ಕೋಲಾರ

'ಅಧಿಕಾರಿಗಳು ಲಂಚಕ್ಕಾಗಿ ಪೀಡಿಸಬಾರದು'

Published On :

ಮುಳಬಾಗಲು: ಸರ್ಕಾರಿ ನೌಕರರು ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕು, ಲಂಚಕ್ಕಾಗಿ ಪೀಡಿಸಬಾರದು ಎಂದು ಕೋಲಾರ ಲೋಕಾಯುಕ್ತ ವರಿಷ್ಠಾಧಿಕಾರಿ ಮೋಹನ್ ದಾಸ್ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಸಾರ್ವಜನಿಕರು ಕಾನೂನು ಬದ್ದವಾಗಿ ಕೆಲಸ ಮಾಡಿಸಿಕೊಳ್ಳಬೇಕು ಎಂದರು. ಹನುಮನಹಳ್ಳಿ ಗ್ರಾಪಂ ಮತ್ತು ಸಬ್ ಟ್ರಜರಿಯಲ್ಲಿ ಲಂಚದ ಹಾವಳಿ ಕುರಿತು ಸಾರ್ವಜನಿಕರು ದೂರಿದರು. ಎರಡು ಪ್ರಕರಣಗಳು ಮಾತ್ರ ದಾಖಲಾದವು. ಡಿವೈಎಸ್ಪಿ ರಾಮಮೂರ್ತಿ, ತಹಸೀಲ್ದಾರ್ ಡಿ.ವಿ. ರಾಮಮೂರ್ತಿ, ಸರ್ಕಲ್ ಇನ್ಸ್‌ಪೆಕ್ಟರ್ ಅಶ್ವಥನಾರಾಯಣಸ್ವಾಮಿ, ನಾರಾಯಣಸ್ವಾಮಿ, ರವಿಕುಮಾರ್. ಪ್ರಸಾದ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.