ಕೋಲಾರ

ಸಕ್ಕರೆ ಸಚಿವರ ರಾಜಿನಾಮೆಗೆ ಆಗ್ರಹಿಸಿ ಪ್ರತಿಭಟನೆ

Published On :

ಕ.ಪ್ರ.ವಾರ್ತೆ   ಕೋಲಾರ   ನ.29
ಬೆಳಗಾವಿಯಲ್ಲಿ ನಡೆಯುತ್ತಿರುವ ಆಧಿವೇಶನದ ಸಂದರ್ಭದಲ್ಲೇ ರೈತ ಆರಬಾವಿ ವಿಠಲ್ ಭೀಮಪ್ಪ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಸಕ್ಕರೆ ಸಚಿವ ಪ್ರಕಾಶ್ ಹುಕ್ಕೇರಿಯವರ ನಿರ್ಲಕ್ಷ್ಯವೇ ಕಾರಣವಾಗಿರುವುದರಿಂದ ಕೂಡಲೇ ಸಚಿವರನ್ನು ವಜಾಗೊಳಿಸಬೇಕು ಹಾಗೂ ಕಬ್ಬು ಬೆಳೆಗಾರರಿಗೆ ಕನಿಷ್ಠ 1 ಸಾವಿರ ರು.ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ನಗರದಲ್ಲಿ ಮೌನ ಪ್ರತಿಭಟನೆ ನಡೆಯಿತು. ರೈತ ಸಂಘದ ಕಾರ್ಯಕರ್ತರು ಯಾವುದೇ ಘೋಷಣೆ ಕೂಗದೆ ನಗರದ ಮಹಾತ್ಮಾಗಾಂಧಿ ಉದ್ಯಾನವನದಲ್ಲಿ ಮೌನವಾಗಿ ಪ್ರತಿಭಟನೆ ನಡೆಸಿ, ಕಬ್ಬು ಬೆಳೆಗಾರರ ಸಮಸ್ಯೆ ನಿವಾರಣೆ ಮಾಡದಿರುವುದೇ ರೈತನ ಆತ್ಮಹತ್ಯೆಗೆ ಕಾರಣವಾಗಿದೆ ಎಂದರು. ಘಟನೆಗೆ ನೈತಿಕ ಹೊಣೆ ಹೊತ್ತು ಸಕ್ಕರೆ ಸಚಿವ ಪ್ರಕಾಶ್ ಹುಕ್ಕೇರಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.
ಕೋಲಾರ ಜಿಲ್ಲಾ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲೂರು ಆಶ್ವಥ್ರೆಡ್ಡಿ, ಹಸಿರು ಸೇನೆ ಜಿಲ್ಲಾಧ್ಯಕ್ಷ ಕೋಟಿಗಾನಹಳ್ಳಿ ಗಣೇಶ್ ಗೌಡ ಮಾತನಾಡಿ, ರಾಜ್ಯದಲ್ಲಿ ನೀರಾವರಿ ಯೋಜನೆಗಳಾದ ಕಳಸ ಬಂಡೂರಿ, ಬಯಲು ಸೀಮೆಯ ಶಾಶ್ವತ ನೀರಾವರಿ ಯೋಜನೆ, ಕಬ್ಬು ಬೆಳೆಗಾರರಿಗೆ ಪ್ರತಿ ಟನ್ಗೆ 2,500 ರು. ಬೆಂಬಲ ಬೆಲೆ ಸೇರಿದಂತೆ ರೈತರ ಜಲ್ವಂತ ಸಮಸ್ಯೆಗಳನ್ನು ಪರಿಹರಿಸಲು ಕಳೆದ ನ.25ರಿಂದ ಬೆಳಗಾವಿಯ ಸುವರ್ಣ ಸೌಧ ಮುಂದೆ ನಡೆಯುತ್ತಿದ್ದ ರೈತರ ಪ್ರತಿಭಟನೆಯನ್ನು ನಿರ್ಲಕ್ಷಿಸಿದ್ದರಿಂದ ರೈತ ಬೇಸತ್ತು ಸಾವಿಗೆ ಶರಣಾಗಿದ್ದಾನೆ. ಸಕ್ಕರೆ ಕಾರ್ಖಾನೆಗಳ ಮರ್ಜಿಗೆ ಒಳಗಾಗಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಕ್ಕರೆ ಕಾರ್ಖಾನೆಗಳ ಮಾಲೀಕರ ಪರವಾಗಿ ಮೃಧುದೋರಣೆ ಅನುಸರಿಸಿರುವುದು ರೈತನ ಸಾವಿಗೆ ಕಾರಣವೆಂದು ಟೀಕಿಸಿದರು.
ಮೌನ ಪ್ರತಿಭಟನೆಯಲ್ಲಿ ರೈತ ಸಂಘದ ಗೌರವಾಧ್ಯಕ್ಷ ತೇರ್ನಹಳ್ಳಿ ವೆಂಕಟೇಶಗೌಡ, ಉಪಾಧ್ಯಕ್ಷ ಸಿ.ವಿ. ಪ್ರಭಾಕರ್, ಕೋಲಾರ ತಾಲೂಕು ಅಧ್ಯಕ್ಷ ಚಂದ್ರಪ್ಪ, ಕಾರ್ಯದರ್ಶಿ ಮುಜೀಭ್ ಪಾಷ, ಪ್ರಗತಿಪರ ರೈತ ನೆನಮನಹಳ್ಳಿ ಚಂದ್ರಶೇಖರ್, ಅಗ್ರಹಾರ ಸೋಮೆನಹಳ್ಳಿ ನಾರಾಯಣ ಸ್ವಾಮಿ, ಲಕ್ಷ್ಮೀಸಾಗರ ಕೃಷ್ಣಾರೆಡ್ಡಿ, ಗುಡ್ನಹಳ್ಳಿ ವೆಂಕಟೇಶಪ್ಪ, ಚಿಕ್ಕತಿರುಪತಿ ಸಿದ್ದಾರೆಡ್ಡಿ, ದೊಡ್ನಹಳ್ಳಿ ಕೃಷ್ಣಪ್ಪ, ಚುಂಚದೇನಹಳ್ಳಿ ನಾಗರಾಜ್, ತೇರ್ನಹಳ್ಳಿ ಆಂಜಿನಪ್ಪ, ದೊಡ್ಡಸಬ್ಬೇನಹಳ್ಳಿ ಕೃಷ್ಣಪ್ಪ, ಕೂತ್ತಂಡಹಳ್ಳಿ ನಾರಾಯಣಸ್ವಾಮಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.