ಕೋಲಾರ

ಎಂಇಎಸ್ ಶಾಸಕರ ಗಡೀಪಾರಿಗೆ ಕರವೇ ಆಗ್ರಹ

Published On :

ಬಾಗೇಪಲ್ಲಿ: ಕರ್ನಾಟಕ ರಾಜ್ಯ ಸರ್ಕಾರದ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಎಂಇಎಸ್ ಶಾಸಕರನ್ನು ಗಡೀಪಾರು ಮಾಡಬೇಕೆಂದು ಕರವೇ ಒತ್ತಾಯಿಸಿದೆ.
ಪಟ್ಟಣದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಿ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಕರವೇ ತಾಲೂಕು ಅಧ್ಯಕ್ಷ ಕೆ.ಎನ್. ಹರೀಶ್, ಮರಾಠಿ ಭಾಷೆಯ ವ್ಯಾಮೋಹಕ್ಕೆ ಸಿಲುಕಿ ಕನ್ನಡ ಭಾಷೆಗೆ ಅಪಮಾನಗೊಳಿಸುತ್ತಿರುವ ಎಂ.ಇ.ಎಸ್. ಶಾಸಕರ ಸ್ಥಾನವನ್ನು ರದ್ದುಗೊಳಿಸಬೇಕಲ್ಲದೇ ಅವರನ್ನು ಕೂಡಲೇ ಗಡಿಪಾರು ಮಾಡುವಂತೆ ಆಗ್ರಹಿಸಿದರು.
ಚಳಿಗಾಲದ ಅಧಿವೇಶನದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ಶಾಸಕರಾದ ಸಂಭಾಜಿ ಪಾಟೀಲ್ ಮತ್ತು ಅರವಿಂದ್‌ಪಾಟೀಲ್ ನಾಡಿನ ಜನರಿಂದ ಮತಗಳನ್ನು ಪಡೆದು ಶಾಸಕರಾಗಿದ್ದು ಇವರು ವಿನಾಕಾರಣ ಕನ್ನಡ ಭಾಷೆಯ ಬಗ್ಗೆ ಹಾಗೂ ರಾಜ್ಯ ಸರ್ಕಾರವನ್ನು ಕೀಳು ಮಟ್ಟದ ಭಾಷೆಯಿಂದ ನಿಂದಿಸಿರುವುದು ಖಂಡನೀಯ.ಇದು 6 ಕೋಟಿ ಕನ್ನಡಗರಿಗೆ ಅಪಮಾನ ಮಾಡಿದಂತೆ ಎಂದು ಆಕ್ರೋಶ ವ್ಯಕ್ತಪಡಿಸಿದರು.  ತಹಸೀಲ್ದಾರ್ ಎಂ.ಎ. ಪದ್ಮ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಕರವೇ ಮುಖಂಡರಾದ ಶಿವಶಂಕರ್, ಸತೀಶ್, ವೆಂಕಟೇಶ್, ರಾಮಿರೆಡ್ಡಿ, ಸುಜಾತಮ್ಮ,ನಂದೀಶ್, ಸೋಮಶೇಖರ್, ಶ್ರೀಕಾಂತ್, ಚೇತನ್ ಮುಂತಾದವರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.