ಕೋಲಾರ

ಗ್ರಾಪಂ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ರೈತರ ಮನವಿ

Published On :

ಚಿಂತಾಮಣಿ: ಗ್ರಾಮಗಳಲ್ಲಿ ಜನಸಾಮಾನ್ಯರ ಕೆಲಸಗಳಿಗೆ  ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಲೋಕಾಯುಕ್ತ ಅಧಿಕಾರಿ ಮಂಜೇಗೌಡರಿಗೆ ಮನವಿ ಸಲ್ಲಿಸಿದರು. ನಗರದ ಪ್ರವಾಸಿ ಮಂದಿರಕ್ಕೆ ಚಿಕ್ಕಬಳ್ಳಾಪುರದಿಂದ ಆಗಮಿಸಿದ ಲೋಕಾಯುಕ್ತ ಅಧಿಕಾರಿಗಳಿಗೆ ನೂರಾರು ರೈತರು ಮುತ್ತಿಗೆ ಹಾಕಿ ಗ್ರಾಪಂ ವ್ಯಾಪ್ತಿಯಲ್ಲಿ ಅಧಿಕಾರಿಗಳು ಜನರನ್ನು ದಿನ ನಿತ್ಯ ಪರದಾಡಿಸುತ್ತಿರುವ ಪಿಡಿಒ, ಕಾರ್ಯದರ್ಶಿಗಳು, ರೆವಿನ್ಯೂ ಇನ್ಸ್ಪೆಕ್ಟರ್ಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲವೆಂದು ಆರೋಪಿಸಿದರು. ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಎಸ್.ವಿ. ರಘುನಾಥರೆಡ್ಡಿ, ಕಾರ್ಯದರ್ಶಿ ಆರ್.ಎನ್. ಶ್ರೀನಾಥ್, ನಾರಾಯಣಸ್ವಾಮಿ, ಶ್ರೀರಾಮರೆಡ್ಡಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.