ಕುಂದುಕೊರತೆ ಸಭೆ ಇಂದು
ಗೌರಿಬಿದನೂರು: ತಾಲೂಕು ವ್ಯಾಪ್ತಿಗೆ ಸೇರಿದ ಗ್ರಾಮಗಳು ಮತ್ತು ಪಟ್ಟಣದ ಸಾರ್ವಜನಿಕರಿಂದ ಮಂಚೇನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಬುಧವಾರ ಮಧ್ಯಾಹ್ನ 3ಕ್ಕೆ ಲೋಕಾಯುಕ್ತ ಇನ್ಸೆಪೆಕ್ಟರ್ ಸಾರ್ವಜನಿಕ ಕುಂದುಕೊರತೆಗಳ ಸಭೆಯನ್ನು ಏರ್ಪಡಿಸಿದೆ. ಈ ಸಭೆಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ತಮ್ಮ ಅಹವಾಲುಗಳನ್ನು ನೀಡುವಂತೆ ತಹಶೀಲ್ದಾರ್ ಡಾ. ಭಾಸ್ಕರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
ಸಾಹಿತಿ ಲಕ್ಕೂರು ಆನಂದ್ಗೆ ಇಂದು ಸನ್ಮಾನ
ಕೋಲಾರ; ತಾಲೂಕಿನ ಮಂಗಸಂದ್ರದಲ್ಲಿರುವ ಬೆಂಗಳೂರು ವಿವಿಗೆ ಸೇರಿದ ಸ್ನಾತಕೋತ್ತರ ಕೇಂದ್ರದಲ್ಲಿ ಕನ್ನಡ ಸಾಹಿತ್ಯ ವೇದಿಕೆಯಿಂದ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ವಿದ್ಯಾರ್ಥಿ ಕವಿಗೋಷ್ಟಿ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ ವಿಜೇತ ಲಕ್ಕೂರು ಆನಂದರವರಿಗೆ ಸನ್ಮಾನ ಕಾರ್ಯಕ್ರಮವನ್ನು ನ.27 ರಂದು ಬುಧವಾರ ಬೆಳಿಗ್ಗೆ 10.30ಕ್ಕೆ ಸ್ನಾತಕೋತ್ತರ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಕಾ.ವೆಂ. ಶ್ರೀನಿವಾಸಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು. ಸಹಪ್ರಾಧ್ಯಾಪಕ ಡೊಮಿನಿಕ್ ಪ್ರಸ್ತಾವಿಕ ಭಾಷಣ ಮಾಡಲಿದ್ದಾರೆ, ಮುಖ್ಯ ಅತಿಥಿಗಳಾಗಿ ಕನ್ನಡ ಹೋರಾಟಗಾರ ಕೆ. ರಾಜ್ಕುಮಾರ್, ಸಹ ಪ್ರಾಧ್ಯಾಕಪರಾದ ಎಂ. ಮುನಿಯಪ್ಪ, ವಿ. ನಾಗರಾಜು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅಶ್ವತ್ ಮತ್ತು ತಂಡದವರಿಂದ ಸುಗಮ ಸಂಗೀತ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಸಿಕ್ಕ ಪರ್ಸ್ ದೇವರ ಹುಂಡಿಗೆ
ಚಿಂತಾಮಣಿ: ಶ್ರೀ ಮುಕ್ತೀಶ್ವರಸ್ವಾಮಿ ದೇವಾಲಯದಲ್ಲಿ ಸಿಕ್ಕಿದ ಹಣದ ಪರ್ಸ್ನ್ನು ಪೊಲೀಸ್ ಸಹಾಯಕ ಅಧಿಕಾರಿಯೊಬ್ಬರು ದೇವರ ಹುಂಡಿಗೆ ಸಮರ್ಪಿಸಿದರು. ತಾಲೂಕಿನ ಭಾರದ್ವಾಜ ಕ್ಷೇತ್ರ ಮುರುಗಮಲೆ ಗ್ರಾಮದಲ್ಲಿ ನೆಲೆಸಿರುವ ಶ್ರೀ ಮುಕ್ತೀಶ್ವರಸ್ವಾಮಿ ದೇವಾಲಯದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಜನ ಜಂಗಳಿ ಹೆಚ್ಚಾಗಿದ್ದು, ಬಂದೋಬಸ್ತ್ಗಾಗಿ ನಿಯೋಜನೆಗೊಂಡಿದ್ದ ಬಟ್ಲಹಳ್ಳಿ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ನರಸಿಂಹಮೂರ್ತಿ ಎಂಬವರಿಗೆ ದೇವಸ್ಥಾನದ ಆವರಣದ ಬಳಿ ಸಿಕ್ಕಿದ ಪರ್ಸ್ಗೆ ವಾರುಸದಾರರು ಇಲ್ಲದ್ದರಿಂದ ಹಣವನ್ನು ದೇವರ ಹುಂಡಿಗೆ ಸಮರ್ಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

