ಕೋಲಾರ

ಕನ್ನಡದ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಿ: ಕೋಡಿರಂಗಪ್ಪ

Published On :

ಚಿಕ್ಕಬಳ್ಳಾಪುರ: ಭಾಷೆ ಮಡಿವಂತಿಕೆ ಬಿಟ್ಟು ಎಲ್ಲಾ ಭಾಷೆಗಳನ್ನು ಕಲಿಯಬೇಕು. ಆದರೆ, ಮಾತೃಭಾಷೆ ಕನ್ನಡದ ಬಗ್ಗೆ ಹೆಚ್ಚಿನ ಒಲವನ್ನು ಬೆಳೆಸಿಕೊಳ್ಳಬೇಕೆಂದು ಸರ್ಕಾರಿ ಶಿಕ್ಷಣ ಮಹಾ ವಿದ್ಯಾಲಯದ ಪ್ರಾಚಾರ್ಯ ಕೋಡಿರಂಗಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಅಂಬೇಡ್ಕರ್ ಭವನದಲ್ಲಿ ಜೈ ಭೀಮ್ ಕನ್ನಡಿಗರ ಯುವ ವೇದಿಕೆ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಮಾತನಾಡಿ, ನಾಡಿಗೆ ಶಿವಶರಣರ ಜತೆಗೆ ರನ್ನ, ಪಂಪ, ಸಂಚಿಹೊನ್ನಮ್ಮರಂತಹ ಅನೇಕ ಮಹನೀಯರು ತಮ್ಮ ವಿಚಾರಧಾರೆಗಳಿಂದ ಕೊಡುಗೆ ನೀಡಿದ್ದಾರೆ. ಇವುಗಳನ್ನು ತಿಳಿದುಕೊಂಡು ಪ್ರಜ್ಞಾವಂತಿಕೆ ಬೆಳೆಸಿಕೊಳ್ಳಬೇಕು ಎಂದರು. ಸಾಹಿತಿ ಗೊಲ್ಲಹಳ್ಳಿ ಶಿವಪ್ರಸಾದ್ ಮಾತನಾಡಿ, ನಾಡು ನುಡಿಗೆ ಗೌರವ ನೀಡಿ ಉಳಿಸಿ ಬೆಳೆಸುವಂತಹ ಮನೋಭಾವನೆ ಹೊಂದಿರಬೇಕೆಂದರು. ಎಸ್‌ಎಸ್‌ಡಿ ರಾಜ್ಯಾಧ್ಯಕ್ಷ ಎಂ. ವೆಂಕಟಸ್ವಾಮಿ, ಜೈಭೀಮ್ ಕನ್ನಡಿಗರ ಯುವ ವೇದಿಕೆ ಜಿಲ್ಲಾಧ್ಯಕ್ಷ ಎಸ್. ಮುರಳಿಮೋಹನ್ ಮಾತನಾಡಿದರು. ರಸಪ್ರಶ್ನೆಗಳ ವಿಜೇತ ವಿದ್ಯಾರ್ಥಿಗಳಿಗೆ ವೇದಿಕೆಯ ವತಿಯಿಂದ ಪ್ರಶಸ್ತಿ ಪತ್ರ ಹಾಗೂ ಬಹುಮಾನ ನೀಡಲಾಯಿತು. ಸಮಾರಂಭಕ್ಕೂ ಮುನ್ನ ತಾಯಿ ಭುವನೇಶ್ವರಿ ಮೆರವಣಿಗೆಯನ್ನು ನಗರದ ಪ್ರಮುಖ ಬೀದಿಗಳಲ್ಲಿ ಕೈಗೊಳ್ಳಲಾಯಿತು. ದಸಂಸ (ಅಂಬೇಡ್ಕರ್ ವಾದ)ರಾಜ್ಯ ಸಂಘಟನಾ ಸಂಚಾಲಕ ಸು.ಧಾ. ವೆಂಕಟೇಶ್, ಕೆ.ಪಿ. ನವಮೋಹನ್, ವೆಂಕಟರಮಣ, ಜಯಂತ್, ಮಾನಸ ಆಸ್ಪತ್ರೆಯ ಆಡಳಿತಾಧಿಕಾರಿ ಮಧುಕರ್, ವಿಜಯಕುಮಾರ್, ವೆಂಕಟೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.