ಡಿಸಿಸಿ ಬ್ಯಾಂಕ್ 'ಕೈ'ವಶಕ್ಕೆ ಕಸರತ್ತು
ಕೋಲಾರ: ಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿಯನ್ನು ವಶಕ್ಕೆ ತೆಗೆದುಕೊಳ್ಳಲು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಮುಖಂಡರು ತೀವ್ರ ಕಸರತ್ತು ನಡೆಸಿದ್ದಾರೆ.
ನ.30 ಡಿಸಿಸಿ ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ಕಾಂಗ್ರೆಸ್ನ ಶ್ರೀರಾಮರೆಡ್ಡಿ, ವೆಂಕಟರೆಡ್ಡಿ, ನೀಲಕಂಠೇಗೌಡ ಹಾಗೂ ಜೆಡಿಎಸ್ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿ ಕಾಂಗ್ರೆಸ್ ಬೆಂಬಲದಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ತಯಾರಿ ಮಾಡಿಕೊಂಡಿರುವ ಬ್ಯಾಲಹಳ್ಳಿ ಎಂ. ಗೋವಿಂದಗೌಡರ ನಡುವೆ ಪೈಪೋಟಿ ಏರ್ಪಡಿಸಿದೆ.
ಶ್ರೀರಾಮರೆಡ್ಡಿ ಚಿಕ್ಕಬಳ್ಳಾಪುರ ಶಾಸಕ ಸುಧಾಕರರೆಡ್ಡಿ ಅವರ ಸಂಬಂಧಿಯಾಗಿದ್ದು ಅಧ್ಯಕ್ಷ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಈ ನಾಲ್ವರಲ್ಲಿ ಪೈಪೋಟಿ ಹೆಚ್ಚಾಗಿ ಏನಾದರೂ ಎಡವಟ್ಟು ಆದಲ್ಲಿ ಜೆಡಿಎಸ್ ಇದರ ಲಾಭ ಪಡೆಯಬಹುದೆಂಬ ಕಾರಣದಿಂದ ಕಾಂಗ್ರೆಸ್ ಮುಖಂಡರು ಎಚ್ಚರ ವಹಿಸಿ ಶನಿವಾರ ಬೆಳಿಗ್ಗೆ ರಹಸ್ಯ ಸ್ಥಳದಲ್ಲಿ ಸಭೆ ಸೇರಿ ಒಮ್ಮತ ಅಭ್ಯರ್ಥಿಯನ್ನು ಆಯ್ಕೆ ಮಾಡಲು ನಿರ್ಧರಿಸಿದ್ದಾರೆ.
ಈ ಸಭೆ ಗೌರಿಬಿನದನೂರು ಶಾಸಕ ಶಿವಶಂಕರರೆಡ್ಡಿ ಅಧ್ಯಕ್ಷತೆಯಲ್ಲಿ ನಡೆಯಲಿದ್ದು ಎರಡೂ ಜಿಲ್ಲೆಯ ಕಾಂಗ್ರೆಸ್ ಶಾಸಕರು, ಡಿಸಿಸಿ ಬ್ಯಾಂಕಿನ ನಿರ್ದೇಶಕರು ಹಾಗೂ ಪ್ರಮುಖ ಕಾಂಗ್ರೆಸ್ ಮುಖಂಡರು ಭಾಗವಹಿಸಿ ಡಿಸಿಸಿ ಬ್ಯಾಂಕ್ ಈ ಬಾರಿ ಕಾಂಗ್ರೆಸ್ ವಶವಾಗುವುದಕ್ಕೆ ಬೇಕಾದ ಎಲ್ಲಾ ರೀತಿಯ ಪ್ರಯತ್ನ ನಡೆಸಲಿದ್ದಾರೆ.
ಜೆಡಿಎಸ್ನ ನಾಗನಾಳ ಸೋಮಣ್ಣ ಅವರು ಹೈಕೋರ್ಟಿನಲ್ಲಿ ಸರ್ಕಾರದಿಂದ ಡಿಸಿಸಿ ಬ್ಯಾಂಕಿಗೆ ನಾಮಕರಣಗೊಂಡಿರುವ ಸರ್ಕಾರಿ ಅಧಿಕಾರಿಗಳಿಗೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಮತದಾನ ಮಾಡುವ ಹಕ್ಕು ನೀಡಬಾರದೆಂದು ಕೋರಿ ಅರ್ಜಿ ಸಲ್ಲಿಸಿದ್ದರು. ಶುಕ್ರವಾರ ಹೈಕೋರ್ಟಿನಲ್ಲಿ ವಾದ-ಪ್ರತಿವಾದ ನಡೆದ ಬಳಿಕ ನಾಮಕರಣ ಸದಸ್ಯರಿಗೆ ಓಟು ಮಾಡಲು ಅವಕಾಶ ನೀಡಿ ಈ ಮೂರು ಮತಗಳನ್ನು ಪ್ರತ್ಯೇಕ ಮತಪಟ್ಟಿಗೆಯಲ್ಲಿ ಹಾಕಿ, ಚುನಾವಣೆ ಮುಗಿದ ನಂತರ ಮತ ಎಣಿಕೆ ಮಾಡಬಾರದು ಅದೇ ರೀತಿ ಚುನಾಯಿತ 15 ನಿರ್ದೇಶರು ಚಲಾಯಿಸುವ ಮತಗಳನ್ನು ಪ್ರತ್ಯೇಕ ಮತಪೆಟ್ಟಿಗೆಯಲ್ಲಿ ಹಾಕಿಸಿ ಮತ ಎಣಿಕೆ ಮಾಡದಂತೆ ತಡೆಯಾಜ್ಞೆ ನೀಡಲಾಗಿದೆ.
ಮಾಜಿ ಸಚಿವ ಕೆ. ಶ್ರೀನಿವಾಸಗೌಡರು ಜೆಡಿಎಸ್ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿರುವ ಗೋವಿಂದಗೌಡರನ್ನು ಸೋಲಿಸಲು ಪಣ ತೊಟ್ಟಿದ್ದು ಇದಕ್ಕೆ ಜೆಡಿಎಸ್ನಿಂದ ಗೆದ್ದಿರುವ ನಿರ್ದೇಶಕರಲ್ಲಿ ಇಬ್ಬರ ವಿರೋಧವಿದ್ದು ಶನಿವಾರ ನಡೆಯುವ ಚುನಾವಣೆಯಲ್ಲಿ ಅಡ್ಡಮತದಾನದ ಮೂಲಕ ಪ್ರತಿಕಾರ ತೀರಿಸಿಕೊಳ್ಳುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಈ ಮಧ್ಯೆ ಗೋವಿಂದಗೌಡರ ಮನವೊಲಿಸಲು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿ ಆಯ್ಕೆಯಾಗಿರುವ ಕೋಲಾರದವರೇ ಆದ ಜಿ. ರಾಮರಾಜು ಪ್ರಯತ್ನ ಮುಂದುವರೆಸಿದ್ದಾರೆ ಆದರೂ ಗೌಡರ ರಾಜಿನಾಮೆಯಿಂದಾಗಿ ದಿಕ್ಕು ತೋಚದೆ ಕೈಚೆಲ್ಲಿ ಕುಳಿತಿದ್ದಾರೆನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

