ಕೋಲಾರ

ಆದಿಶ್ರೀ ಜನ್ಮ ದಿನ ಅದ್ಧೂರಿ ಆಚರಣೆ ಕುರಿತು ಚರ್ಚೆ

Published On :

ಶಿಡ್ಲಘಟ್ಟ: ಪದ್ಮಭೂಷಣ ದಿ.ಬಾಲಗಂಗಾಧರನಾಥ ಸ್ವಾಮೀಜಿಯವರ 69 ನೇ ಜನ್ಮ ದಿನವನ್ನು ಅದ್ಧೂರಿಯಾಗಿ ಆಚರಿಸುವ ಸಲುವಾಗಿ ಪಟ್ಟಣದಲ್ಲಿ ಒಕ್ಕಲಿಗ ಸಂಘಟನೆಯ ಮುಖಂಡರು ಸಭೆ ನಡೆಸಿ ಚರ್ಚಿಸಿದರು.
ಪಟ್ಟಣದಲ್ಲಿನ ತಾಲೂಕು ವಕ್ಕಲಿಗರ ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಆದಿಚುಂಚನಗಿರಿ ಚಿಕ್ಕಬಳ್ಳಾಪುರ ಶಾಖಾ ಮಠದ ಅಧ್ಯಕ್ಷ ಮಂಗಳಾನಂದನಾಥ ಸ್ವಾಮೀಜಿ, ಭಕ್ತಾಧಿಗಳ ಕೋರಿಕೆ ಮೇರೆಗೆ ಗುರುವಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಇದರೊಂದಿಗೆ ಗುರುಗಳ ಬೆಳ್ಳಿ ಪ್ರತಿಮೆಯನ್ನು ಪ್ರತಿಷ್ಠಾಪನೆ ಮಾಡಲಾಗುವುದು ಎಂದರು.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಗುರುಗಳ ಕೃಪೆಗೆ ಪಾತ್ರರಾಗಬೆಕೆಂದರು.
ಆಂಜಿನಪ್ಪ, ಎಸ್.ಎಂ. ನಾರಾಯಣಸ್ವಾಮಿ, ಮುನಿಕೃಷ್ಣಪ್ಪ, ರಾಮಣ್ಣ, ಜೆ.ವಿ. ಸದಾಶಿವ, ಬಿ.ವಿ. ಮುನೇಗೌಡ, ಬಿ. ನಾರಾಯಣಸ್ವಾಮಿ, ಗೋಪಾಲ್, ಜೆ.ಎಸ್. ವೆಂಕಟಸ್ವಾಮಿ, ಅಶ್ವತ್ಥನಾರಾಯಣರೆಡ್ಡಿ, ಉಮೇಶ್ ಮುಂತಾದವರು ಹಾಜರಿದ್ದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.