30ರಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ
ಕೋಲಾರ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿಗೆ ಅಧ್ಯಕ್ಷ-ಉಪಾಧ್ಯಕ್ಷರನ್ನು ಆಯ್ಕೆ ಮಾಡಲು ನ.30 ರ ಶನಿವಾರ ಮಧ್ಯಾಹ್ನ 1 ಗಂಟೆಗೆ ಡಿಸಿಸಿ ಬ್ಯಾಂಕಿನಲ್ಲಿ ಸಭೆ ಕರೆಯಲಾಗಿದೆ. ನ.30 ರಂದು ಬೆಳಿಗ್ಗೆ 11 ಗಂಟೆಯೊಳಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬಯಸುವವರು ಬ್ಯಾಂಕಿನ ಸಭಾಂಗಣದಲ್ಲಿ ಚುನಾವಣಾಧಿಕಾರಿಯವರಿಗೆ ನಾಮ ಪತ್ರಗಳನ್ನು ಸಲ್ಲಿಸಬೇಕು.
ಮಧ್ಯಾಹ್ನ 1 ಗಂಟೆಗೆ ನಾಮಪತ್ರಗಳ ಪರಿಶೀಲನೆ. ಮ.2 ಗಂಟೆಯಿಂದ 2.30ರೊಳಗೆ ನಾಮಪತ್ರ ಹಿಂದಕ್ಕೆ ಪಡೆಯಲು ಅವಕಾಶ, ಅಗತ್ಯ ಬಿದ್ದಲ್ಲಿ ಮ.3 ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು ನಂತರ ಮತ ಎಣಿಕೆ ಆರಂಭಿಸಲಾಗುತ್ತದೆ ಎಂದು ಕೋಲಾರ ಉಪವಿಭಾಗಾಧಿಕಾರಿಯೂ ಆಗಿರುವ ಡಿಸಿಸಿ ಬ್ಯಾಂಕ್ ಚುನಾವಣಾಧಿಕಾರಿ ಸಿ.ಎನ್. ಮಂಜುನಾಥ್ ತಿಳಿಸಿದ್ದಾರೆ.
ಕುಡಿತಕ್ಕೆ ದಾಸನಾದ ಯುವಕ ಆತ್ಮಹತ್ಯೆ
ನಗರದ ವೆಂಕಟಗಿರಿ ಕೋಟೆ ನಿವಾಸಿ ಯುವಕನೊಬ್ಬ ನ ಪೋಷಕರು ಕುಡಿತದ ಚಟ ಬಿಡಿಸಲು ಸ್ವಾಮಿ ದೀಕ್ಷೆ ಮಾಲೆ ಹಾಕಿದ್ದರಿಂದ ಬೇಸತ್ತ ಯುವಕ ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಸುಟ್ಟ ಗಾಯಗಳಿಂದ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡದರೂ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

