳಿಗೆ ಇದುವರೆಗೂ ಭದ್ರತೆ ಕಲ್ಪಿಸುವಲ್ಲಿ ವಿಫಲವಾಗಿದೆ. ದುರ್ಘಟನೆ ಯಾವ ಸಮಯದಲ್ಲಿ ನಡೆಯುತ್ತದೆ ಎಂಬುದು ಗೊತ್ತಿರುವುದಿಲ್ಲ. ಪಟ್ಟಣದಲ್ಲಿ ಬೆಂಗಳೂರಿನಲ್ಲಿ ನಡೆದ ರೀತಿಯಲ್ಲಿ ಪ್ರಕರಣ ನಡೆಯದಿದ್ದರೂ ಗಮನ ಬೇರೆಡೆ ಸೆಳೆದು ಹಣ ಲಪಟಾಯಿಸಿರುವ ಪ್ರಕರಣಗಳು ಸಾಕಷ್ಟಿವೆ.
ರಾತ್ರಿ ವೇಳೆಯನ್ನದೆ ಎಲ್ಲಾ ಸಮಯದಲ್ಲೂ ಗ್ರಾಹಕರು ಹಣ ಪಡೆಯಲು ಎಟಿಎಂಗಳಿಗೆ ಹೋಗುವರು ಅಲ್ಲದೆ ಪಟ್ಟಣದಲ್ಲಿರುವ ಹಲವು ಗಾರ್ಮೆಂಟ್ಸ್ ಕಾರ್ಖಾನೆಗಳಿವೆ. ಇವುಗಳಲ್ಲಿ ತಿಂಗಳ ವೇತನ ಎಟಿಎಂಗಳಲ್ಲೇ ಪಡೆಯಬೇಕು ಪ್ರತಿ ತಿಂಗಳು ಮಹಿಳೆಯರು ಎಟಿಎಂಗಳಲ್ಲೇ ಹಣ ಡ್ರಾ ಮಾಡಬೇಕು ಆಗ ಒಂಟಿಯಾಗಿ ಹೋಗಲು ಹೆದರುವಂತಾಗಿದೆ. ಆದ್ದರಿಂದ ರಾಜ್ಯ ಸರ್ಕಾರ ಆದೇಶವನ್ನು ಉಲ್ಲಂಘಿಸಿ ಇದುವರೆಗೂ ಭದ್ರತೆ ಕಲ್ಪಿಸದೆ ನಿರ್ಲಕ್ಷ್ಯ ತಾಳಿರುವ ಬ್ಯಾಂಕಿನ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿ ಭದ್ರತೆ ಒದಗಿಸಿಕೊಡಬೇಕೆಂದು ಆಗ್ರಹಿಸಿ ಪ್ರತಿಭಟನೆ ಮಾಡಿದರು.
ಪ್ರತಿಭಟನೆಯಲ್ಲಿ ಸಂಗಟನೆಯ ಜಿಲ್ಲಾಧ್ಯಕ್ಷ ಸೂಲಿಕುಂಟೆ ಆನಂದ್, ನಗರ ಅಧ್ಯಕ್ಷ ಹುಣಸನಹಳ್ಳಿ ರಮೇಶ್,ಪಿಳ್ಳಪ್ಪ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.