ಕೋಲಾರ

ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಕರವೇ ಪ್ರತಿಭಟನೆ

Published On :

ಚಿಂತಾಮಣಿ: ನಾಡದ್ರೋಹಿ ಎಂಇಎಸ್ ಸಂಘಟನೆ ನಿಷೇಧಿಸಲು ಆಗ್ರಹಿಸಿ ಕರವೇ ನೂರಾರು ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ ಮಹಾರಾಷ್ಟ್ರ ಸರ್ಕಾರದ ಪರ ಹೇಳಿಕೆಗಳನ್ನು ನೀಡುತ್ತಿರುವ ದುರಹಂಕಾರಿ ಶಾಸಕರ ಭೂತ ದಹನ ಮಾಡಿದರು.
ನಗರದ ಪ್ರವಾಸಿ ಮಂದಿರದಿಂದ ಕರವೇ ನಾರಾಯಣಗೌಡ ಬಣದ ನೂರಾರು ಕಾರ್ಯಕರ್ತರು ಬೆಳಗಾವಿ ಜಿಲ್ಲೆಯ ರಾಜಕೀಯ ಲಾಭಕ್ಕಾಗಿ ಎಂಇಎಸ್ ಸಂಘಟನೆ ಹುಟ್ಟುಹಾಕಿ ಇಬ್ಬರ ಶಾಸಕರನ್ನು ಹೊಂದಿದ್ದು, ಸರ್ಕಾರದ ಎಲ್ಲಾ ಸವಲತ್ತುಗಳನ್ನು ಪಡೆದುಕೊಂಡಿರುವ ಶಾಸಕರು ರಾಜ್ಯ ಜನತೆಯ ಹಿತವನ್ನು ಬಯಸದೇ ದರಹಂಕಾರಿ ಹೇಳಿಕೆಗಳನ್ನು ಕೊಡುತ್ತಾ ಕನ್ನಡಿಗಳ ಭಾವನೆಗಳಿಗೆ ಧಕ್ಕೆ ಉಂಟು ಮಾಡುತ್ತಿರುವ ಶಾಸಕರ ಶವ ಯಾತ್ರೆಯನ್ನು ನಗರದ ಪ್ರಮುಖ ಬೀದಿಗಳಲ್ಲಿ ಕರವೇ ಕಾರ್ಯಕರ್ತರು ನಡೆಸಿ ನಂತರ ಯೋಗಿ ನಾರೇಯಣ ವೃತ್ತದ ಬಳಿ ಭೂತ ದಹನ ಮಾಡಿ ಧಿಕ್ಕಾರಗಳನ್ನು ಕೂಗಿದರು.
ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷ ಎಂ.ಆರ್. ಲೋಕೇಶ್ ಮಾತನಾಡುತ್ತಾ ರಾಜ್ಯದ ನೀರು ಮತ್ತು ಅನ್ನವನ್ನು ತಿಂದು ಪರ ರಾಜ್ಯವಾದ ಮಹಾರಾಷ್ಟ್ರ ಸರ್ಕಾರದ ಪರ ಹೇಳಿಕೆಗಳನ್ನು ಕೊಡುತ್ತಾ ಕನ್ನಡಿಗರ ಭಾವನೆಗಳಿಗೆ ಧಕ್ಕೆ ಉಂಟು ಮಾಡುತ್ತಿರುವ ನಾಡ ದ್ರೋಹಿ ಎಂ.ಇ.ಎಸ್ ಸಂಘಟನೆ ನಿಷೇಧಿಸಿ ಕೂಡಲೇ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ನಂತರ ಮೆರವಣಿಗೆ ಮೂಲಕ ಕಾರ್ಯಕರ್ತರು ತೆರಳಿ ತಾಲೂಕು ಕಚೇರಿ ಮುಂಭಾಗದಲ್ಲಿ ಮುತ್ತಿಗೆ ಹಾಕಿ ನಂತರ ತಾಲೂಕು ದಂಡಾಧಿಕಾರಿಗಳಾದ ಕೃಷ್ಣಸ್ವಾಮಿಗೆ ಮನವಿ ಮುಖಾಂತರ ಸರ್ಕಾರದ ಗಮನಕ್ಕೆ ಬರಲು ಮನವಿ ಪತ್ರವನ್ನು ನೀಡಿದರು. ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಎನ್. ಅಂಬರೀಶ್, ಪ್ರಧಾನ ಕಾರ್ಯದರ್ಶಿರಮೇಶ್, ನಗರ ಘಟಕದ ಅಧ್ಯಕ್ಷ ಶಬ್ಬೀರ್ ಅಹಮದ್, ಮುಖಂಡರಾದ ಸುಧಾಕರ್, ನಾಗರಾಜ್, ವೆಂಕಟೇಶಪ್ಪ, ನಾರಾಯಣಸ್ವಾಮಿ, ದೇವರಾಜ್, ಸತ್ಯನಾರಾಯಣ, ಚೆನ್ನಕೃಷ್ಣ, ಮಂಜುನಾಥ ಸೇರಿ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.