ಕೋಲಾರ

ಮಹಿಳೆ ಕೊಲೆಗೈದು ಚೀಲದಲ್ಲಿ ಕಟ್ಟಿ ಕಾಡಲ್ಲಿ ಬಿಸಾಕಿದ ದುಷ್ಕರ್ಮಿಗಳು

Published On :

ಬಂಗಾರಪೇಟೆ: ಅಪರಿಚಿತ ಮಹಿಳೆಯನ್ನು ಕೊಲೆ ಮಾಡಿ ಮೂಟೆಕಟ್ಟಿ ಕಾಡಿನ ಪ್ರದೇಶದಲ್ಲಿ ಎಸೆದು ಹೋಗಿರುವ ಪ್ರಕರಣ ಮಂಗಳವಾರ ಬೆಳಕಿಗೆ ಬಂದಿದೆ.
ಸುಮಾರು 30ರಿಂದ 35 ವಯಸ್ಸಿನ ಮಹಿಳೆಯನ್ನು ದುಷ್ಕರ್ಮಿಗಳು ಕೊಲೆಗೈದು ನಂತರ ಮೂಟೆ ಕಟ್ಟಿ ಕನಮನಹಳ್ಳಿ ಕಾಡಿನ ಬಳಿ ಎಸೆದು ಪರಾರಿಯಾಗಿದ್ದಾರೆ. ಎರಡು ದಿನಗಳ ಹಿಂದೆ ಬಿಸಾಡಿ ಹೋಗಿರಬಹುದು ಎಂದು ಶಂಕಿಸಲಾಗಿದೆ. ಪಿಂಕ್ ಬ್ಲೌಸ್ ಹಾಗೂ ಪರ್ಪಲ್ ಸೀರೆ ತೊಟ್ಟಿದ್ದಳು ಎನ್ನಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ರಾಜಣ್ಣ, ಸಿಐ ವೆಂಕಟಾಚಲಪತಿ ಭೇಟಿ ನೀಡಿ ಪರಿಶೀಲಿಸಿದರು. ಬೇರೆಡೆ ಕೊಲೆ ಮಾಡಿ ತಾಲೂಕಿನ ಕಾಡಿನಲ್ಲಿ ಬಿಸಾಡಿ ಹೋದರೆ ಯಾರಿಗೂ ಅನುಮಾನ ಬರುವುದಿಲ್ಲ ಎಂದು ಇಂತಹ ಪ್ರಕರಣಗಳು ಮರುಕಳಿಸುತ್ತಿವೆ.
ಈ ವರ್ಷದಲ್ಲೇ ಮೂರು ಪ್ರಕರಣಗಳು ನಡೆದಿವೆ. ಬೆಂಗಳೂರಿನ ಮಾರತಹಳ್ಳಿ ಬಳಿಯಿರುವ ಬಿ.ನಾರಾಯಣಪುರದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ರ್‌ನ್ನು ಇದೇ ರೀತಿ ಕೊಲೆ ಮಾಡಿ ಇಲ್ಲಿ ಬಂದು ಬಿಸಾಡಿ ಹೋಗಿದ್ದರು.ಆದರೆ ಪಟ್ಟಣ ಪೊಲೀಸರು ಎಲ್ಲಾ ಪ್ರಕರಣಗಳನ್ನು ಭೇದಿಸಿದ್ದರು. ಈ ಪ್ರರಣವನ್ನು ಇಷ್ಟರಲ್ಲೆ ಭೇದಿಸುವ ವಿಶ್ವಾಸವನ್ನು ವೃತ್ತ ನಿರೀಕ್ಷಕ ವೆಂಕಟಾಚಲಪತಿ ಹೊಂದಿದ್ದಾರೆ. ಕಾಮಸಮುದ್ರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.